ಬಿಡಿಎ ಅಧ್ಯಕ್ಷರಾಗಿ ಸೋಮಶೇಖರ್ ಅಧಿಕಾರ ಸ್ವೀಕಾರ
Team Udayavani, Jan 11, 2019, 6:40 AM IST
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್‌ಗುರುವಾರ ಅಧಿಕಾರ ಸ್ವೀಕರಿಸಿದರು. ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ಅವರು, ಸೋಮಶೇಖರ್‌ಗೆ ಹೂಗುತ್ಛ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಬಿಡಿಎ ಸದಸ್ಯನಾಗಿ ಕೆಲಸ ಮಾಡಿದ ಅನುಭವ ನನಗಿದೆ. ಇದರೊಂದಿಗೆ ಬಿಡಿಎ ಆಡಳಿತ ವೈಖರಿ ಬಿಡಿಎ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿಯಿದ್ದು, ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಬಿಡಿಎ ವತಿಯಿಂದ ಹಲವಾರು ಬಡಾವಣೆಗಳನ್ನು ನಿರ್ಮಿಸಲಾಗಿದೆ. ಆ ಪೈಕಿ ಕೆಲವು ಬಡಾವಣೆಗಳಲ್ಲಿ ಸಮಸ್ಯೆಗಳಿವೆ. ಅವುಗಳ ಕುರಿತು ಸಂಪೂರ್ಣ ಮಾಹಿತಿಯಿದ್ದು, ಅವುಗಳನ್ನು ಪರಿಹರಿಸಿ ಗ್ರಾಹಕರಿಗೆ ಹಂಚಿಕೆ ಮಾಡಲಾಗುವುದು. ಇದರೊಂದಿಗೆ ಬಿಡಿಎ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಉಕ್ಕಿನ ಸೇತುವೆ ಕುರಿತು ಚರ್ಚೆ: ತೀವ್ರ ವಿರೋಧಕ್ಕೆ ಕಾರಣವಾಗಿರುವ ಉಕ್ಕಿನ ಸೇತುವೆ ಕಾಮಗಾರಿಯನ್ನು ಜಾರಿಗೊಳಿಸುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸೋಮಶೇಖರ್, ಉಕ್ಕಿನ ಸೇತುವೆ ನಿರ್ಮಾಣ, ಸಾಧಕ-ಬಾಧಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಲುವು ತಿಳಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.