ಮಠಗಳಿಂದ ಸಮಾಜಮುಖೀ ಕಾರ್ಯ


Team Udayavani, Jan 10, 2019, 11:19 AM IST

ray-2.jpg

ದೇವದುರ್ಗ: ಮಠಗಳು ಧಾರ್ಮಿಕ ಕಾರ್ಯದ ಜತೆಗೆ ಶಿಕ್ಷಣ ನೀಡುತ್ತ ಮತ್ತು ಸಾಮೂಹಿಕ ವಿವಾಹದಂತಹ ಸಮಾಜಮುಖೀ ಕಾರ್ಯ ಮಾಡುತ್ತಿರುವದು ಶ್ಲಾಘನೀಯ ಎಂದು ನೀಲಗಲ್‌ ಬೃಹನ್ಮಠದ ಡಾ| ಪಂಚಾಕ್ಷರಿ ಶಿವಾಚಾರ್ಯರು ಹೇಳಿದರು.

ಸಮೀಪದ ಯರಮರಸ್‌ ಗ್ರಾಮದಲ್ಲಿ ನಡೆದ ಲಿಂ| ವೀರಭದ್ರಯ್ಯ ತಾತನವರ 32ನೇ ಪುಣ್ಯಾರಾಧನೆ ಮಹೋತ್ಸವ, ಜಾತ್ರೆ ಮತ್ತು ಸಾಮೂಹಿಕ ವಿವಾಹ ಸಮಾರಂಭದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಇಂದು ಧರ್ಮ ಉಳಿದಿದ್ದರೆ ಅವು ಮಠ, ಸ್ವಾಮೀಜಿಗಳಿಂದ ಮಾತ್ರ. ಆದರೆ ಕೆಲ ಬುದ್ದಿಗೇಡಿಗಳು ಧರ್ಮದ ವಿರುದ್ದ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಭಕ್ತರು ಅಂತ ಮಾತುಗಳಿಗೆ ಕಿವಿಗೊಡದೇ ಧಾರ್ಮಿಕ ಕಾರ್ಯದಲ್ಲಿ ತೊಡಗಬೇಕು ಎಂದರು.

ಹಣವಂತರು ದುಂದುವೆಚ್ಚ ಮಾಡಿ ವಿವಾಹ ಕಾರ್ಯಕ್ರಮ ಮಾಡುವುದನ್ನು ಬಿಟ್ಟು ಇಂತಹ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸಿ ಇತರರಿಗೆ ಮಾದರಿ ಮತ್ತು ಆರ್ಥಿಕವಾಗಿ ನೆರವಾಗಬೇಕು. ಮದುವೆಗೆ ಎಷ್ಟೇ ಹಣ ವ್ಯಯಿಸಿದರೂ ಸ್ವಾಮೀಜಿಗಳ ಆಶೀರ್ವಾದ ಸಿಗುವುದು ದುರ್ಲಭ. ಇಲ್ಲಿ ಅನೇಕ ಶ್ರೀಗಳ ಸಮ್ಮುಖದಲ್ಲಿ ಮದುವೆ ಆಗುತ್ತಿರುವ ನವದಂಪತಿ ಬಾಳು ಸುಖಮಯವಾಗುತ್ತದೆ. ನವದಂಪತಿಗಳು ತಂದೆ-ತಾಯಿ, ಅತ್ತೆ-ಮಾವನವರನ್ನು ಗೌರವದಿಂದ ಕಾಣಬೇಕು ಎಂದು ಕಿವಿಮಾತು ಹೇಳಿದರು.

ಚುಕ್ಕಿಸೂಗಪ್ಪ ಸಾಹುಕಾರ ಜಿ.ಲೋಕರೆಡ್ಡಿ ಮಾತನಾಡಿ, ಧಾರ್ಮಿಕ ಕ್ಷೇತ್ರದ ಸನ್ನಿಧಿಯಲ್ಲಿ ನೂತನ ಜೀವನಕ್ಕೆ ಕಾಲಿಟ್ಟಿರುವ ವರ ದುಶ್ಚಟಗಳಿಗೆ ದಾಸರಾಗದಂತೆ ವಧು ನೋಡಿಕೊಳಬೇಕು. ದುಶ್ಚಟಗಳಿಂದ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಳ್ಳುತ್ತದೆ. ದಂಪತಿಗಳು ಹೆತ್ತವರನ್ನು ಕೀಳಾಗಿ ಕಾಣದೆ ಮಕ್ಕಳಂತೆ ನೋಡಿಕೊಳಬೇಕು ಎಂದರು.

ಭೀಮನಗೌಡ ನಾಗಡದಿನ್ನಿ, ಚರಬಸಯ್ಯತಾತ, ಬೆಟ್ಟಪ್ಪತಾತ ಜಾಟಗಲ್‌, ಶಶಿಧರಸ್ವಾಮಿ ಹೆಗ್ಗಡದಿನ್ನಿ, ಮಂತ್ರಜಾತಯ್ಯಸ್ವಾಮಿ, ವೈ. ಅಮರೇಶಪ್ಪಗೌಡ, ಸಿದ್ರಾಮಪ್ಪಗೌಡ, ಅಜಪ್ಪಗೌಡ, ಬಸವನಗೌಡ, ಶರಣಬಸವ, ವೀರನಗೌಡ, ಸುನೀಲಕುಮಾರ ಅಂಗಡಿ, ಶರಣಬಸವ, ನಾಗರಾಜಗೌಡ ಡಿ.ಎನ್‌.ವೈ. ಉಮೇಶ ಗೌಡ ನಾಗಡದಿನ್ನಿ, ಹನುಮಂತ್ರಾಯ ಬಾಡಲ್‌, ಪಿಎಸ್‌ಐ ಸಾಬಯ್ಯ ನಾಯಕ ಇದ್ದರು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.