ಸಮ ಸಮಾಜ ಕಟ್ಟಿ ಬೆಳೆಸಿದ ಜಯದೇವಶ್ರೀ: ಸ್ವಾಮೀಜಿ
Team Udayavani, Jan 12, 2019, 7:38 AM IST
ದಾವಣಗೆರೆ: ಜಾತಿ ಎಂಬ ಕತ್ತಲನ್ನು ದೂರವಾಗಿಸಿ, ಸಮ ಸಮಾಜವನ್ನು ಕಟ್ಟಿ ಬೆಳೆಸಿದ ಕೀರ್ತಿ ಶ್ರೀ ಜಯದೇವ ಜಗದ್ಗುರುಗಳಿಗೆ ಸಲ್ಲುತ್ತದೆ ಎಂದು ದೊಡ್ಡಪೇಟೆ ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಹೇಳಿದರು.
ಜಯದೇವ ವೃತ್ತದ ಶಿವಯೋಗಾಶ್ರಮದಲ್ಲಿ ಶ್ರೀ ಜಯದೇವ ಜಗದ್ಗುರುಗಳವರ 62ನೇ ಸ್ಮರಣೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಜಯದೇವ ಲೀಲೆ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಶ್ರೀಗಳು ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ಬರುವ ಪೂರ್ವದಲ್ಲಿ ಉಚಿತವಾಗಿ ಶಿಕ್ಷಣವನ್ನು ನೀಡಿದ ಕೀರ್ತಿ ಶ್ರೀ ಜಯದೇವ ಜಗದ್ಗುರುಗಳವರದು. ಅವರು ಎಲ್ಲಾ ಸಮಾಜದ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಪ್ರಸಾದ ನಿಲಯಗಳನ್ನು ಸ್ಥಾಪಿಸಿದ್ದಾರೆ. ತಮ್ಮ ಮುರುಘಾಮಠವನ್ನು ಸರ್ವ ಜನಾಂಗದ ಮಠವನ್ನಾಗಿ ಮಾಡಿದ್ದಾರೆ. ಆ ಮೂಲಕ ಸರ್ವರನ್ನು ಸಮನಾಗಿ ಕಾಣುವುದರೊಟ್ಟಿಗೆ ಸಮಾಜದಲ್ಲಿ ಬೇರೂರಿದ್ದ ಜಾತಿ ಎಂಬ ಕತ್ತಲನ್ನು ದೂರವಾಗಿಸಿದ್ದಾರೆ. ಬಸವಣ್ಣನವರ ಕಾಯಕ, ದಾಸೋಹ, ಸಮಾನತೆಯ ತತ್ವಗಳನ್ನು ಚಾಚೂ ತಪ್ಪದೇ ಪಾಲಿಸಿ, ಜನರ ಬದುಕಿಗೆ ಬೆಳಕಾಗಿದ್ದಾರೆ ಎಂದು ಸ್ಮರಿಸಿದರು. ಕಾರ್ಯಕ್ರಮ ಉದ್ಘಾಟಿಸಿದ ಕೆಎಸ್‌ಎಸ್ ಫೌಂಡೇಶನ್ ಅಧ್ಯಕ್ಷ ಎಚ್.ಕೆ. ಬಸವರಾಜ್ ಮಾತನಾಡಿ, ಇಡೀ ಸಮಾಜದ ವ್ಯವಸ್ಥೆಯನ್ನು ವೈಚಾರಿಕ ನೆಲೆಗಟ್ಟಿನ ಹಾದಿಯಲ್ಲಿ ಕೊಂಡೊಯ್ಯುವ ಕೆಲಸವನ್ನು ಜಯದೇವ ಶ್ರೀ ಮಾಡಿದ್ದಾರೆ. ಬಸವಣ್ಣನವರ ಕ್ರಾಂತಿಕಾರಕ ನಿಲುವುಗಳನ್ನು ಸಮ ಸಮಾಜದ ಪರಿಕಲ್ಪನೆಯ ಮಾರ್ಗದಲ್ಲಿ ಜನತೆಗೆ ಪರಿಚಯಿಸಿದ್ದಾರೆ ಎಂದು ಹೇಳಿದರು.
ಚನ್ನಗಿರಿಯ ಪ್ರವಚನಕಾರ ಮಹಾಂತೇಶ್ ಶಾಸ್ತ್ರೀ ಪ್ರವಚನ ನೀಡುತ್ತ ಮಾತನಾಡಿ, ಜಯದೇವ ಜಗದ್ಗುರುಗಳು ಸ್ವ-ಕಲ್ಯಾಣಕ್ಕೆ ಆದ್ಯತೆ ನೀಡದೇ, ಸಮಾಜದ ಕಲ್ಯಾಣಕ್ಕೆ ಹಗಲಿರುಳು ಶ್ರಮಿಸಿದ್ದಾರೆ. ಅದೇ ರೀತಿ ಶ್ರೀ ಮುರುಘರಾಜೇಂದ್ರ ಸ್ವಾಮೀಜಿಗಳಿಗೆ ದೇಶದುದ್ದಕ್ಕೂ ಬಸವತತ್ವ ಪ್ರಸಾರ ಮಾಡಿ ಪ್ರತಿ ಮನೆ ಮನೆಗಳಲ್ಲೂ ಬಸವಜ್ಯೋತಿ ಬೆಳಗಿಸಿದ ಕೀರ್ತಿ ಸಲ್ಲುತ್ತದೆ ಎಂದರು.
ಒಳ್ಳೆಯದನ್ನು ಕೇಳುವ ಹವ್ಯಾಸ ಎಲ್ಲಿಯವರೆಗೆ ಮನುಷ್ಯನಲ್ಲಿ ಬರುವುದಿಲ್ಲವೋ ಅಲ್ಲಿಯವರೆಗೂ ಪರಿಪೂರ್ಣ ಆಗಲ್ಲ. ಹಾಗಾಗಿ ಮೊದಲು ಪರಿಪೂರ್ಣ ಆಗಬೇಕು. ದೇಹದ ಅಂಗಾಂಗಗಳನ್ನು ಸದಾ ಕ್ರಿಯಾಶೀಲ, ಚಲನಶೀಲವಾಗಿಸಿಕೊಂಡು ಸತ್ಕಾರ್ಯ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಎನ್.ಆರ್. ಪುರಂ ಬಸವಕೇಂದ್ರದ ಶ್ರೀ ಬಸವಯೋಗಪ್ರಭು ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಮುರುಘಾಮಠದ ಚೆಲುವಯ್ಯ ಸ್ವಾಮೀಜಿ ಉಪಸ್ಥಿತರಿದ್ದರು. ಟಿ.ಎಂ. ವೀರೇಂದ್ರ ಸ್ವಾಗತಿಸಿದರು. ಬಸವ ಕಲಾಲೋಕ ಬಳಗದವರು ವಚನ ಗಾಯನ ನಡೆಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.