ಗಾಂಧಿ ತತ್ವದ ಮೂಲಕ ಉತ್ತಮ ಸಮಾಜ ಸಾಧ್ಯ
Team Udayavani, Jan 12, 2019, 7:09 AM IST
ಬೆಂಗಳೂರು: ಆಧುನಿಕ ಯುಗದಲ್ಲಿ ಮಹಾತ್ಮ ಗಾಂಧಿ ಅವರ ತತ್ವಗಳನ್ನು ಪಾಲಿಸಿ ಉತ್ತಮ ಸಮಾಜ ಕಟ್ಟುವುದು ಎಲ್ಲರ ಜವಾಬ್ದಾರಿ ಎಂದು ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಬೆಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗವು ಜ್ಞಾನಭಾರತಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಇಂದಿನ ದಿನಗಳಲ್ಲಿ ಗಾಂಧಿಯ ಪ್ರಸ್ತುತತೆ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಉತ್ತಮ ಸಮಾಜ ನಿರ್ಮಾಣದಲ್ಲಿ ಗಾಂಧೀಜಿಯವರ ಆದರ್ಶ ಏನು ಎಂಬುದನ್ನು ಎಲ್ಲರೂ ತಿಳಿದುಕೊಳ್ಳಬೇಕು. ದೇಶದಲ್ಲಿ ಸಮಾನತೆಗಾಗಿ ಹೋರಾಟ ಮಾಡಿದ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನದ ಕುರಿತು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು ಮತ್ತು ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಗಾಂಧೀಜಿ ಅವರು ಕನಸಿನ ಭಾರತದಲ್ಲಿ ಜಾತಿ, ವರ್ಗ ಇರಲಿಲ್ಲ. ಸ್ವಾತಂತ್ರ್ಯಕ್ಕಾಗಿ ದೇಶದ ಎಲ್ಲ ವರ್ಗದವರನ್ನು ಒಂದು ಮಾಡಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದರು. ಗಾಂಧೀಜಿಯವರ ವ್ಯಕ್ತಿತ್ವದಲ್ಲಿ ಸಂಸ್ಕೃತಿ ನೋಡಬಹದು ಎಂದರು.
ಬೆಂಗಳೂರು ವಿವಿ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಮಾತನಾಡಿದರು.ಒಸ್ಮಾನಿಯಾ ವಿವಿಯ ಇತಿಹಾಸ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಅಡಪ ಸತ್ಯನಾರಾಯಣ, ಬೆಂವಿವಿ ಇತಿಹಾಸ ವಿಭಾಗದ ಪ್ರೊ. ಎಸ್.ನಾಗರತ್ನಮ್ಮ, ಪ್ರೊ.ಎಂ. ಜಮುನ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.