ಮಂಗಾನವರಗೆ ರಾಜ್ಯ ಪ್ರಶಸ್ತಿ
Team Udayavani, Jan 7, 2019, 10:49 AM IST
ವಿಜಯಪುರ: ಶಿಕ್ಷಕ ರಾಗಿದ್ದುಕೊಂಡು ಕೃಷಿಯಲ್ಲಿ ಆಮೂಲ್ಯ ಸಾಧನೆ ಮಾಡಿರುವ ಶಿವಾನಂದ ಮಂಗಾನವರಗೆ ಅದರ್ಶ
ರೈತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಬಸವನಬಾಗೇವಾಡಿ ತಾಲೂಕಿನ ಯಂಭತ್ನಾಳ ಗ್ರಾಮದ ಶಿವಾನಂದ ಮಂಗಾನವರ ಕೃಷಿ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ್ದನ್ನು ಪರಿಗಣಿಸಿ ಬೆಂಗಳೂರಿನಲ್ಲಿ ಕೃಷಿ ತಂತ್ರಜ್ಞರ ಸಂಸ್ಥೆ ಕೇಂದ್ರ ಕಚೇರಿಯಲ್ಲಿ ನಡೆದ ರೈತರ ದಿನಾಚರಣೆ ಹಾಗೂ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪದ್ಮಭೂಷಣ ಪ್ರಶಸ್ತಿ ವಿಜೇತ ಖ್ಯಾತ ಕೃಷಿ ವಿಜ್ಞಾನಿ ಡಾ| ಎಂ.ಮಹಾದೇವಪ್ಪ ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ಬೆಳೆ ಆಯೋಗದ ಅಧ್ಯಕ್ಷ ಪ್ರಕಾಶ ಕಮ್ಮರಕಡಿ, ಕೃಷಿ ಇಲಾಖೆ ರಾಜ್ಯ ನಿರ್ದೇಶಕ ಬಿ.ವೈ. ಶ್ರೀನಿವಾಸ, ಕೃಷಿ ತಂತ್ರಜ್ಞರ ಸಂಸ್ಥೆ ರಾಜ್ಯಾಧ್ಯಕ್ಷ ಡಾ| ಎಂ.ಮಲ್ಲಪ್ಪ, ಉಪಾಧ್ಯಕ್ಷ ಡಾ| ಬಿ.ಈಶ್ವರಪ್ಪ, ಕಾರ್ಯದರ್ಶಿ ಕೆ. ಕೃಷ್ಣಪ್ಪ, ಕೃಷಿ ಸಚಿವರ ಸಲಹೆಗಾರ ಡಾ| ಎ.ಬಿ. ಪಾಟೀಲ ಸೇರಿದಂತೆ ಇತರರು ಭಾಗವಹಿಸಿದ್ದರು.
ಸದರಿ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿಜಯಪುರ ಘಟಕದ ಕೃಷಿ ತಂತ್ರಜ್ಞರ ಸಂಸ್ಥೆ ಕಾರ್ಯದರ್ಶಿ ಡಾ| ಆರ್.ಬಿ. ಬೆಳ್ಳಿ
ಹಾಗೂ ಬಿ.ಬಿ. ಬಿರಾದಾರ, ಡಾ| ಅಶೋಕ ಸಜ್ಜನ ಹಾಜರಿದ್ದು ಶಿವಾನಂದ ಅವರನ್ನು ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲ ಜಿಲ್ಲೆ ಪ್ರಗತಿಪರ ರೈತರು ಕೃಷಿ ತಂತ್ರಜ್ಞರು, ಸಂಶೋಧಕರು ಹಾಗೂ ವಿಶೇಷ ಆಹ್ವಾನಿತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.