ಲೋಕಾ ಚುನಾವಣೆ: ಫೆಬ್ರವರಿಗೇ ಬಿಜೆಪಿ ಪಟ್ಟಿ


Team Udayavani, Jan 5, 2019, 12:30 AM IST

bjpsymbol.jpg

ಬೆಂಗಳೂರು: ಲೋಕಸಭಾ ಚುನಾವಣೆಗೆ ಸಿದ್ಧತೆ ಚುರುಕುಗೊಳಿಸಿರುವ ಬಿಜೆಪಿಯು ಫೆಬ್ರವರಿ ಮೊದಲ ವಾರದಲ್ಲಿ ಏಕಕಾಲಕ್ಕೆ 200 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವ ಮೂಲಕ ಚುನಾವಣಾ ರಣಕಹಳೆ ಮೊಳಗಿಸಲು ಸಜ್ಜಾಗಿದೆ.

ರಾಜ್ಯದ 15 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಕೂಡ ಒಮ್ಮೆಗೆ ಪ್ರಕಟವಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಬಿಜೆಪಿಯ ಕೇಂದ್ರೀಯ ಚುನಾವಣಾ ಸಮಿತಿಯು ಕಾರ್ಯ ಪ್ರವೃತ್ತವಾಗಿದ್ದು, ಮುಂದಿನ ಲೋಕಸಭಾ ಚುನಾವಣೆಗೆ ಸೂಕ್ತ ವೇದಿಕೆ ಸಜ್ಜುಗೊಳಿಸುವ ಕಾರ್ಯದಲ್ಲಿ ನಿರತವಾಗಿದೆ.

ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಪೂರ್ವಭಾವಿ ಪ್ರಕ್ರಿಯೆಗಳನ್ನು ಬಿಜೆಪಿ ಈಗಾಗಲೇ ಆರಂಭಿಸಿದೆ. ಪಂಚ ರಾಜ್ಯಗಳ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ಸಾಕಷ್ಟು ಎಚ್ಚರ ವಹಿಸಿರುವ ರಾಷ್ಟ್ರೀಯ ನಾಯಕರು ಅಭ್ಯರ್ಥಿಗಳನ್ನು ಅಳೆದು ತೂಗಿ ಆಯ್ಕೆ ಮಾಡುವ ಪ್ರಕ್ರಿಯೆಯನ್ನು ತೆರೆಮರೆಯಲ್ಲೇ ಜಾಗರೂಕತೆಯಿಂದ ನಡೆಸಿದ್ದು, ಹೊಸ ಹುಮ್ಮಸ್ಸಿನಲ್ಲಿ ಚುನಾವಣಾ ರಣತಂತ್ರ ರೂಪಿಸುತ್ತಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಲೋಕಸಭಾ ಕ್ಷೇತ್ರವಾರು ಅಭ್ಯರ್ಥಿಗಳ ಆಯ್ಕೆ ಸಂಬಂಧ ಅಭಿಪ್ರಾಯ ಸಂಗ್ರಹಣೆ ಕಾರ್ಯ ಶುರುವಾಗಿದ್ದು, ಜ.15ರ ಹೊತ್ತಿಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಒಟ್ಟಾರೆ ಅಭಿಪ್ರಾಯಗಳನ್ನು ಆಧರಿಸಿ ರಾಜ್ಯ ನಾಯಕರು ವರಿಷ್ಠರಿಗೆ ವರದಿಯೊಂದನ್ನು ನೀಡಲಿದ್ದಾರೆ. ಅದರ ಆಧಾರದ ಮೇಲೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ ಎಂದು ಹೇಳಲಾಗಿದೆ.

ಒಮ್ಮೆಗೆ 200 ಅಭ್ಯರ್ಥಿ ಹೆಸರು ಪ್ರಕಟ
ಪಂಚ ರಾಜ್ಯಗಳ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆ ಹಾಗೂ ಕಾಂಗ್ರೆಸ್‌ ಸೇರಿದಂತೆ ಇತರೆ ಪಕ್ಷಗಳು ಮಹಾಘಟಬಂಧನ ಹೆಸರಿನಲ್ಲಿ ಒಂದುಗೂಡುತ್ತಿರುವ ಸಂದರ್ಭದಲ್ಲಿ ಪಕ್ಷದ ವರ್ಚಸ್ಸಿಗೆ ತುಸು ಧಕ್ಕೆಯಾದಂತಿದೆ ಎಂಬ ಮಾತುಗಳು ಸಣ್ಣದಾಗಿ ಕೇಳಿಬರುತ್ತಿದೆ. ಅದರ ಬೆನ್ನಲ್ಲೇ ಪ್ರತಿಪಕ್ಷಗಳ ಲೆಕ್ಕಾಚಾರವನ್ನೆಲ್ಲಾ ತಲೆಕೆಳಗೆ ಮಾಡುವ ರೀತಿಯಲ್ಲಿ ಒಮ್ಮೆಗೆ 200 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಿ ಪ್ರಕಟಿಸುವ ಮೂಲಕ ಚುನಾವಣೆಗೆ ಭರ್ಜರಿ ಪ್ರವೇಶ ನೀಡಲು ಸಜ್ಜಾಗಿದೆ‌ ಎಂದು ಉನ್ನತ ಮೂಲಗಳು ತಿಳಿಸಿವೆ.

