ಸಂಶೋಧನೆ ಪ್ರಗತಿಗೆ ಸಿಎಸ್‌ಐಆರ್‌-ಜೆಎಸ್‌ಎಸ್‌ ವಿವಿ ಒಪ್ಪಂದ

Team Udayavani, Jan 6, 2019, 6:01 AM IST

m4-sanmshodane.jpg

ಮೈಸೂರು: ನಗರದ ಸಿಎಸ್‌ಐಆರ್‌- ಸಿಎಫ್ಟಿಆರ್‌ಐ ಸಂಸ್ಥೆಯು ಜೆಎಸ್‌ಎಸ್‌ ವಿಜ್ಞಾನ ಹಾಗೂ ತಂತ್ರಜ್ಞಾನ ವಿಶ್ವವಿದ್ಯಾಲಯದೊಂದಿಗೆ ಸಂಶೋಧನೆ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಒಡಂಬಡಿಕೆ ಮಾಡಿಕೊಂಡಿದೆ.

ಸುತ್ತೂರು ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಮ್ಮುಖದಲ್ಲಿ ಜೆಎಸ್‌ಎಸ್‌ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿ ಕುಲಪತಿ ಡಾ.ಬಿ.ಜಿ. ಸಂಗಮೇಶ್ವರ ಮತ್ತು ಸಿಎಫ್ಟಿಆರ್‌ಐ ನಿರ್ದೇಶಕ ಡಾ. ರಾಘವೇಂದ್ರರಾವ್‌ ಅವರು ಒಪ್ಪಂದಕ್ಕೆ ಸಹಿ ಹಾಕಿ, ಒಡಂಬಡಿಕೆಗಳನ್ನು ವಿನಿಮಯ ಮಾಡಿಕೊಂಡರು.

ಆರೋಗ್ಯ ರಕ್ಷಣೆಗೆ ಪೂರಕವಾದ ಆಹಾರ ತಯಾರಿಕೆ, ನ್ಯೂಟ್ರಸ್ಪುಟಿಕಲ್‌ ತಯಾರಿಕೆ ಇವುಗಳ ಮೇಲೆ ಮಿಷನ್‌ ಲರ್ನಿಂಗ್‌ ಮತ್ತು ಆರ್ಟಿಫಿಷಿಯಲ್‌ ಇಂಟಲಿಜೆನ್ಸ್‌ನ ಪ್ರಭಾವ- ಈ ವಿಷಯಗಳ ಮೇಲೆ ಸಂಶೋಧನೆ ಮಾಡಲು ಹಾಗೂ ಜಂಟಿ ಕಾರ್ಯ ಯೋಜನೆಗಳು, ಕಾರ್ಯಾಗಾರಗಳು, ಅಧ್ಯಾಪಕರು ಬೋಧನಾಭಿವೃದ್ಧಿ ಕಾರ್ಯಕ್ರಮಗಳ ಆಯೋಜನೆಗೆ ಈ ಒಡಂಬಡಿಕೆ ನೆರವಾಗಲಿದೆ.

ಜಾಗತಿಕ ಸ್ಥಾನ: ಈ ಸಂದರ್ಭದಲ್ಲಿ ಜೆಎಸ್‌ಎಸ್‌ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿ ಕುಲಪತಿ ಡಾ.ಬಿ.ಜಿ. ಸಂಗಮೇಶ್ವರ ಮಾತನಾಡಿ, ಆವಿಷ್ಕಾರ ಮತ್ತು ಸಂಶೋಧನಾ ಪ್ರಗತಿ ಈ ಒಡಂಬಡಿಕೆಯಿಂದ ಸಾಧ್ಯ. ಎಐಸಿಟಿ ಮತ್ತು ಯುಜಿಸಿ ಸಲಹೆಯಂತೆ ಭಾರತದ ವಿಶ್ವವಿದ್ಯಾಲಯಗಳು ಸಂಶೋಧನಾ ಕೇಂದ್ರಗಳಾಗಿ ಮಾರ್ಪಾಡಾಗುವುದರಿಂದ ಜಾಗತಿಕ ಮಟ್ಟದಲ್ಲಿ ಸ್ಥಾನ ಗಳಿಸಲು ಸಹಕಾರಿ ಆಗಲಿದೆ ಎಂದು ತಿಳಿಸಿದರು.

ಲಾಭದಾಯಕ: ಸಿಎಫ್ಟಿಆರ್‌ಐ ನಿರ್ದೇಶಕ ಡಾ. ರಾಘವೇಂದ್ರರಾವ್‌ ಮಾತನಾಡಿ, ಸಿಎಫ್ಟಿಆರ್‌ಐ ಮತ್ತು ಜೆಎಸ್‌ಎಸ್‌ ವಿಜ್ಞಾನ ಮತ್ತು ತಾಂತ್ರಿಕ ವಿವಿ ಒಡಂಬಡಿಕೆಯಿಂದ ಉತ್ತಮ ಸಂಶೋಧನಾ ಅವಕಾಶಗಳಿಗೆ ನೆರವಾಗಲಿದೆ. ಈ ಸಹಯೋಗವು ನೂತನ ಕೈಗಾರಿಕೆಗಳ ಅಗತ್ಯತೆ ಮತ್ತು ಸಮಾಜಕ್ಕೆ ಲಾಭದಾಯಕವಾಗಿರುತ್ತದೆ ಎಂದು ಹೇಳಿದರು.

ಈ ವೇಳೆ ಸಿಎಫ್ಟಿಆರ್‌ಐ ವಿಜ್ಞಾನಿಗಳಾದ ಡಾ. ಕೇಶವಪ್ರಕಾಶ್‌, ಡಾ. ಚೌಹಾನ್‌, ಡಾ. ಸತ್ಯೇಂದ್ರ ರಾವ್‌, ಮಣಿಲಾಲ್‌, ಜೆಎಸ್‌ಎಸ್‌ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, ಜೆಎಸ್‌ಎಸ್‌ ವಿಜ್ಞಾನ ಮತ್ತು ತಾಂತ್ರಿಕ ವಿವಿ ಕುಲಸಚಿವ ಡಾ.ಕೆ.ಎಸ್‌.ಲೋಕೇಶ್‌, ಮಲ್ಲಿಕಾರ್ಜುನ ಆರಾಧ್ಯ, ಎಸ್‌ಜೆಸಿಇ ಪ್ರಾಂಶುಪಾಲ ಡಾ.ಟಿ.ಎನ್‌. ನಾಗಭೂಷಣ್‌, ಡಾ.ಪಿ. ನಾಗೇಶ್‌, ಡಾ.ಎನ್‌. ಹರಪ್ರಸಾದ್‌, ಡಾ.ಎಂ. ಪ್ರದೀಪ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.