ಮುಂದಿನ ಮಾಸಾಂತ್ಯ ಹೊಸಮಠದ ಹೊಸ ಸೇತುವೆ ಸಂಚಾರಕ್ಕೆ ಮುಕ್ತ


Team Udayavani, Jan 12, 2019, 5:38 AM IST

12-january-4.jpg

ಕಡಬ: ಉಪ್ಪಿನಂಗಡಿ -ಕಡಬ ರಾಜ್ಯಹೆದ್ದಾರಿಯ ಹೊಸಮಠದಲ್ಲಿ ಗುಂಡ್ಯ ಹೊಳೆಗೆ ನೂತನ ಸೇತುವೆ ನಿರ್ಮಾಣ ಕಾರ್ಯ ಪ್ರಾರಂಭವಾಗಿ 2 ವರ್ಷಗಳೇ ಕಳೆದರೂ ಸಂಪರ್ಕ ರಸ್ತೆ ನಿರ್ಮಾಣವಾಗದೇ ಸ್ಥಗಿತಗೊಂಡಿದ್ದ ಕಾಮಗಾರಿ ಇದೀಗ ವೇಗ ಪಡೆದು ಕೊಂಡಿದ್ದು, ನಿರೀಕ್ಷೆಯಂತೆ ನಡೆದರೆ ಮುಂದಿನ ತಿಂಗಳ ಕೊನೆಯೊಳಗೆ ನೂತನ ಸೇತುವೆ ಮೇಲೆ ವಾಹನಗಳು ಸಂಚರಿಸಲಿವೆ.

ಕಾಮಗಾರಿಗೆ ತಡೆಯಾದ ಜಮೀನಿನ ತಕರಾರು
ಸೇತುವೆ ಕಾಮಗಾರಿ 4 ವರ್ಷಗಳ ಹಿಂದೆಯೇ ಆರಂಭಗೊಂಡಿದ್ದರೂ, ಸಂಪರ್ಕ ರಸ್ತೆಗೆ ಅಗತ್ಯವಿದ್ದ ಜಮೀನಿನ ತಕರಾರಿನಿಂದಾಗಿ ಪೂರ್ಣಗೊಂಡಿರಲಿಲ್ಲ. ಈ ಬಗ್ಗೆ ಹಲವು ಸುತ್ತಿನ ಮಾತುಕತೆಗಳು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ನಡೆದಿತ್ತು. ಸಂಪರ್ಕ ರಸ್ತೆಗೆ ಭೂಮಿ ಬಿಟ್ಟುಕೊಡಬೇಕಿದ್ದ ಭೂ ಮಾಲಕರು ಸೂಕ್ತ ಪರಿಹಾರ ಸಿಗದೆ ಭೂಮಿ ನೀಡಲು ಒಪ್ಪದೇ ಇದ್ದುರಿಂದ ಸಂಪರ್ಕ ರಸ್ತೆ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಇದೀಗ ಎಲ್ಲ ಸಮಸ್ಯೆಗಳು ಬಗೆಹರಿದು ಸಂಪರ್ಕ ರಸ್ತೆ ನಿರ್ಮಾಣವಾಗುತ್ತಿದೆ. ಸಂಪರ್ಕ ರಸ್ತೆಯ ತಡೆಗೋಡೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ತಡೆಗೋಡೆ ಕಾಮಗಾರಿ ಮುಗಿದು ಸಂಪರ್ಕ ರಸ್ತೆಗೆ ಡಾಮರು ಹಾಕಿ ಫೆಬ್ರವರಿ ಕೊನೆಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಸೇತುವೆ ನಿರ್ಮಾಣದ ಉಸ್ತುವಾರಿ ಹೊತ್ತಿರುವ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್‌) ಅಧಿಕಾರಿಗಳು ತಿಳಿಸಿದ್ದಾರೆ.