ಫೆಬ್ರುವರಿ ಮೊದಲ ವಾರದಲ್ಲಿ ಘೋಷಣೆ ಸಾಧ್ಯತೆ
ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯು ಈಗಾಗಲೇ ರಾಜ್ಯವಾರು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಿ ಪರಿಶೀಲನೆ ನಡೆಸುತ್ತಿದೆ. ರಾಜ್ಯ ನಾಯಕರು ಸಲ್ಲಿಸಿದ ಮಾಹಿತಿ ಜತೆಗೆ ನಾನಾ ಮೂಲಗಳಿಂದ ಸಂಗ್ರಹಿಸಿದ ಮಾಹಿತಿಯನ್ನು ತಾಳೆ ಹಾಕಿ ಪರಿಶೀಲನೆ ನಡೆಸಲಿದೆ. ಬದಲಾದ ರಾಜಕೀಯ ಸನ್ನಿವೇಶ, ಜಾತಿ- ಸಮುದಾಯ- ಪ್ರಾದೇಶಿಕವಾರು ಧನಾತ್ಮಕ, ಋಣಾತ್ಮಕ ಅಂಶಗಳನ್ನು ಪರಿಗಣಿಸಿ ವಿಸ್ತೃತ ಚರ್ಚೆ ನಡೆಸಿ ನಂತರ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ. ಜ.11 ಹಾಗೂ 12ರಂದು ದೆಹಲಿಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಬಳಿಕ ಈ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸಿ ಫೆಬ್ರುವರಿ ಮೊದಲ ವಾರದಲ್ಲಿ ಏಕಕಾಲಕ್ಕೆ 200 ಅಭ್ಯರ್ಥಿಗಳ ಹೆಸರು ಪ್ರಕಟಿಸಿ ಪ್ರಚಾರ ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ಹೇಳಿವೆ.

ಒಟ್ಟಾರೆ ಲೋಕಸಭಾ ಚುನಾವಣೆಗೆ ಸಕಲ ರೀತಿಯಲ್ಲೂ ಸಜ್ಜುಗೊಳ್ಳುತ್ತಿರುವ ಕಮಲ ಪಾಳಯ ಏಕಕಾಲಕ್ಕೆ 200 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿ ದೇಶಾದ್ಯಂತ ಚುನಾವಣಾ ಕಣ ರಂಗೇರಿಸಲು ಅಣಿಯಾಗುತ್ತಿದೆ. ಪ್ರತಿಪಕ್ಷಗಳು ಮೈತ್ರಿ, ಮಹಾಘಟಬಂಧನ ಹೆಸರಿನಲ್ಲಿ ಸೀಟು ಹಂಚಿಕೆ, ಹೊಂದಾಣಿಕೆಗೆ ತಲೆ ಕೆಡೆಸಿಕೊಳ್ಳುತ್ತಿರುವ ಹಂತದಲ್ಲೇ ಮೊದಲ ಸುತ್ತಿನಲ್ಲಿ 200 ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಗೊಂದಲವಿಲ್ಲದಂತೆ ಪ್ರಚಾರ ನಡೆಸಲು ಲೆಕ್ಕಾಚಾರ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದಲ್ಲಿ 15 ಅಭ್ಯರ್ಥಿಗಳ ಹೆಸರು ಪ್ರಕಟ ನಿರೀಕ್ಷೆ
ಇದೇ ಪಟ್ಟಿಯಲ್ಲಿ ರಾಜ್ಯದ 15 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟವಾಗುವ ನಿರೀಕ್ಷೆ ಇದೆ. ಹಾಲಿ ಬಿಜೆಪಿ ಸಂಸದರಿರುವ ಬಹುಪಾಲು ಕ್ಷೇತ್ರಗಳಲ್ಲಿ ಸಣ್ಣಪುಟ್ಟ ಮಾರ್ಪಾಡುಗಳೊಂದಿಗೆ 15 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟವಾಗಲಿದೆ. ಮೈಸೂರು- ಕೊಡಗು ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳನ್ನು ಎರಡನೇ ಹಂತದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕೇಂದ್ರ ಸಚಿವ ಅನಂತ ಕುಮಾರ್‌ ಅವರ ಅಕಾಲಿಕ ಮರಣದಿಂದ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತಂತೆ ಅಭಿಪ್ರಾಯ ಸಂಗ್ರಹ ವೇಳೆ ತೇಜಸ್ವಿನಿ ಅನಂತ ಕುಮಾರ್‌, ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಅವರ ಹೆಸರು ಕೇಳಿಬಂದಿತ್ತು. ಆ ಹಿನ್ನೆಲೆಯಲ್ಲಿ ಈ ಬಗ್ಗೆ ಇನ್ನಷ್ಟು ಪರಿಶೀಲಿಸಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ವರಿಷ್ಠರು ಚಿಂತಿಸಿದ್ದಾರೆ. ಮೈಸೂರು- ಕೊಡಗು ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಎರಡನೇ ಹಂತದಲ್ಲಿ ಪ್ರಕಟಿಸಲು ಚಿಂತಿಸಲಾಗಿದೆ ಎನ್ನಲಾಗಿದೆ.

– ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

KEA: ಎಂಎಸ್ಸಿ ನರ್ಸಿಂಗ್‌: ಅರ್ಜಿ ಸಲ್ಲಿಕೆಗೆ ಡಿ. 2 ಕೊನೆ ದಿನ

KEA: ಎಂಎಸ್ಸಿ ನರ್ಸಿಂಗ್‌: ಅರ್ಜಿ ಸಲ್ಲಿಕೆಗೆ ಡಿ. 2 ಕೊನೆ ದಿನ

Karnataka: ಪಠ್ಯಪುಸ್ತಕಕ್ಕೆ ಬೇಡಿಕೆ ಸಲ್ಲಿಸಲು ಡಿ. 9 ಕಡೇ ದಿನ

Karnataka: ಪಠ್ಯಪುಸ್ತಕಕ್ಕೆ ಬೇಡಿಕೆ ಸಲ್ಲಿಸಲು ಡಿ. 9 ಕಡೇ ದಿನ

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.