ಸೀಟು ಹಂಚಿಕೆ ಕುರಿತು ಇನ್ನೂ ಚರ್ಚೆಯಾಗಿಲ್ಲ: ದೇವೇಗೌಡ
Team Udayavani, Jan 12, 2019, 12:30 AM IST
ಹಾಸನ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ. ಹಾಗಾಗಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ನೊಂದಿಗೆ ಚುನಾವಣಾ ಮೈತ್ರಿ ಮುಂದುವರಿಯಲಿದೆ. ಆದರೆ, ಇಂತಿಷ್ಟೇ ಸೀಟು ಬೇಕು ಎಂದು ಜೆಡಿಎಸ್ ಕೇಳಿಲ್ಲ. ಸೀಟು ಹಂಚಿಕೆ ಬಗ್ಗೆ ಚರ್ಚೆಯೂ ಆಗಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಸೀಟು ಹಂಚಿಕೆ ಸಂಬಂಧ ಶೀಘ್ರದಲ್ಲಿಯೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರೊಂದಿಗೆ ನಮ್ಮ ಪಕ್ಷದ ಪದಾಧಿಕಾರಿಗಳು ಚರ್ಚಿಸಲಿದ್ದಾರೆ. ಬಳಿಕ, ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ. ಜೆಡಿಎಸ್‌ಗೆ ಎಷ್ಟು ಸೀಟು ಸಿಗುತ್ತದೆಯೋ ಗೊತ್ತಿಲ್ಲ. ಚರ್ಚೆಯ ನಂತರ ಸೀಟು ಹಂಚಿಕೆಯಾಗಲಿದೆ. ನಮ್ಮ ಪಕ್ಷದ ಮುಖಂಡರು 10 -12 ಸೀಟು ಬೇಕು ಎಂದು ಹೇಳಿದ್ದಾರೆ. ಅದನ್ನು ಮಾಧ್ಯಮಗಳ ಮೂಲಕ ಗಮನಿಸಿದ್ದೇನೆ ಎಂದರು.
ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಹಾಗಾಗಿ, ಇಂತಹುದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂಬುದು ಊಹಾಪೋಹ ಅಷ್ಟೆ. ಇನ್ನೊಂದು ತಿಂಗಳಲ್ಲಿ ಎಲ್ಲವೂ ಗೊತ್ತಾಗುತ್ತದೆ.
– ಎಚ್.ಡಿ.ದೇವೇಗೌಡ, ಜೆಡಿಎಸ್ ವರಿಷ್ಠ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್ ಆಕರ್ಷಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.