ನಿರ್ದೇಶನದತ್ತ ಶಿವ ಮಂಜು
Team Udayavani, Jan 9, 2019, 9:02 AM IST
ಇಲ್ಲಿಯವರೆಗೆ ಸುಮಾರು 70ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯ ಪಾತ್ರಗಳು, ಪೋಷಕ ಪಾತ್ರಗಳಲ್ಲಿ ಅಭಿನಯಿಸಿ ನಟನಾಗಿ ಗುರುತಿಸಿಕೊಂಡಿರುವ ಶಿವಮಂಜು ಈಗ ನಿರ್ದೇಶಕನ ಕ್ಯಾಪ್ ಧರಿಸುವ ಉತ್ಸಾಹದಲ್ಲಿದ್ದಾರೆ. ಹೌದು, ಸುಮಾರು ಹನ್ನೆರಡು ವರ್ಷಗಳ ಕಾಲ ಸಹಾಯಕ ನಿರ್ದೇಶಕನಾಗಿ, ನಟನಾಗಿ ನಿರ್ದೇಶಕ ಜೋಗಿ ಪ್ರೇಮ್ ಅವರ ಜೊತೆಗಿದ್ದ ಶಿವಮಂಜು ಈಗ ಮಹಿಳಾ ಪ್ರಧಾನ ಕಥಾಹಂದರದ ಚಿತ್ರವೊಂದನ್ನು ನಿರ್ದೇಶಿಸಲು ತಯಾರಿ ನಡೆಸುತ್ತಿದ್ದಾರೆ.
“ನಟನಾಗುವ ಆಸೆಯಿಂದ ಚಿತ್ರರಂಗಕ್ಕೆ ಬಂದೆ ಆಮೇಲೆ ನಟನೆಯ ಜೊತೆ ಜೊತೆಗೆ “ಜೋಗಿ’ ಪ್ರೇಮ್ ಅವರ ಜೊತೆ ನಿರ್ದೇಶನ ವಿಭಾಗದಲ್ಲೂ ಒಂದಷ್ಟು ಕೆಲಸ ಮಾಡಿ ಅನುಭವ ಪಡೆದುಕೊಂಡೆ. ಈಗ ನಾನು ಕಣ್ಣಾರೆ ಕಂಡ, ನನ್ನ ಮನಸ್ಸನ್ನು ಘಾಸಿಗೊಳಿಸಿದ ಘಟನೆಯೊಂದನ್ನು ಆಧರಿಸಿ ಸಿನಿಮಾ ಮಾಡುತ್ತಿದ್ದೇನೆ. ಇದೊಂದು ಮಹಿಳಾ ಪ್ರಧಾನ ಚಿತ್ರ. ಹೆಣ್ಣು ಭ್ರೂಣ ಹತ್ಯೆಯ ಸುತ್ತ ಚಿತ್ರದ ಕಥೆ ಸಾಗುತ್ತದೆ. ನಮ್ಮ ನಡುವೆ ನಡೆಯುವ, ನಮ್ಮ ಮನೆಗಳಲ್ಲಾಗುವ ಹಲವು ವಿಷಯಗಳು ಈ ಸಿನಿಮಾದಲ್ಲಿರಲಿವೆ’ ಎಂದು ತಮ್ಮ ಚೊಚ್ಚಲ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾರೆ ಶಿವ ಮಂಜು.
ಸದ್ಯ ಈ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಅಂತಿಮ ಹಂತದಲ್ಲಿದ್ದು, ಚಿತ್ರದ ಟೈಟಲ್, ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಶಿವ ಮಂಜು ಅವರ ಕಥೆಯನ್ನು ಕೇಳಿ ಮೆಚ್ಚಿಕೊಂಡಿರುವ ಮೊದಲಿನಿಂದಲೂ ಚಿತ್ರರಂಗದ ಕಡೆಗೆ ಆಸಕ್ತಿಯನ್ನು ಬೆಳೆಸಿಕೊಂಡಿರುವ ಪ್ರಶಾಂತ್ ಮತ್ತು ಮಂಜೇಶ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮುಂಬರುವ ಏಪ್ರಿಲ್‌ಗೆ ಚಿತ್ರ ಸೆಟ್ಟೇರಲಿದ್ದು, ಇದೇ ವರ್ಷಾಂತ್ಯಕ್ಕೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದ್ದಾರೆ ಶಿವ ಮಂಜು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.