10ನೇ ತರಗತಿ ಗಣಿತವಿನ್ನು ಸರಳ!
Team Udayavani, Jan 12, 2019, 8:02 AM IST
ನವದೆಹಲಿ: ಗಣಿತವನ್ನು ಕಬ್ಬಿಣದ ಕಡಲೆ’ ಎಂದು ಪರಿಗಣಿಸಿರುವ, ಗಣಿತ ಪರೀಕ್ಷೆ ಬಂತೆಂದರೆ ಹೌಹಾರುವ 10ನೇ ತರಗತಿ ವಿದ್ಯಾರ್ಥಿಗಳಿಗೊಂದು ಸಿಹಿಸುದ್ದಿ. ಮುಂದಿನ ಶೈಕ್ಷಣಿಕ ವರ್ಷದಿಂದ ನೀವು ಸುಲಭದ ಗಣಿತ ಪರೀಕ್ಷೆ’ಯನ್ನು ಆಯ್ಕೆ ಮಾಡಿಕೊಂಡು, ಅದರಲ್ಲಿ ಉತ್ತೀರ್ಣರಾಗಿ ವಿದ್ಯಾಭ್ಯಾಸ ಮುಂದುವರಿಸಬಹುದು.
2020ರಿಂದ 10ನೇ ತರಗತಿಗೆ ಎರಡು ಹಂತದ ಗಣಿತ ಪರೀಕ್ಷೆ ಪರಿಚಯಿಸಲು ಸಿಬಿಎಸ್‌ಇ ನಿರ್ಧರಿಸಿದೆ. ಅದರಂತೆ, ಗಣಿತ- ಸ್ಟಾಂಡರ್ಡ್ ಮತ್ತು ಗಣಿತ-ಬೇಸಿಕ್ ಎಂಬ ಎರಡು ಆಯ್ಕೆಗಳಿರುತ್ತವೆ. ಯಾರು ಗಣಿತದಲ್ಲಿ ನಿಸ್ಸೀಮರಾಗಿದ್ದು, ಅದಕ್ಕೆ ಸಂಬಂಧಿಸಿಯೇ ಮುಂದಿನ ವಿದ್ಯಾಭ್ಯಾಸ ಮಾಡಲು ಇಚ್ಛಿಸುತ್ತಾರೋ, ಅಂಥವರು ಗಣಿತ- ಸ್ಟಾಂಡರ್ಡ್ ಪರೀಕ್ಷೆಯನ್ನು ಬರೆಯಬಹುದು, ಯಾರಿಗೆ ಗಣಿತ ಕಷ್ಟ ಎಂಬ ಭಾವನೆಯಿದೆಯೋ, ಅಂಥವರು ಗಣಿತ-ಬೇಸಿಕ್ ಪರೀಕ್ಷೆ ಬರೆದು, ತಮ್ಮ ಆಯ್ಕೆಯ ಕೋರ್ಸ್ ಆಯ್ದುಕೊಂಡು ವಿದ್ಯಾಭ್ಯಾಸ ಮುಂದುವರಿಸಬಹುದು.10ನೇ ತರಗತಿಯ ಪರೀಕ್ಷೆ ವೇಳೆ ವಿದ್ಯಾರ್ಥಿಗಳಲ್ಲಿರುವ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಬಿಎಸ್‌ಇ ತಿಳಿಸಿದೆ.
ಇಂಟರ್ನಲ್‌ಗೆ ಅನ್ವಯವಾಗಲ್ಲ: ಆದರೆ, ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಅಂದರೆ, ಪರೀಕ್ಷೆಗಳು ಪ್ರತ್ಯೇಕವಾಗಿದ್ದರೂ ಶಾಲೆಗಳಲ್ಲಿನ ಪಠ್ಯಕ್ರಮ, ಆಂತರಿಕ ಮೌಲ್ಯಮಾಪನ ಒಂದೇ ಆಗಿರುತ್ತದೆ. ಮಾನ್ಯತೆ ಪಡೆದ ಶಾಲೆಯು ಆನ್‌ಲೈನ್ ಮೂಲಕ ಅಭ್ಯರ್ಥಿಗಳ ಪಟ್ಟಿಯನ್ನು ಸಿಬಿಎಸ್‌ಇಗೆ ಕಳುಹಿಸುವ ಸಂದರ್ಭದಲ್ಲೇ ಆಯ್ಕೆಯನ್ನು ನಮೂದಿಸಬೇಕಾಗುತ್ತದೆ.
ಫೇಲಾದರೆ?: ಗಣಿತ-ಬೇಸಿಕ್ ಪರೀಕ್ಷೆ ಬರೆದಿರುವ ವಿದ್ಯಾರ್ಥಿ ಅನುತ್ತೀರ್ಣನಾದರೆ, ಗಣಿತ-ಬೇಸಿಕ್ ಪೂರಕ ಪರೀಕ್ಷೆ ಬರೆಯಬೇಕಾಗುತ್ತದೆ. ಆದರೆ, ಗಣಿತ-ಸ್ಟಾಂಡರ್ಡ್ ಪರೀಕ್ಷೆ ಬರೆದು ಅನುತ್ತೀರ್ಣನಾದ ವಿದ್ಯಾರ್ಥಿ, ಪೂರಕ ಪರೀಕ್ಷೆ ವೇಳೆ ಗಣಿತ-ಬೇಸಿಕ್ ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ. ಅದೇ ರೀತಿ, ಒಬ್ಬ ವಿದ್ಯಾರ್ಥಿ ಆರಂಭದಲ್ಲಿ ಗಣಿತ-ಬೇಸಿಕ್ ಪರೀಕ್ಷೆ ಬರೆದಿದ್ದರೂ, ನಂತರ ಗಣಿತದಲ್ಲೇ ಉನ್ನತ ಶಿಕ್ಷಣ ಪಡೆಯಬೇಕೆಂದು ಬಯಸಿದರೆ, ಅಂಥ ವಿದ್ಯಾರ್ಥಿ ಪೂರಕ ಪರೀಕ್ಷೆ ಕುಳಿತು ಗಣಿತ-ಸ್ಟಾಂಡರ್ಡ್ ಆಯ್ಕೆ ಮಾಡಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.