ಎಳ್ಳಮಾವಾಸ್ಯೆಗೆ ಖರೀದಿ ಭರಾಟೆ ಜೋರು..


Team Udayavani, Jan 5, 2019, 9:01 AM IST

bid-1.jpg

ಭಾಲ್ಕಿ: ಕಲ್ಯಾಣ ಕರ್ನಾಟಕದ ರೈತರ ಲಕ್ಷ್ಮೀ ಹಬ್ಬವೆಂದೇ ಹೆಸರಾದ ಎಳ್ಳಮಾವಾಸ್ಯೆ ಹಬ್ಬಕ್ಕೆ ತಾಲೂಕಿನಾದ್ಯಂತ ವಸ್ತುಗಳ ಖರೀದಿ ಭರಾಟೆ ಜೋರಾಗಿದೆ.

ಎಳ್ಳಮಾವಾಸ್ಯೆ ಹಬ್ಬದಾಚರಣೆಗೆ ರೈತರು ಹೊಲದಲ್ಲಿ ಕೊಂಪೆ ಮಾಡಿ ಲಕ್ಷ್ಮೀ ಮತ್ತು ಪಾಂಡವರ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿ ಹಬ್ಬದೂಟ ಸವಿಯುವ ಪರಿಪಾಠವುಂಟು. ಎರಡು ದಿನ ಮುಂಚಿತವಾಗಿ ಹಬ್ಬದ ಸಿದ್ಧತೆ ನಡೆಯುತ್ತದೆ. ತರಕಾರಿ ಸೋಸುವ (ಕಾಯಿಪಲ್ಯ) ದಿನದಂದು ಎಲ್ಲ ತರಕಾರಿ ಸ್ವತ್ಛಗೊಳಿಸಿ ಸಿದ್ಧ ಮಾಡಲಾಗುತ್ತದೆ.

ಗೆಳೆಯರು, ಸಂಬಂಧಿಕರಿಗೆ ಆಮಂತ್ರಣ: ಹೊಲದಲ್ಲಿ ಬೆಳೆ, ತರಕಾರಿ ಹಾಗೂ ಮಾರುಕಟ್ಟೆಯಲ್ಲಿ ಲಭ್ಯವಿರುವ ಅವರೆಕಾಯಿ, ಗಜ್ಜರಿ, ಹಸಿ ಮೆಣಸಿನಕಾಯಿ, ಮೆಂತೆ ಪಲ್ಯ, ಟೊಮ್ಯಾಟೊ, ಪಾಲಕ್‌, ಈರುಳ್ಳಿ ತಪ್ಪಲು, ಹಸಿ ಹುಣಸೆಕಾಯಿ ಸೇರಿದಂತೆ ವಿವಿಧ ಬಗೆಯ ಕಾಯಿ, ತರಕಾರಿ, ಕಾಳುಗಳನ್ನು ಸಂಗ್ರಹಿಸಿ ಎಲ್ಲವೂ ಸೇರಿಸಿ ಭಜ್ಜಿ- ಪಲೆ ಮಾಡಿ, ಸ್ನೇಹಿತರು ಹಾಗೂ ಸಂಬಂಧಿಕರನ್ನು ಊಟಕ್ಕೆ ಆಮಂತ್ರಿಸಿ ಎಲ್ಲರೊಂದಿಗೆ ಬೆರೆಯುವುದು ಹಬ್ಬದ ವಿಶೇಷ.
 
ಚರಗ ಚೆಲ್ಲಿ ಪ್ರಾರ್ಥನೆ: ಪಾಂಡವರು, ಲಕ್ಷ್ಮೀಗೆ ನೈವೇದ್ಯ ಅರ್ಪಿಸಿ, ಹಿಂಗಾರು ಬೆಳೆಗಳಿಗೆ ಯಾವುದೇ ರೋಗಬಾಧೆ ಬಾರದಿರಲಿ ಹಾಗೂ ಉತ್ತಮ ಫಸಲು ಬರಲೆಂದು ರೈತರು “ವಲಗೈ ವಲಗೈ ಚಾಲೋನ ಪಲಗೈ’ (ಯಾವ ತಾಯಿ ಕೊಟ್ಟಳು.. ಭೂಮಿ ತಾಯಿ ಕೊಟ್ಟಳು..) ಎನ್ನುವ ಘೋಷದೊಂದಿಗೆ ಹೊಲದ ತುಂಬ ಚರಗ ಚೆಲ್ಲಿ ಉತ್ತಮ ಫಸಲಿಗಾಗಿ ಭೂತಾಯಿಯನ್ನು ಪ್ರಾರ್ಥಿಸುತ್ತಾರೆ.

ಹೆಚ್ಚಾದ ಬೆಲೆ: ಪ್ರಸಕ್ತ ವರ್ಷ ಮುಂಗಾರು-ಹಿಂಗಾರು ಮಳೆ ಅಭಾವದಿಂದಾಗಿ ಈ ಬಾರಿ ತಾಲೂಕನ್ನು ಬರ ಪ್ರದೇಶ ಎಂದು ಘೋಷಿಸಲಾಗಿದೆ. ಮುಂಗಾರು-ಹಿಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಫಸಲು ಕಾಣದಿರುವುದರಿಂದ ತರಕಾರಿ, ಕಾಯಿಪಲ್ಯೆಗಳ ಬೆಲೆ ಗಗನಕ್ಕೇರಿದೆ. ಗಜ್ಜರಿ ಕೆ.ಜಿ- 40 ರೂ., ಮೆಂತೆಸೊಪ್ಪು -30 ರೂ. ಅವರೆಕಾಯಿ ಬೀಜ-80 ರೂ., ಹಸಿ ಮೆಣಸಿನಕಾಯಿ-40 ರೂ., ಹಸಿ ಹುಣಸೆಕಾಯಿ-40 ರೂ. ಮಾರಾಟವಾಗುತ್ತಿದ್ದರೂ ಹಬ್ಬದ ಉತ್ಸುಕತೆ, ಸಂಭ್ರಮಕ್ಕೆ ಕೊರತೆಯಾಗಿಲ್ಲ. ಒಟ್ಟಿನಲ್ಲಿ ತರಕಾರಿ ಬೆಲೆ ಎಷ್ಟೇ ಗಗನಕ್ಕೇರುತ್ತಿದ್ದರೂ ರೈತರು ಮಾತ್ರ ಎಲ್ಲ ರೀತಿಯ ತರಕಾರಿ ಖರೀದಿಸಿ ಹಬ್ಬದಾಚರಣೆಗೆ ಸಿದ್ಧರಾಗಿದ್ದಾರೆ.

„ಜಯರಾಜ ದಾಬಶೆಟ್ಟಿ

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.