ಸಾಲಮನ್ನಾ ದಾಖಲೆಗಳ ಪರಿಶೀಲನೆ, ದೃಢೀಕರಣ

Team Udayavani, Jan 6, 2019, 6:01 AM IST

m3-raitara.jpg

ತಿ.ನರಸೀಪುರ: ರೈತರ ಸಾಲಮನ್ನಾ ಸಂಬಂಧ ಹೆಸರು, ಆಧಾರ್‌ ಕಾರ್ಡ್‌, ಪಡಿತರ ಚೀಟಿ ಹಾಗೂ ಪಹಣಿಗಳಲ್ಲಿ ವ್ಯತ್ಯಾಸ ಕಂಡು ಬಂದಿರುವ ಹಿನ್ನೆಲೆಯಲ್ಲಿ ಪಟ್ಟಣದ ಎಂಡಿಸಿಸಿ ಬ್ಯಾಂಕ್‌ನಲ್ಲಿ ತಹಶೀಲ್ದಾರ್‌ ಪರಿಶೀಲನೆ ನಡೆಸಿದರು.

ರಾಜ್ಯ ಸರ್ಕಾರ ಜಾರಿಗೊಳಿಸಿರುವ  ರೈತರ ಸಾಲಮನ್ನಾ ಯೋಜನೆಯಡಿ ತಾಲೂಕಿನಲ್ಲಿ 8,424 ರೈತರು ಒಳಪಡಲಿದ್ದಾರೆ. ಈ ಪೈಕಿ 6 ಸಾವಿರ ರೈತರ ಸಾಲ ಮನ್ನಾ ಆಗಿದ್ದು, 2 ಸಾವಿರಕ್ಕೂ ಹೆಚ್ಚು ರೈತರ ಸಾಲ ಮನ್ನಾ ಆಗುವಲ್ಲಿ ತೊಂದರೆಯಾಗಿದೆ.

ರೈತರ ಹೆಸರು, ಆಧಾರ್‌ಕಾರ್ಡ್‌, ಪಡಿತರ ಚೀಟಿಯಲ್ಲಿ ಸರಿಯಾಗಿದ್ದು, ಪಹಣಿಯಲ್ಲಿ ವ್ಯತ್ಯಾಸ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಪಹಣಿಯಲ್ಲಿನ ರೈತರ ಹೆಸರು ಹಾಗೂ ಆಧಾರ್‌ ಕಾರ್ಡ್‌, ಪಡಿತರ ಚೀಟಿಯಲ್ಲಿರುವ ರೈತ ಒಬ್ಬರೇ ಎಂದು ದೃಢೀಕರಿಸುವ ಉದ್ದೇಶದಿಂದ ಕಂದಾಯಾಧಿಕಾರಿಗಳು ಬ್ಯಾಂಕ್‌ನಲ್ಲಿ ರೈತರ ಅರ್ಜಿಗಳನ್ನು ಪರಿಶೀಲಿಸಿ ಹೆಬ್ಬೆಟ್ಟು ನೀಡುವ  ಮೂಲಕ ದೃಢೀಕರಿಸಿದರು.

 ತಹಶೀಲ್ದಾರ್‌ ಎಚ್‌.ಎಸ್‌.ಪರಮೇಶ್‌ ಮಾತನಾಡಿ, ಹೆಸರಿನ ವ್ಯತ್ಯಾಸ ಆಗಿರುವುದರಿಂದ ಕೆಲ ರೈತರು ಸಾಲಮನ್ನಾ ಅವಕಾಶದಿಂದ ವಂಚಿತರಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂತಹ ರೈತರನ್ನು ಗುರುತಿಸಿ ದೃಢೀಕರಿಸಲಾಗುತ್ತಿದೆ ಎಂದು ತಿಳಿಸಿದರು.

ಎಂಡಿಸಿಸಿ ಬ್ಯಾಂಕ್‌ ಮೇಲ್ವಿಚಾರಕ ರಾಜಪ್ಪ ಮಾತನಾಡಿ, ತಾಲೂಕಿನಲ್ಲಿ ಸಹಕಾರ ಬ್ಯಾಂಕ್‌ಗಳ ಮೂಲಕ 8,424 ರೈತರು ಸಾಲ ಪಡೆದಿದ್ದರು.  ಅದರಲ್ಲಿ 6 ಸಾವಿರ ರೈತರ ದಾಖಲೆಗಳ ಸಮರ್ಪಕವಾಗಿದ್ದರಿಂದ ಸಾಲಮನ್ನಾ ಆಗಿದೆ. ಕೆಲವು ರೈತರ ದಾಖಲೆಗಳಲ್ಲಿರುವ ಹೆಸರು ವ್ಯತ್ಯಾಸವಿದ್ದ ಕಾರಣ ಕಂದಾಯಾಧಿಕಾರಿಗಳು ಬ್ಯಾಂಕಿಗೆ ಬಂದು ಪರಿಶೀಲಿಸಿ ದೃಢೀಕರಿಸಿದ ಬಳಿಕ ಸಾಲ ಮನ್ನಾ ಆಗಲಿದೆ ಎಂದು ತಿಳಿಸಿದರು.

ಈ ವೇಳೆ ವ್ಯವಸ್ಥಾಪಕ ಹುಚ್ಚನಾಯಕ, ಬ್ಯಾಂಕ್‌ ಅಧಿಕಾರಿ ಮೇಘನಾ, ಮುಖ್ಯಕಾರ್ಯ ನಿರ್ವಾಹಣಾಧಿಕಾರಿಗಳಾದ ಕಾವೇರಿಪುರ ಕೆ.ಪಿ. ಗೋಂದರಾಜು, ಕುರುಬೂರು ಬಸವಣ್ಣ, ಗರ್ಗೆಶ್ವರಿ, ಸಾದಿಕ್‌ ಹುಸೇನ್‌, ದೊಡ್ಡೇಬಾಗಿಲು ಮಹಾದೇವಸ್ವಾಮಿ, ಕಸಬಾ ಪಿಎಸಿಸಿ ಅಧ್ಯಕ್ಷ ಮಲ್ಲಣ್ಣ, ಮಹದೇವಸ್ವಾಮಿ ಇತರರಿದ್ದರು.

ಟಾಪ್ ನ್ಯೂಸ್

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.