ಬಿಎಸ್‌ವೈ,ಶೆಟ್ಟರ್,ಅಶೋಕ್ ವಿರುದ್ಧದ ಅರ್ಜಿ ಇತ್ಯರ್ಥ
Team Udayavani, Jan 10, 2019, 12:55 AM IST
ಬೆಂಗಳೂರು: ನಗರದ ಆರ್.ಎಂ.ವಿ ಬಡಾವಣೆ 2ನೇ ಹಂತದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಬಿಡಿಎ ವಶಪಡಿಸಿಕೊಂಡಿದ್ದ 14 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ವಿರುದ್ಧ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.
ಪ್ರಕರಣದ ಕುರಿತು ಮರು ತನಿಖೆ ನಡೆಸಲು ಭ್ರಷ್ಟಚಾರ ನಿಗ್ರಹ ದಳಕ್ಕೆ (ಎಸಿಬಿ)ನಿರ್ದೇಶಿಸುವಂತೆ ಕೋರಿ ನಿವೃತ್ತ ವಿಂಗ್
ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿರುವ ಪಿಐಎಲ್, ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾ.ಅರವಿಂದ್ ಕುಮಾರ್ ಅವರಿದ್ದ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂತು.
ವಿಚಾರಣೆ ವೇಳೆ ಬಿಡಿಎ ಪರ ವಕೀಲರು ಆಕ್ಷೇಪಣೆ ಸಲ್ಲಿಸಿ, ವಿವಾದಿತ ಜಮೀನನ್ನು ಆರ್.ಅಶೋಕ್ 2011ರಲ್ಲೇ ಬಿಡಿಎಗೆ ದಾನಪತ್ರ ಮಾಡಿಕೊಟ್ಟಿದ್ದು, ಸದ್ಯ ಜಮೀನು ಬಿಡಿಎ ವಶದಲ್ಲೇ ಇದೆ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.
ಅಲ್ಲದೆ, ಈ ಪ್ರಕರಣದ ಬಗ್ಗೆ ಈಗಾಗಲೇ ತನಿಖೆ ನಡೆಸಿರುವ ಲೋಕಾಯುಕ್ತ ಬಿ-ರಿಪೋರ್ಟ್ ಸಲ್ಲಿಸಿದೆ. ವಿಶೇಷ ಸನ್ನಿವೇಶಗಳನ್ನು ಹೊರತುಪಡಿಸಿ ಈ ರೀತಿ ಒಂದು ತನಿಖಾ ಸಂಸ್ಥೆ ಮುಕ್ತಾಯಗೊಳಿಸಿದ ಪ್ರಕರಣವನ್ನು ಮತ್ತೂಂದು ತನಿಖಾ ಸಂಸ್ಥೆ ಅದನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಎಸಿಬಿ ಹೇಳಿತು.
ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿದಾರರು ಆಕ್ಷೇಪಿಸಿದ್ದ ಜಮೀನು ಈಗಾಗಲೇ ಬಿಡಿಎ ವಶದಲ್ಲಿದ್ದು, ಅರ್ಜಿಯು ಸಾರ್ವಜನಿಕ ಹಿತಾಸಕ್ತಿಯ ವ್ಯಾಪ್ತಿಯನ್ನು ಕಳೆದುಕೊಂಡಿದೆ.
ಒಂದು ವೇಳೆ ಅಗತ್ಯವೆನಿಸಿದರೆ ಅರ್ಜಿದಾರರು ಕಾನೂನಿನಲ್ಲಿ ಲಭ್ಯವಿರುವ ಪರ್ಯಾಯ ಮಾರ್ಗದ ಮೂಲಕ ಸಮಸ್ಯೆಗೆ
ಪರಿಹಾರ ಕಂಡುಕೊಳ್ಳಬಹುದು ಎಂದು ಅವಕಾಶ ನೀಡಿ ಅರ್ಜಿ ಇತ್ಯರ್ಥಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.