ವಿಷಕೋರರ ವಿರುದ್ಧ ಕ್ರಮ
Team Udayavani, Jan 11, 2019, 10:50 AM IST
ಶಹಾಪುರ: ತೆಗ್ಗಳ್ಳಿ ಗ್ರಾಮಕ್ಕೆ ನೀರು ಪೂರೈಸುವ ಬಾವಿಗೆ ವಿಷ ಬೆರೆಸಿರುವ ಕೃತ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ನಮ್ಮ ಪೋಲಿಸ್ ಇಲಾಖೆ ತನಿಖೆ ಚುರುಕುಗೊಳಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ ಹುಮನಾಬಾದ್ ತಿಳಿಸಿದರು.
ವಿಷ ಪೂರಿತ ನೀರು ಸೇವಿಸಿ ಈಗಾಗಲೇ ಓರ್ವ ವೃದ್ಧೆ ಮೃತಪಟ್ಟಿದ್ದು, ಇನ್ನುಳಿದ ನಾಲ್ವರನ್ನು ಮುಂಜಾಗೃತ ಕ್ರಮವಾಗಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದು, ಅವರ ಆರೋಗ್ಯವನ್ನು ವಿಚಾರಿಸಲು ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ ಹುಮನಾಬಾದ್ ಆಸ್ಪತ್ರೆಯಲ್ಲಿರುವ ರಾಯಮ್ಮ ಯಂಕಪ್ಪ, ಹಳ್ಳೆಮ್ಮ ಶರಣಪ್ಪ, ನಾಗಮ್ಮ ರಾಯಪ್ಪ ಮತ್ತು ಕಲ್ಲಮ್ಮ ಮಲಪ್ಪ ಇವರ ಆರೋಗ್ಯ ವಿಚಾರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಇದೊಂದು ಅತ್ಯಂತ ಅಮಾನವೀಯ ಕೃತ್ಯ, ಕುಡಿಯುವ ನೀರಿಗೆ ವಿಷ ಬೆರೆಸಿರುವುದು ಅಕ್ಷಮ್ಯ ಅಪರಾಧವಾಗಿದೆ. ಈಗಾಗಲೇ ಕುಡಿಯುವ ನೀರಿನ ಸಂರಕ್ಷಣೆಯ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಮತ್ತು ಆರೋಗ್ಯಾಧಿಕಾರಿಗಳೊಂದಿಗೆ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯದ ಬಗ್ಗೆ ಚರ್ಚಿಸಿದ್ದು, ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದರು.
ಮೃತಪಟ್ಟ ವೃದ್ಧೆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ನಂತರ ಪರಿಹಾರ ಒದಗಿಸುವ ಕುರಿತು ತಿಳಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜಶೇಖರ ಪಾಟೀಲ ವಜ್ಜಲ್, ಜಿಲ್ಲಾಧಿಕಾರಿ ಎಂ. ಕುರ್ಮಾರಾವ್, ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬಾನ್ಯಾಂಗ್, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಹಬೀಬ ಉಸ್ಮಾನ ಮತ್ತು ಟಿ.ಹೆಚ್.ಓ. ಡಾ| ರಮೇಶ ಗುತ್ತೇದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.