ಶಾಸಕರ ಹೆಗಲಿಗೆ ಜವಾಬ್ದಾರಿ


Team Udayavani, Jan 6, 2019, 12:30 AM IST

hd-devegowda-800.jpg

ಬೆಂಗಳೂರು: ಲೋಕಸಭೆ ಚುನಾವಣೆಗೆ ಪಕ್ಷದ ಶಾಸಕರು ಹಾಗೂ ಪರಿಷತ್‌ ಸದಸ್ಯರು  ಹೊಣೆಗಾರಿಕೆ ವಹಿಸಿಕೊಳ್ಳಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಎರಡು ತಿಂಗಳು ಮಾತ್ರ ಇದ್ದು ತಳಮಟ್ಟದಿಂದ ಪಕ್ಷ ಸಂಘಟಿಸಿ ನಮ್ಮನ್ನು ನಾವು ಬಲಪಡಿಸಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಶಾಸಕರು ಹಾಗೂ ಪರಿಷತ್‌ ಸದಸ್ಯರಿಗೂ ಜವಾಬ್ದಾರಿ ನೀಡಲಾಗುವುದು ಎಂದು ಹೇಳಿದರು.

ಮಂಗಳವಾರದಿಂದ ಶಾಸಕರ ಸಭೆ ನಡೆಸಿ ಲೋಕಸಭೆ ಕ್ಷೇತ್ರಾವಾರು ಹೊಣೆಗಾರಿಕೆ ವಹಿಸಲಾಗುವುದು. ಅಧ್ಯಕ್ಷರಾದ ವಿಶ್ವನಾಥ್‌, ಪ್ರಚಾರ ಸಮಿತಿ ಅಧ್ಯಕ್ಷ ದತ್ತಾ ಜತೆಗೂಡಿ ನಾನೂ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರಿಗೆ ಸರ್ಕಾರ ಮುನ್ನಡೆಸುವ ಜವಾಬ್ದಾರಿ ಇದೆ. ಹೀಗಾಗಿ, ಅವರು ಪಕ್ಷದ ಕಡೆ ಹೆಚ್ಚು ಗಮನ ನೀಡಲು ಆಗುವುದಿಲ್ಲ. ನಾವು ಪಕ್ಷದ  ಕೆಲಸ ಮಾಡಬೇಕಾಗಿದೆ ಎಂದರು.

ನಾನು ರಾಷ್ಟ್ರೀಯ ಮಟ್ಟದಲ್ಲಿಯೂ ಪಾತ್ರ ವಹಿಸಬೇಕಾಗಿದೆ. ರಾಜ್ಯದಲ್ಲೂ ಪಕ್ಷ ಗಟ್ಟಿಗೊಳಿಸಬೇಕಾಗಿದೆ ಎಂದು ತಿಳಿಸಿದರು.
ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಬಗ್ಗೆ ನಾವು ಸಮಸ್ಯೆ ಮಾಡಿಕೊಳ್ಳಲು ಹೋಗುವುದಿಲ್ಲ. ಜೆಡಿಎಸ್‌ದು  ಈಗ ಎರಡು ಇದೆಯೋ, ಮೂರು ಇದೆಯೋ ಮತ್ತಷ್ಟು ಸಂಖ್ಯೆ ಹೆಚ್ಚಿಸಿಕೊಳ್ಳಬೇಕಾಗಿದೆ. ಕಾಂಗ್ರೆಸ್‌ ಮಿತ್ರರೂ ಉದಾರತೆ ತೋರಬೇಕು ಎಂದು ಹೇಳಿದರು.

ಈ ತಿಂಗಳಾಂತ್ಯಕ್ಕೆ ಸೀಟು ಹಂಚಿಕೆ ಸುಸೂತ್ರವಾಗಿ ಮುಗಿಯಲಿದೆ. ಸಿದ್ದರಾಮಯ್ಯ, ಕುಮಾರಸ್ವಾಮಿ, ದಿನೇಶ್‌ ಗುಂಡೂರಾವ್‌, ಪರಮೇಶ್ವರ್‌, ವಿಶ್ವನಾಥ್‌ ಎಲ್ಲರೂ ಮಾತನಾಡಿ ತೀರ್ಮಾನ ಮಾಡಲಿದ್ದಾರೆ. ನಾನೂ ರಾಹುಲ್‌ಗಾಂಧಿಯವರ ಜತೆ ಚರ್ಚಿಸುತ್ತೆನೆ ಎಂದು ತಿಳಿಸಿದರು. ಪಕ್ಷದ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌, ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್‌.ವಿ.ದತ್ತಾ, ಮುಖಂಡರಾದ ಜಫ್ರುಲ್ಲಾ ಖಾನ್‌, ಪ್ರಕಾಶ್‌, ಶಫೀವುಲ್ಲಾ ಉಪಸ್ಥಿತರಿದ್ದರು.

