ಆದಿಉಡುಪಿ: ಹೆಲಿಟೂರಿಸಂ ರೈಡ್ ಆರಂಭ
Team Udayavani, Jan 12, 2019, 5:41 AM IST
ಉಡುಪಿ: ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಆದಿಉಡುಪಿ ಹೆಲಿಪ್ಯಾಡ್‌ನಲ್ಲಿ ಆಯೋಜಿಸಿದ ಮೂರು ದಿನಗಳ ಹೆಲಿಟೂರಿಸಂ ಅನ್ನು ಶಾಸಕ ರಘುಪತಿ ಭಟ್ ಶುಕ್ರವಾರ ರೈಡಿಂಗ್‌ನಲ್ಲಿ ಪಾಲ್ಗೊಳ್ಳುವ ಮೂಲಕ ಉದ್ಘಾಟಿಸಿದರು. ಆದಿಉಡುಪಿ ಹೆಲಿಪ್ಯಾಡ್ ಮೈದಾನದಲ್ಲಿ ಜ. 11ರಿಂದ 13ರ ವರೆಗೆ ಹೆಲಿಟೂರಿಸಂ ರೈಡ್ ನಡೆಯಲಿದ್ದು ಒಂದು ಬಾರಿ 6 ಮಂದಿ ಹಾರಾಟ ನಡೆಸಬಹುದು.
ಪ್ರವಾಸೋದ್ಯಮ ಉತ್ತೇಜನ ದೃಷ್ಟಿಯಿಂದ ಹೆಲಿಟೂರಿಸಂ ಅಗತ್ಯ. ದ.ಕ.,ಉಡುಪಿ, ಉ.ಕ. ಜಿಲ್ಲೆಗಳನ್ನು ಒಳಗೊಂಡಂತೆ ಹೆಲಿಟೂರಿಸಂ ಜಾರಿಗೊಳಿಸಿದರೆ ಇನ್ನೂ ಉತ್ತಮ ಎಂದ ಅವರು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಅವರನ್ನು ಇಲ್ಲಿಗೆ ಬರ ಹೇಳಿ ಈ ಬಗ್ಗೆ ಪ್ರಸ್ತಾವ ಮುಂದಿಡಲಾಗುವುದು ಎಂದು ಭಟ್ ತಿಳಿಸಿದರು.
ಎಪ್ರಿಲ್ – ಮೇ ತಿಂಗಳಲ್ಲಿ ಸಾಧ್ಯವಾದರೆ ಮತ್ತೂಮ್ಮೆ ಆಯೋಜಿಸುತ್ತೇವೆ. ಕುಂದಾಪುರದಲ್ಲಿ ನಡೆದ ಹೆಲಿಟೂರಿಸಂಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಂದು ಸಂಘಟಕ ಸುಧೇಶ್ ಶೆಟ್ಟಿ ತಿಳಿಸಿದರು. ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ, ನಿರ್ಮಿತಿ ಕೇಂದ್ರದ ಅರುಣ್ ಕುಮಾರ್, ಕ್ಯಾಪ್ಟನ್ ರಮೇಶ ಭೂಮಿನಾಥನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.