ಸದಾಶಿವ ವರದಿ ಜಾರಿಗೆ ಕೇಂದ್ರಕ್ಕೆ ಒತ್ತಡ ಹೇರಿ
Team Udayavani, Jan 7, 2019, 6:30 AM IST
ಕಲಬುರಗಿ: ನ್ಯಾ| ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಕಾಂಗ್ರೆಸ್ ಹಿರಿಯ ಮುಖಂಡರಾದ ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಬಿಜೆಪಿ ಮುಖಂಡ, ಮಾಜಿ ಸಚಿವ ಕೆ.ಬಿ. ಶಾಣಪ್ಪ ಒತ್ತಾಯಿಸಿದರು.
ನಗರದ ಡಾ| ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ರವಿವಾರ ರಾಜ್ಯ ಮಾತಂಗ ವಿಕಾಸ ಸಮಿತಿ ಹಮ್ಮಿಕೊಂಡಿದ್ದ “ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ; ಸಾಮಾಜಿಕ ನ್ಯಾಯದ ಪರಿಕಲ್ಪನೆ’ ಎನ್ನುವ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿಗಳು ಒಳ ಮೀಸಲಾತಿ ಕಲ್ಪಿಸುವ ನ್ಯಾ| ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಕಳೆದ ಎರಡು ದಶಕಗಳಿಂದಲೂ ಹೋರಾಟ ನಡೆಸಲಾಗುತ್ತಿದೆ. ವರದಿ ಜಾರಿಗೆ ಇದುವರೆಗೂ ಸರ್ಕಾರಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸದಾಶಿವ ಆಯೋಗದ ವರದಿ ಜಾರಿ ತರುವ ನಿಟ್ಟಿನಲ್ಲಿ ಸಂಸದ ಖರ್ಗೆ ಹಾಗೂ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ವರದಿ ಜಾರಿಯಾಗುವವರೆಗೂ ಸಮುದಾಯದ ಹೋರಾಟ ಮುಂದುವರಿಸಬೇಕೆಂದು ಹೇಳಿದರು.
ಕ್ಷೀಣಿಸಿದ ರಾಜಕೀಯ ಬಲ: ಈ ಹಿಂದೆ ವಿಧಾನಸಭೆಯಲ್ಲಿ ಮಾದಿಗ ಸಮುದಾಯದ ಶಾಸಕರ ಸಂಖ್ಯೆ 15ರಿಂದ 20 ಇರುತ್ತಿತ್ತು. ಈಗ ಶಾಸಕರ ಸಂಖ್ಯೆ ಕೇವಲ ಮೂರರಿಂದ ನಾಲ್ಕಕ್ಕೆ ಕುಸಿದಿದ್ದು, ಮಾದಿಗ ಸಮುದಾಯದ ರಾಜಕೀಯ ಬಲ ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಸಮುದಾಯದ ಹೊಸ ನಾಯಕರ ಸಂಖ್ಯೆ ಹೆಚ್ಚಾಗಬೇಕಿದೆ ಎಂದು ಹೇಳಿದರು.
ವಿಧಾನಸಭೆ ಮತ್ತು ಸಂಸತ್‌ನಲ್ಲಿ ಸಮುದಾಯದ ನಾಯಕರ ಬಲ ಇದ್ದಾಗ ಮಾತ್ರ ಯಾವುದೇ ಹೋರಾಟಕ್ಕೆ ಜಯ ಲಭಿಸುತ್ತಿದೆ. ಆದ್ದರಿಂದ ಹೊಸ ಜನನಾಯಕರ ಹುಟ್ಟಬೇಕೆಂದು ಆಶಯ ವ್ಯಕ್ತಪಡಿಸಿದರು.
ವಿಚಾರ ಸಂಕಿರಣದಲ್ಲಿ “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಉಗಮ; ಸಾಮಾಜಿಕ ಒಳನೋಟ’, “ಮಾದಿಗ ಜನಾಂಗದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಸ್ಥಿತಿ-ಗತಿಗಳು’, “ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣದ ಔಚಿತ್ಯತೆ ಮತ್ತು ಸಾಮಾಜಿಕ ನ್ಯಾಯ’ ಹಾಗೂ “ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಹೋರಾಟದ ತಲ್ಲಣಗಳು ಹಾಗೂ ಸವಾಲುಗಳು’ ಎಂಬ ಗೋಷ್ಠಿಗಳು ಜರುಗಿದವು. ಹಂಪಿಯ ಮಾತಂಗ ಮಹರ್ಷಿ ಆಶ್ರಮದ ಪೀಠಾಧಿಪತಿ ಪೂರ್ಣಾನಾಂದ ಭಾರತೀ ಸ್ವಾಮೀಜಿ ವಿಚಾರ ಸಂಕಿರಣದ ಸಾನ್ನಿಧ್ಯ ವಹಿಸಿದರು.
ಅಂಬಾರಾಯ ಬೆಳಕೋಟ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಎಐಸಿಸಿ ಸದಸ್ಯೆ ಚಂದ್ರಿಕಾ ಪರಮೇಶ್ವರ, ರಾಜ್ಯ ಮಾದಿಗ ಸಂಘಟನೆಗಳ ಮಹಾಸಭಾ ಅಧ್ಯಕ್ಷ ಅಂಬಣ್ಣ ಅರೋಲಿ, ಸಹ ಸಂಚಾಲಕ ಮುತ್ತಣ್ಣ ಬೆಣ್ಣೂರು, ಬಾಬು ಜಗಜೀವನ ರಾಮ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಭೀಮಣ್ಣ ಬಿಲ್ಲವ, ಮುಖಂಡರಾದ ಲಿಂಗರಾಜ ತಾರಫೈಲ್, ಗೋಪಾಲ ಕಟ್ಟಿಮನಿ, ಶಾಮ ನಾಟೀಕಾರ, ಹಣಮಂತ ಬಿರಾಳ, ದಶರಥ ಕಲಗುರ್ತಿ,ಅಂಬಾರಾಯ ಚಲಗೇರಿ ಹಾಗೂ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.