ರೈತರ ಸಮಸ್ಯೆಗೆ ಸ್ಪಂದಿಸದಿದ್ದರೆ ಹೋರಾಟ
Team Udayavani, Jan 10, 2019, 11:35 AM IST
ಶಹಾಪುರ: ರೈತರು ಮತ್ತು ಕಾರ್ಮಿಕರನ್ನು ಕಡೆಗಣಿಸಿದ ಪರಿಣಾಮ ಇತ್ತೀಚೆಗೆ ಪಂಚ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿತು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇನ್ನೂ ಬುದ್ಧಿ ಕಲಿತಿಲ್ಲವೆಂದು ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆಯ ಮುಖಂಡ ಮಲ್ಲಿಕಾರ್ಜುನ ಸತ್ಯಂಪೇಟೆ ಆಕ್ರೋಶ ವ್ಯಕ್ತಪಡಿಸಿದರು.
ಬುಧವಾರ ನಗರದಲ್ಲಿ ಬಿಸಿಯೂಟ, ಅಂಗನವಾಡಿ, ಆಶಾ ಕಾರ್ಯಕರ್ತರು ಸೇರಿದಂತೆ ಹಲವು ಕಾರ್ಮಿಕ ಸಂಘಟನೆಗಳು, ರೈತ ಸಂಘಟನೆಗಳ ನೇತೃತ್ವದಲ್ಲಿ ಅಖೀಲ ಭಾರತ್ ಬಂದ್ ಕರೆ ಹಿನ್ನೆಲೆಯಲ್ಲಿ ನಡೆದ ಎರಡನೇ ದಿನ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಇಲ್ಲ. ರೈತರ ಸಾಲ ಮನ್ನಾ ಹೆಸರಲ್ಲಿ ಆಶ್ವಾಸನೆಗಳೇ ನಡೆದಿದ್ದು, ಕಾರ್ಮಿಕರ ರಕ್ಷಣೆಯನ್ನು ಮರೆತು ಬಿಟ್ಟಿದ್ದಾರೆ. ಬರುವ ದಿನಗಳಲ್ಲಿ ಕಾರ್ಮಿಕರ, ರೈತರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಹೋರಾಟ ಇನ್ನೂ ಹೆಚ್ಚಿನ ಸ್ವರೂಪ ಪಡೆಯಲಿದೆ ಎಂದರು.
ಎರಡನೇ ದಿನ ಪ್ರತಿಭಟನೆ ಬಿಸಿ ಸ್ವಲ್ಪ ಕಡಿಮೆಯಾಗಿತ್ತು ಎನ್ನಬಹುದು. ಎಂದಿನಂತೆ ಶಾಲಾ ಕಾಲೇಜು ಜರುಗಿದವು. ಅಂಗಡಿ ಮುಂಗಟ್ಟು ಸೇರಿದಂತೆ ಯಾವುದೇ ಸಂಚಾರ ಸುಗಮವಾಗಿತ್ತು.
ಈ ಸಂದರ್ಭದಲ್ಲಿ ಕ.ಪ್ರಾಂ.ಕೃ.ಕೂ. ಸಂಘ ಜಿಲ್ಲಾಧ್ಯಕ್ಷ ದಾವಲಸಾಬ ನದಾಫ್, ಅಂಗನವಾಡಿ ನೌಕರರ ಸಂಘ ಅಧ್ಯಕ್ಷ ಬಸಲಿಂಗಮ್ಮ ನಾಟೇಕಾರ, ಸಾರಿಗೆ ನೌಕರರ ಸಂಘ ಅಧ್ಯಕ್ಷ ಮಹಾದೇವಪ್ಪ ಪಾಟೀಲ, ಕಟ್ಟಡ ಕಾರ್ಮಿಕರ ಸಂಘ ಸಂಘಟನಾ ಕಾರ್ಯದರ್ಶಿ ಸೈದಪ್ಪ ಎಚ್.ಪಿ, ಮುಖಂಡ ಮಲ್ಲಯ್ಯ ಪೋಲಂಪಲ್ಲಿ, ಮಡಿವಾಳಮ್ಮ ಹೂಗಾರ, ಭೀಮರಡ್ಡಿ, ಕಟ್ಟಡ ಕಾರ್ಮಿಕರ ಸಂಘ ಮಹ್ಮದ್ ಯುಸೂಫ್, ತಾಲೂಕು ಅಧ್ಯಕ್ಷ ಸವಿತಾ ಪೂಜಾರಿ, ಯಮನಮ್ಮ ಕಸನ್, ಶಿವಾನಂದಸ್ವಾಮಿ ಗೋಗಿ, ದೇವಕ್ಕಿ, ಚಂದ್ರರಡ್ಡಿ ಇಬ್ರಾಹಿಂಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.