ನ್ಯಾಕ್ ಮಾನ್ಯತೆ ಅವಶ್ಯಕ
Team Udayavani, Jan 11, 2019, 6:57 AM IST
ದಾವಣಗೆರೆ: ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಕಾರ್ಯಾಗಾರ ಹೆಚ್ಚು ಸಹಕಾರಿಯಾಗಲಿವೆ ಎಂದು ಬೆಂಗಳೂರಿನ ನ್ಯಾಕ್ (ಎನ್‌ಎಎಸಿ) ಅಧಿಕಾರಿ ಡಾ| ವಿನಿತ ಸಾಹು ಅಭಿಪ್ರಾಯಪಟ್ಟಿದ್ದಾರೆ.
ಗುರುವಾರ, ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಐಕ್ಯೂಎಸಿ, ನ್ಯಾಕ್ ಕಮಿಟಿ ಜಂಟಿಯಾಗಿ ಆಯೋಜಿಸಿದ್ದ ರಿವೈಸ್ಡ್ ಫ್ರೇಮ್‌ವರ್ಕ್ ಆಫ್ ನ್ಯಾಕ್ ಅಕ್ರಿಡಿಟೇಷನ್ ಆಫ್ ನಾನ್ ಅಕ್ರಿಡಿಟೆಡ್ ಆ್ಯಂಡ್ ಟು ಬಿ ಅಕ್ರಿಡಿಟೆಡ್ ಇನ್ಸಿಟಿಟ್ಯೂಷನ್ಸ್ ಆಫ್ ದಾವಣಗೆರೆ ಯುನಿವರ್ಸಿಟಿ ವಿಷಯ ಕುರಿತು ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಗಾರದಲ್ಲಿ ಮಾತನಾಡಿದ ಅವರು, ನ್ಯಾಕ್ ಮಾನ್ಯತೆ ಪಡೆದ ಸಂಸ್ಥೆಗಳು ಮತ್ತು ಇನ್ನೂ ಮಾನ್ಯತೆ ಪಡೆಯದ ಸಂಸ್ಥೆಗಳು ನೀಡುತ್ತಿರುವ ಉನ್ನತ ಶಿಕ್ಷಣದ ಗುಣಮಟ್ಟ ಹಾಗೂ ಅದರಲ್ಲಿ ಮಾಡಬಹುದಾದ ಬದಲಾವಣೆಗಳ ಕುರಿತು ತಿಳಿಯುವುದು ಅವಶ್ಯಕ. ಕಾರ್ಯಗಾರಗಳಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಗುವುದು ಎಂದರು.
ದಾವಣಗೆರೆ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ| ಬಸವರಾಜ ಬಣಕಾರ ಮಾತನಾಡಿ, ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಎಲ್ಲಾ ಸಂಸ್ಥೆಗಳ ಸಹಕಾರ ಅಗತ್ಯ. ಅಭಿವೃದ್ಧಿ ವಿಚಾರದಲ್ಲಿ ಅಸಮಾಧಾನ ಹಾಗೂ ತಾರತಮ್ಯ ತೊರೆಯಬೇಕು. ವಿಶ್ವವಿದ್ಯಾಲಯದ ಇತರೆ ವಿಭಾಗಗಳಿಗೆ ಅಗತ್ಯ ಅನುದಾನ ನೀಡಲು ನ್ಯಾಕ್ ಸಮಿತಿ ಮಾನ್ಯತೆ ಅಗತ್ಯ ಎಂದು ತಿಳಿಸಿದರು.
ಐಕ್ಯೂಎಸಿ ನಿರ್ದೇಶಕ ಪ್ರೊ| ಸೈಯದ್ ಅಷ್ಫಕ್ ಅಹಮದ್, ಪ್ರೊ| ಗಾಯತ್ರಿ ದೇವರಾಜ್, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ| ಬಿ.ಪಿ ವೀರಭದ್ರಪ್ಪ, ಕುವೆಂಪು ವಿಶ್ವವಿದ್ಯಾಲಯದ ಪಿ. ಲಕ್ಷ್ಮಣ್, ಎಚ್.ಎಸ್. ಅನಿತಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.