ಮೂವರು ಮಹಾತ್ಮರ ಜಯಂತಿ ಒಟ್ಟಿಗೆ ಆಚರಣೆಗೆ ನಿರ್ಧಾರ


Team Udayavani, Jan 11, 2019, 7:13 AM IST

dvg-6.jpg

ಹೊನ್ನಾಳಿ: ಈ ತಿಂಗಳ 15ರಂದು ಶಿವಯೋಗಿ ಸಿದ್ದರಾಮ ಜಯಂತಿ, 19ರಂದು ಮಹಾಯೋಗಿ ವೇಮನ ಜಯಂತಿ ಹಾಗೂ 21ರಂದು ಅಂಬಿಗರ ಚೌಡಯ್ಯ ಜಯಂತಿ ಬಂದಿರುವುದರಿಂದ, ಈ ಎಲ್ಲ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಒಟ್ಟಾಗಿ ಒಂದೇ ದಿನ ಆಚರಿಸಿದರೆ ಅರ್ಥಪೂರ್ಣವಾಗಿರುತ್ತದೆ. ಇದಕ್ಕೆ ಎಲ್ಲ ಸಮಾಜದ ಮುಖಂಡರು ಒಮ್ಮತದ ನಿರ್ಣಯಕ್ಕೆ ಬರಬೇಕು ಎಂದು ತಹಶೀಲ್ದಾರ್‌ ತುಷಾರ್‌ ಬಿ.ಹೊಸೂರು ಹೇಳಿದರು.

ಗುರುವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಮಹಾತ್ಮರ ಜಯಂತಿ ಕಾರ್ಯಕ್ರಮಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಹಶೀಲ್ದಾರ್‌ ಅವರ ಮಾತಿಗೆ ಎಲ್ಲ ಮೂರು ಸಮಾಜದ ಮುಖಂಡರು ತಮ್ಮ ಒಪ್ಪಿಗೆ ಸೂಚಿಸಿ ಮೂವರೂ ಮಹಾತ್ಮರ ಜಯಂತ್ಯುತ್ಸವವನ್ನು ಒಟ್ಟಾಗಿ ಆಚರಿಸುವುದು ಒಳಿತು ಎಂದರು.

ಜ. 21ರಂದು ಜಯಂತ್ಯುತ್ಸವ ಕಾರ್ಯಕ್ರಮವನ್ನು ಪಟ್ಟಣದ ಕನಕದಾಸ ರಂಗಮಂದಿರದಲ್ಲಿ ಹಮ್ಮಿಕೊಂಡು ಮೂವರು ಮಹಾತ್ಮರ ಬಗ್ಗೆ ಪ್ರತ್ಯೇಕ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಆಯೋಜಿಸಲಾಗುವುದು. ಅಂದು ಬೆಳಿಗ್ಗೆ 11ಕ್ಕೆ ಹೊನ್ನಾಳಿಯಲ್ಲಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡು ನೂತನ ನ್ಯಾಮತಿ ತಾಲೂಕು ಕೇಂದ್ರದಲ್ಲಿ ಅದೇ ದಿನ ಮಧ್ಯಾಹ್ನ 3ಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಎಲ್ಲಾ ಸಮಾಜದವರು ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿದರೆ ವಿವಿಧ ಸಮಾಜದ ಮಹಾತ್ಮರ ಕುರಿತು ತಿಳಿಯುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಜನರು ಸಭೆಗೆ ಆಗಮಿಸಬೇಕು ಎಂದು ಅವರು ಹೇಳಿದರು.

ಸಮಾಜದ ಮುಖಂಡರಾದ ಎಸ್‌.ಎ.ಹುಡೇದ್‌, ಕೆ.ಪಿ.ರಾಜಪ್ಪ, ನಾಗರಾಜಪ್ಪ ಮಾತನಾಡಿದರು.

ಪ.ಪಂ ಮುಖ್ಯಾಧಿಕಾರಿ ಎಸ್‌.ಆರ್‌. ವೀರಭದ್ರಯ್ಯ, ದೈಹಿಕ ಶಿಕ್ಷಣಾಧಿಕಾರಿ ರವಿ ಗಾಳಿ ಇತರರು ಇದ್ದರು.

ಕಂದಾಯ ನಿರೀಕ್ಷಕ ಜಯರಾಮ್‌ ಸ್ವಾಗತಿಸಿ ವಂದಿಸಿದರು.

ಟಾಪ್ ನ್ಯೂಸ್

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

2-davangere

Davangere: ಮಹಿಳೆಯ ಮೇಲೆ ಕರಡಿ ದಾಳಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Davanagere: Special tax operation: 1.65 crore tax collection in a single day

Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ

Siddaramaiah will resigns before Assembly session: R. Ashok

Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

ud

Puttur: ಮನೆ ಅಂಗಲದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

byndoor

Siddapura: ಲಾರಿ ಚಾಲನೆಯಲ್ಲಿಯೇ ಹೃದಯಾಘಾತ; ಚಾಲಕ ಸಾವು

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

byndoor

Udupi: ಬೈಕ್‌ ಢಿಕ್ಕಿ; ಸೈಕಲ್‌ ಸವಾರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.