ಶಾಲೆಗಳ ಮುಂದೆ ಶುಲ್ಕ ಫ‌ಲಕ ಕಡ್ಡಾಯ

Team Udayavani, Jan 5, 2019, 6:40 AM IST

highcourt.jpg

ಬೆಂಗಳೂರು: ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದ ವಿವರಗಳನ್ನೊಳಗೊಂಡ ಫ‌ಲಕವನ್ನು ಶಾಲೆಯ ಮುಂದೆ ಅಳವಡಿಸುವ ಸಂಬಂಧ ತನ್ನದೇ ಆದೇಶ ಪಾಲಿಸದ ಶಿಕ್ಷಣ ಇಲಾಖೆಯನ್ನು ಶುಕ್ರವಾರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌, ಜ.23ರೊಳಗೆ ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಮುಂದೆ ಫ‌ಲಕ ಅಳವಡಿಸಲು ತಾಕೀತು ಮಾಡಿತು.

ಈ ಕುರಿತಂತೆ ವಕೀಲ ಎನ್‌.ಪಿ.ಅಮೃತೇಶ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾ. ದಿನೇಶ್‌ ಮಹೇಶ್ವರಿ ಹಾಗೂ ನ್ಯಾ. ಅರವಿಂದ ಕುಮಾರ್‌ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು. ಈ ವೇಳೆ ಶುಲ್ಕದ ವಿವರಗಳ ಫ‌ಲಕ ಅಳವಡಿಸುವ ಕುರಿತ 2015ರ ಏ.13ರಂದು ಹೊರಡಿಸಿರುವ ಸುತ್ತೋಲೆಯಲ್ಲಿನ ಅಂಶಗಳನ್ನು ಪಾಲಿಸದ 2,129 ಶಾಲೆಗಳಲ್ಲಿ ಅದನ್ನು ಜಾರಿಗೊಳಿಸುವ ಬಗ್ಗೆ ಎಲ್ಲ ಉಪ ನಿರ್ದೇಶಕರು ಕ್ರಮ ಕೈಗೊಳ್ಳಬೇಕು.

ಆ ಬಗ್ಗೆ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಬೇಕು. ಇಲ್ಲದಿದ್ದರೆ ಜ.23ರಂದು ಶಿಕ್ಷಣ ಇಲಾಖೆಯ ಆಯುಕ್ತರು ಖುದ್ದು ಹಾಜರಾಗಿ ವಿವರಣೆ ನೀಡಬೇಕಾಗುತ್ತದೆ ಎಂದು ನ್ಯಾಯಪೀಠ ತಾಕೀತು ಮಾಡಿತು. ಸರ್ಕಾರದ ಪರ ವಕೀಲರು ವಾದ ಮಂಡಿಸಿ, ನಿಯಮದಂತೆ ಎಲ್ಲ ಶಾಲೆಗಳು ಕಡ್ಡಾಯವಾಗಿ ಶುಲ್ಕದ ಫಲಕ ಹಾಕುವಂತೆ ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ 15,706 ರಾಜ್ಯ ಪಠ್ಯಕ್ರಮ, 754 ಸಿಬಿಎಸ್‌ಇ ಮತ್ತು 277 ಐಸಿಎಸ್‌ಇ ಶಾಲೆಗಳಿವೆ. ಅವುಗಳಲ್ಲಿ 13,727 ರಾಜ್ಯಪಠ್ಯಕ್ರಮ, 639 ಸಿಬಿಎಸ್‌ಇ ಮತ್ತು 242 ಐಸಿಎಸ್‌ಇ ಶಾಲೆಗಳಲ್ಲಿ ಫಲಕಗಳನ್ನು ಅಳವಡಿಸಲಾಗಿದೆ. ಇನ್ನು 2129 ರಲ್ಲಿ ಫಲಕಗಳನ್ನು ಅಳವಡಿಸಿಲ್ಲ. ಆ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಗಾ ವಹಿಸುತ್ತಿದ್ದಾರೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಶಿಕ್ಷಣ ಇಲಾಖೆ ತಾನೇ ಹೊರಡಿಸಿದ ಆದೇಶವನ್ನು ಪಾಲಿಸುವುದಿಲ್ಲ ಎಂದರೆ ಹೇಗೆ? ಈ ವಿಚಾರದಲ್ಲಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ಶುಲ್ಕದ ವಿವರಗಳ ಫ‌ಲಕ ಅಳವಡಿಸದ ಯಾವ ಶಾಲೆಯೂ ಇರದಂತೆ ನೋಡಿಕೊಳ್ಳಿ ಎಂದು ಸರ್ಕಾರದ ಪರ ವಕೀಲರಿಗೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-bng

Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3

15-bishop

Bengaluru: ಬಿಷಪ್‌ ಕಾಟನ್‌ ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌: ಆತಂಕ

14-bng

Bengaluru: ಮನೆಯ ಬಾಲ್ಕನಿಯಲ್ಲಿ ಗಿಡಗಳ ಮಧ್ಯೆ ಗಾಂಜಾ ಬೆಳೆದಿದ್ದ ದಂಪತಿ ಬಂಧನ

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

16-bng

Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3

4

Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.