ಬೆಳಗ್ಗೆ ಬಂದ್-ಮಧ್ಯಾಹ್ನ ಸಹಜಸ್ಥಿತಿ
Team Udayavani, Jan 10, 2019, 11:41 AM IST
ಕುರುಗೋಡು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಎರಡನೇ ದಿನವೂ ಕರೆ ನೀಡಿದ್ದ ಭಾರತ್ ಬಂದ್‌ಗೆ ಕುರುಗೋಡು ಪಟ್ಟಣದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ಬೆಳಗ್ಗೆಯಿಂದ ಪಟ್ಟಣದ ಅಂಗಡಿ ಮುಂಗಟ್ಟು, ಬೀದಿ ಬದಿ ವ್ಯಾಪಾರ ಮಳಿಗೆಗಳನ್ನು ಪ್ರತಿಭಟನಾಕಾರರು ಮನವೊಲಿಸಿ ಬಂದ್ ಮಾಡಿದ್ದರು. ಮಧ್ಯಾಹ್ನದ ನಂತರ ಎಂದಿನಂತೆ ವ್ಯಾಪಾರ ವಹಿವಾಟು ನಡೆದವು. ತರಕಾರಿ ಮಾರುಕಟ್ಟೆ ನಿರಾಂತಕವಾಗಿ ಸಾಗಿತ್ತು. ಬ್ಯಾಂಕ್, ಸರ್ಕಾರಿ ಕಚೇರಿಗಳು, ಚಿತ್ರಮಂದಿರಗಳು, ಪೆಟ್ರೋಲ್ ಬಂಕ್, ಖಾಸಗಿ ಬ್ಯಾಂಕ್‌ಗಳು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಕಾರ್ಯನಿರ್ವಹಿಸಿದವು. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಸಾರಿಗೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಖಾಸಗಿ ವಾಹನಗಳ ಸಂಚಾರ ಎಂದಿನಂತೆ ನಡೆಯಿತು.
ಪ್ರತಿಭಟನಾ ಮೆರವಣಿಗೆ: ವಿವಿಧ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ವಿ.ಎಸ್.ಶಿವಶಂಕರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಾಳಿ ಬಸವರಾಜ, ತಾಲೂಕ ಅಧ್ಯಕ್ಷ ಹಂದ್ಯಾಳ ತಿಮ್ಮಪ್ಪ ವದ್ದಟ್ಟಿ, ತಾಲೂಕ ಕಾರ್ಯದರ್ಶಿ ಎನ್.ಸೋಮಪ್ಪ, ಸಿಐಟಿಯು ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಹುಲೇಪ್ಪ, ಗೀತಮ್ಮ, ವಿಮಲ, ಅನ್ನಪೂರ್ಣ, ಲಲಿತಮ್ಮ, ಕೆ.ನಾಗರತ್ನಮ್ಮ, ನಾಗಮ್ಮ, ಉಮಾದೇವಿ, ಎ.ಮಂಜುನಾಥ್, ದುರುಗಪ್ಪ, ಜಯರಾಮ, ಎಚ್.ಯಂಕಮ್ಮ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.