ಸ್ಪರ್ಧೆ  ಬಗ್ಗೆ ಸ್ಪಷ್ಟತೆ ಇಲ್ಲ
*ಲೋಕಸಭೆ ಚುನಾವಣೆಯಲ್ಲಿ ತಮ್ಮ ಸ್ಪರ್ಧೆ ಬಗ್ಗೆ ದೇವೇಗೌಡರು ಅಡ್ಡ ಗೋಡೆ ಮೇಲೆ ದೀಪ ವಿಟ್ಟಂತೆ ಮಾತನಾಡಿದ್ದಾರೆ. ನಮಗೆ ಲೋಕಸಭೆಯಲ್ಲಿ ಕೊಡುವುದು ಮೂರು ನಿಮಿಷ. ಅಲ್ಲಿ ಹೋಗಿ ಏನು ಮಾಡಬೇಕು. ಪಕ್ಷದ ಸಂಖ್ಯೆ ಹೆಚ್ಚಿಸಬೇಕಾಗಿದೆ. ಗೌಡರು ಮತ್ತೆ ಲೋಕಸಭೆಗೆ ಹೋಗಲು ಇಷ್ಟೆಲ್ಲಾ ಮಾತಾಡ್ತಾರೆ ಅಂತ ನೀವು ಎಂದುಕೊಳ್ಳಬಹುದು. ನನಗೆ ಅಧಿಕಾರ ಮುಖ್ಯವಲ್ಲ, ಅದಕ್ಕೆ ಅಂಟಿಕೊಂಡು ಕೂರುವುದೂ ಇಲ್ಲ ಎಂದು ಹೇಳಿದರು.

ಸರ್ಕಾರದಲ್ಲಿ ಸಣ್ಣ ಪುಟ್ಟ ವಿಚಾರಗಳ ಬಗ್ಗೆ ಬಹಿರಂಗವಾಗಿ ಮಾತನಾಡಿ ಸಮಸ್ಯೆ ಸೃಷ್ಟಿಸಿಕೊಳ್ಳುವುದು ಸರಿಯಲ್ಲ. ಅದು ದಿನೇಶ್‌ಗುಂಡೂರಾವ್‌ ಆಗಲಿ, ರೇವಣ್ಣ ಆಗಲಿ.  ಏನೇ ಸಮಸ್ಯೆ ಇದ್ದರೂ ಕುಳಿತು ಬಗೆಹರಿಸಿಕೊಳ್ಳಬೇಕು. ಸಮ್ಮಿಶ್ರ ಸರ್ಕಾರಕ್ಕೆ ಬಾಧಕವಾಗುವ    ರೀತಿ ಯಾರೂ ನಡೆದುಕೊಳ್ಳಬಾರದು. ಒಂದೆರಡು ದಿನಗಳಲ್ಲಿ ಜೆಡಿಎಸ್‌ ಪಾಲಿನ ನಿಗಮ ಮಂಡಳಿ ಅಧ್ಯಕ್ಷರು, ಸದಸ್ಯರ ನೇಮಕ ಮಾಡಲಾಗುವುದು.
– ಎಚ್‌.ಡಿ.ದೇವೇಗೌಡ

ಕನ್ನಡದ ಆಸ್ಮಿತೆ ಹಾಗೂ ಅಸ್ತಿತ್ವ ಉಳಿಸುವ ವಿಚಾರದಲ್ಲಿ ಕುಮಾರಸ್ವಾಮಿಯವರು ವಡ್ಡಾರಾಧನೆಯ ಸುಕುಮಾರಸ್ವಾಮಿಯೂ ಆಗುವುದಿಲ್ಲ, ಚಂಪಾ ಹೇಳಿದಂತೆ ಕುಠಾರಸ್ವಾಮಿಯೂ ಆಗುವುದಿಲ್ಲ, ಕಠೊರಸ್ವಾಮಿಯಾಗಲಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸುವ ಸಂಬಂಧ ಸರ್ಕಾರದ ತೀರ್ಮಾನ ಹೇಳಿದ್ದಾರೆ. ಜತೆಗೆ ಮತ್ತೂಮ್ಮೆ ಸಾಹಿತಿ ಚಿಂತಕರ ಜತೆ ಚರ್ಚಿಸುವುದಾಗಿಯೂ ಹೇಳಿದ್ದಾರೆ.
– ವೈ.ಎಸ್‌.ವಿ.ದತ್ತಾ, ಮಾಜಿ ಶಾಸಕ

ಟಾಪ್ ನ್ಯೂಸ್

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

Satish Jaraki

Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?

1-BP-Harish

BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

crime

Padubidri: ಸ್ಕೂಟಿಗೆ ಈಚರ್‌ ವಾಹನ ಢಿಕ್ಕಿ; ಸವಾರನಿಗೆ ಗಾಯ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.