ಚಂ”ಧನ” ಮೇಲೆ ಇನ್ನು ಇ.ಡಿ. ತನಿಖೆ?
Team Udayavani, Jan 7, 2019, 3:15 AM IST
ಬೆಂಗಳೂರು: ಕನ್ನಡ ಚಲನಚಿತ್ರರಂಗದಲ್ಲಿ ಅನಧಿಕೃತ ಹಣಕಾಸು ವ್ಯವಹಾರ ನಡೆಯುತ್ತಿದ್ದ ಗುಮಾನಿ ಮೇಲೆ ಏಕಕಾಲದಲ್ಲಿ ಸ್ಯಾಂಡಲ್‌ವುಡ್ ನಟರು ಮತ್ತು ನಿರ್ಮಾಪಕರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಒಟ್ಟಾರೆಯಾಗಿ 109 ಕೋಟಿ ರೂ. ದಾಖಲೆ ರಹಿತ ಆದಾಯ ಪತ್ತೆ ಮಾಡಿದೆ. ಜತೆಗೆ 11 ಕೋಟಿ ರೂ. ಮೌಲ್ಯದ ಅಘೋಷಿತ ಅಸ್ತಿ ಜಪ್ತಿ ಮಾಡಿಕೊಂಡಿದೆ.
ಕಲಾವಿದರು ಮತ್ತು ನಿರ್ಮಾಪಕರ ಬಳಿ ಪತ್ತೆಯಾದ ಕೋಟ್ಯಂತರ ರೂ. ಮೌಲ್ಯದ ದಾಖಲೆಯಿಲ್ಲದ ಹಾಗೂ ಚಿತ್ರಮಂದಿರಗಳಲ್ಲಿ ಸಂಗ್ರಹವಾದ ಹಣವನ್ನು ಬೇರೆಡೆ ವರ್ಗಾಯಿಸಿರುವುದಕ್ಕೆ ಕೆಲವು ಸಾಕ್ಷ್ಯಾಧಾರಗಳು ಸಿಕ್ಕಿವೆ. ಈ ಮಾಹಿತಿಯನ್ನು ಸಂಬಂಧಿಸಿದ ಕಂದಾಯ ಮತ್ತು ಇತರ ಆರ್ಥಿಕ ತನಿಖಾ ಸಂಸ್ಥೆಗಳ ಜತೆ ಹಂಚಿಕೊಳ್ಳಲಾಗುವುದು.
ತೆರಿಗೆ ವಂಚಿಸಿರುವ ನಟ, ನಿರ್ಮಾಪಕರನ್ನು ಶೀಘ್ರ ವಿಚಾರಣೆಗೆ ಒಳಪಡಿಸಲಾಗುವುದು. ತೆರಿಗೆ ಬಾಕಿ ಇರಿಸಿರುವ ನಟ, ನಿರ್ಮಾಪಕರು ಕೂಡಲೇ ಪಾವತಿಸಲು ಸೂಚಿಸಲಾಗುವುದು ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಆದಾಯ ತೆರಿಗೆ ಇಲಾಖೆ, ಡಿಆರ್‌ಐ (ಕಂದಾಯ ಜಾರಿ ನಿರ್ದೇಶನಾಲಯ) ಅಥವಾ ಇ.ಡಿ. (ಜಾರಿ ನಿರ್ದೇಶನಾಲಯ) ಜತೆ ಮಾಹಿತಿ ವಿನಿಮಯ ಮಾಡಿ ಕೊಳ್ಳಲಿದೆ. ಇದು ಸ್ಯಾಂಡಲ್‌ವುಡ್‌ನ ನಟ, ನಿರ್ಮಾಪಕರ ಪಾಲಿಗೆ ಇನ್ನಷ್ಟು ಕಗ್ಗಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಜ.3ರಂದು ಬೆಳಗ್ಗೆ 6 ಗಂಟೆಯಿಂದ ಜ.5ರ ಸಂಜೆ ವರೆಗೆ ನಟರಾದ ಶಿವರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್, ಸುದೀಪ್, ಯಶ್ ಹಾಗೂ ರಾಧಿಕಾ ಪಂಡಿತ್ ಮನೆ, ನಿರ್ಮಾಪಕರಾದ ರಾಕ್‌ಲೈನ್ ವೆಂಕಟೇಶ್, ವಿಜಯ್ ಕಿರಗಂದೂರು ಹಾಗೂ ಜಯಣ್ಣ ಮನೆ, ವಿಧಾನಪರಿಷತ್ ಸದಸ್ಯ, ನಿರ್ಮಾಪಕ ಸಿ.ಆರ್. ಮನೋಹರ್ ಮನೆ ಮತ್ತು ಕಚೇರಿಗಳ ಮೇಲೆ ಕರ್ನಾಟಕ, ಗೋವಾ ವಿಭಾಗಗಳ 180 ಮಂದಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದರು.
ಆ ವೇಳೆ ನಟರು, ನಿರ್ಮಾಪಕರಿಗೆ ಸೇರಿದ 11 ಕೋಟಿ ರೂ. ಮೌಲ್ಯದ ಅಘೋಷಿತ ಆಸ್ತಿ ಪತ್ತೆಯಾಗಿದ್ದು, ಈ ಪೈಕಿ 2.85 ಕೋಟಿ ರೂ. ನಗದು ಮತ್ತು 25.3 ಕೆ.ಜಿ. ಚಿನ್ನಾಭರಣ ವಶಪಡಿಸಿಕೊಂಡಿದೆ. ಅಲ್ಲದೆ, ನಿಗದಿತ ಸಮಯದಲ್ಲಿ ಆದಾಯ ತೆರಿಗೆ ಕಟ್ಟದೆ ಒಟ್ಟಾರೆ 109 ಕೋಟಿ ರೂ. ದಾಖಲೆರಹಿತ ಆದಾಯ ಹೊಂದಿರುವುದು ಪತ್ತೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಆದರೆ ವೈಯಕ್ತಿಕವಾಗಿ ಯಾವುದೇ ನಟ, ನಿರ್ಮಾಪಕರ ಮನೆಯಲ್ಲಿ ಎಷ್ಟು ಪ್ರಮಾಣದಲ್ಲಿ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿವೆ ಎಂಬುದನ್ನು ಐಟಿ ಉಲ್ಲೇಖೀಸಿಲ್ಲ.
ಐಟಿ ಇಲಾಖೆ ಮನವಿ
ಕನ್ನಡ ಚಿತ್ರರಂಗ ಮತ್ತು ಮನೋರಂಜನ ಕ್ಷೇತ್ರದ ಎಲ್ಲ ವ್ಯವಹಾರಗಳನ್ನು ದಾಖಲೆಗಳಲ್ಲಿ ನಮೂದಿಸಬೇಕು. ಜತೆಗೆ ಬಾಕಿ ಉಳಿಸಿಕೊಂಡಿರುವ ತೆರಿಗೆಯನ್ನು ಕೂಡಲೇ ಪಾವತಿಸಬೇಕು ಎಂದು ಆದಾಯ ತೆರಿಗೆ ಇಲಾಖೆ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
MUST WATCH
ಹೊಸ ಸೇರ್ಪಡೆ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.