ನಿರ್ಮಾಣ ವೆಚ್ಚ 9.18 ಕೋಟಿ ರೂ.
ದಕ್ಷಿಣ ಭಾರತದ ಅತೀ ದೊಡ್ಡ ಯಾತ್ರಾಸ್ಥಳ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸುಲಭ ಸಂಪರ್ಕ ಕಲ್ಪಿಸುವ ಹಳೆಯ ಮುಳುಗು ಸೇತುವೆ ಮೈಸೂರು ರಾಜ್ಯ ಆಡಳಿತಾವಧಿಯಲ್ಲಿ 1955ರಲ್ಲಿ ನಿರ್ಮಾಣವಾಗಿತ್ತು. ಅಂದಿನಿಂದ ಇಂದಿನ ತನಕ ಮಳೆಗಾಲದಲ್ಲಿ ನೆರೆನೀರಿಗೆ ಮುಳುಗಿ ಅನೇಕ ದುರಂತ ಗಳಿಗೆ ಸಾಕ್ಷಿಯಾಗಿರುವ ಈ ಸೇತುವೆ ಮಂದಿನ ದಿನಗಳಲ್ಲಿ ಕೇವಲ ನೆನಪಾಗಿ ಉಳಿಯಲಿದೆ. ಇಲ್ಲಿ ನೂತನ ಸೇತುವೆ ನಿರ್ಮಿಸಲು ಏಳು ವರ್ಷಗಳ ಹಿಂದೆ ರಾಜ್ಯ ಸರಕಾರ 7.5 ಕೋಟಿ ರೂ. ಅನುದಾನ ಒದಗಿಸಿತ್ತು. ಬಳಿಕ ಹಲವು ಎಡರುತೊಡರುಗಳ ನಡುವೆ 4 ವರ್ಷಗಳ ಹಿಂದೆ ಕಾಮಗಾರಿ ಆರಂಭಗೊಂಡಿತ್ತು.

ಹಳೆಯ ಸೇತುವೆಯಿಂದ ಸುಮಾರು 4 ಮೀ. ಎತ್ತರದಲ್ಲಿ 125 ಮೀ. ಉದ್ದ ಹಾಗೂ 12 ಮೀ. ಅಗಲದಲ್ಲಿ ಹೊಸ ಸೇತುವೆ ಎದ್ದುನಿಂತಿದೆ. ಹಳೆ ಸೇತುವೆಯನ್ನು ಹಾಗೆಯೇ ಉಳಿಸಿಕೊಂಡು ಸಂಚಾರಕ್ಕೆ ತೊಂದರೆಯಾಗದ ರೀತಿಯಲ್ಲಿ ಹೊಸ ಸೇತುವೆ ನಿರ್ಮಾಣ ಮಾಡಲಾಗಿದೆ. ಸಂಪರ್ಕ ರಸ್ತೆಯ ಪಕ್ಕದ ತಡೆಗೊಡೆ ಇತ್ಯಾದಿ ಹೆಚ್ಚುವರಿಯಾಗಿ ಸೇರಿ ಸೇತುವೆಯ ಒಟ್ಟು ನಿರ್ಮಾಣ ವೆಚ್ಚ 9.18 ಕೋಟಿ ರೂ.ಗಳಿಗೆ ಏರಿದೆ.

ಫೆಬ್ರವರಿ ಅಂತ್ಯದಲ್ಲಿ ಬಳಕೆಗೆ ಸಿದ್ಧ
ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೃಹತ್‌ ಸೇತುವೆಗಳಾದ ಶಾಂತಿಮೊಗರು, ಸುಬ್ರಹ್ಮಣದ ಕುಮಾರಧಾರ ಹಾಗೂ ಕಡಬದ ಹೊಸಮಠ ಸೇತುವೆಗಳಿಗೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಆಡಳಿತದಲ್ಲಿದ್ದಾಗ ಅನುದಾನ ಮಂಜೂರು ಮಾಡಲಾಗಿತ್ತು. ಹೊಸಮಠ ಸೇತುವೆ ಕಾಮಗಾರಿ ಮಾತ್ರ ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿತ್ತು. ಇದೀಗ ಎಲ್ಲ ಸಮಸ್ಯೆಗಳು ಬಗೆಹರಿದಿವೆ. ಫೆಬ್ರವರಿ ಅಂತ್ಯದೊಳಗೆ ಸೇತುವೆಯ ಎಲ್ಲ ಕೆಲಸ ಕಾರ್ಯಗಳು ಮುಗಿದು ವಾಹನ ಸಂಚಾರಕ್ಕೆ ಮುಕ್ತಗೊಳ್ಳಲಿದೆ. 
– ಎಸ್‌. ಅಂಗಾರ,
ಶಾಸಕರು, ಸುಳ್ಯ ವಿಧಾನಸಭಾ ಕ್ಷೇತ್ರ

•ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.