ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ
Team Udayavani, Jan 12, 2019, 9:49 AM IST
ಚಿತ್ರದುರ್ಗ: ಮುಂಗಾರು, ಹಿಂಗಾರು ಮಳೆಯ ಕೊರತೆಯಿಂದಾಗಿ ಕುಡಿಯುವ ನೀರಿನ ತೊಂದರೆಯಾಗಿದ್ದು, ಜಿಲ್ಲೆಯ 56 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಟ್ಯಾಂಕರ್ ಮೂಲಕ ನೀರು ಪೂರೈಕೆ ಕಾಯಂ ಆಗಬಾರದು. ನೀರಿನ ಲಭ್ಯತೆಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.
ಬರ ಪರಿಸ್ಥಿತಿಯ ಪರಿಶೀಲನೆ ಮಾಡಲು ಸಚಿವ ಸಂಪುಟದ ಉಪ ಸಮಿತಿ ಜಿಲ್ಲೆಗೆ ಜ. 12 ರಂದು ಆಗಮಿಸಲಿದ್ದು ಸೂಕ್ತ ಮಾಹಿತಿ ನೀಡಬೇಕು. ಹಿರಿಯೂರು-13, ಚಿತ್ರದುರ್ಗ-11, ಚಳ್ಳಕೆರೆ-9, ಹೊಳಲ್ಕೆರೆ-8, ಮೊಳಕಾಲ್ಮೂರು-15 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಯಾವುದೇ ಮೂಲದಿಂದ ನೀರು ಲಭ್ಯವಾಗದಿದ್ದಲ್ಲಿ ಮಾತ್ರ ಟ್ಯಾಂಕರ್ ಮೂಲಕ ಆ ಗ್ರಾಮಗಳಿಗೆ ನೀರು ಪೂರೈಸಬೇಕು. ಇದು ತಕ್ಷಣದ ತಾತ್ಕಾಲಿಕ ಪರಿಹಾರ ಮಾತ್ರವಾಗಿದೆ ಎಂದರು.
ಅಧಿಕಾರಿಗಳು ನೀರು ಪೂರೈಕೆ ಶಾಶ್ವತ ವ್ಯವಸ್ಥೆಯಲ್ಲ. ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು 56 ಗ್ರಾಮಗಳಿಗೂ ಖುದ್ದು ಭೇಟಿ ನೀಡಿ, ಪರಿಸ್ಥಿತಿಯ ಪರಾಮರ್ಶಿಸಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.
ಕ್ರಿಯಾ ಯೋಜನೆ: ಜಿಲ್ಲಾದ್ಯಂತ ಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಎದುರಾಗಬಹುದಾದ 457 ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿದ್ದು, ಈ ಗ್ರಾಮಗಳಿಗೆ ಬೋರ್‌ವೆಲ್ ಸೇರಿದಂತೆ ಇತರೆ ಮಾರ್ಗಗಳ ಮೂಲಕ ನೀರು ಪೂರೈಸಲು 28.40 ಕೋಟಿ ರೂ. ಕ್ರಿಯಾ ಯೋಜನೆ ಸಿದ್ಧಪಡಿಸಿದೆ. ಅದೇ ರೀತಿ ಚಿತ್ರದುರ್ಗ ನಗರ ಮತ್ತು ಇತರೆ ಪಟ್ಟಣ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ನೀಗಿಸಲು 8 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದರು.
ಮೇವು ಬೆಳೆಯಲು ಸೂಚನೆ: ಪಶುಸಂಗೋಪನೆ ಇಲಾಖೆಯಿಂದ ಮೇವು ಬೆಳೆಯಲು ಉತ್ತೇಜನ ನೀಡಲಾಗುತ್ತಿದ್ದು, 16,073 ಮೇವಿನ ಬೀಜದ ಕಿಟ್‌ಗಳನ್ನು ವಿತರಿಸಲಾಗಿದೆ. ಇದರ ಜತೆಗೆ ಪಶುಸಂಗೋಪನೆ ಇಲಾಖೆ, ಕೃಷಿ, ತೋಟಗಾರಿಕೆ ಇಲಾಖೆಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಎಲ್ಲೆಲ್ಲಿ ಭೂಮಿ ಲಭ್ಯವಿದೆಯೋ ಅಲ್ಲಿ ಮೇವು ಬೆಳೆಯುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಎನ್. ರವೀಂದ್ರ ಮಾತನಾಡಿ, ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ಇರುವುದರಿಂದ ವಲಸೆ ತಡೆಯಲು ಉದ್ಯೋಗಖಾತ್ರಿ ಯೋಜನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಅರಣ್ಯ, ಕೃಷಿ, ತೋಟಗಾರಿಕೆ, ರೇಷ್ಮೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಉದ್ಯೋಗಖಾತ್ರಿ ಯೋಜನೆಯಡಿ ಕೂಲಿ ಕೆಲಸ ನೀಡಲು, ಹೆಚ್ಚಿನ ಮಾನವದಿನಗಳನ್ನು ಸೃಜಿಸಲು ಗುರಿ ನಿಗದಿಪಡಿಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ 40 ಲಕ್ಷ ಮಾನವ ದಿನಗಳನ್ನು ಸೃಜಿಸಿ ಉದ್ಯೋಗ ನೀಡಲಾಗಿದೆ ಎಂದರು.
ಕೂಲಿಗಾಗಿ 99.45 ಕೋಟಿ ಹಾಗೂ ಸಾಮಗ್ರಿಗಳಿಗೆ 101. 67 ಕೋಟಿ ಸೇರಿದಂತೆ ಒಟ್ಟು 201. 53 ಕೋಟಿ ರೂ. ವೆಚ್ಚ ಮಾಡಲಾಗಿದೆ. ಉದ್ಯೋಗಖಾತ್ರಿಯಡಿ ವೈಯಕ್ತಿಕ ಕೂಲಿ ಕೆಲಸ ಜತೆಗೆ ಸಾಮೂಹಿಕವಾಗಿ ಕೂಲಿಕಾರರು ಭಾಗವಹಿಸುವಂತಹ ಕೆರೆ ಹೂಳೆತ್ತುವ ಕಾಮಗಾರಿ ಸೇರಿದಂತೆ ಇತರೆ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ರೋಜ್‌ಗಾರ್ ದಿವಸ್, ರೋಜಗಾರ್ ವಾಹಿನಿ, ಗ್ರಾಮಗಳಲ್ಲಿ ಡಂಗೂರ ಸಾರುವುದು, ಕರಪತ್ರಗಳ ವಿತರಣೆಯಂತಹ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಾಪಂ ಇಒಗಳಿಗೆ ತಿಳಿಸಿದರು.
ಜಂಟಿಕೃಷಿ ನಿರ್ದೇಶಕ ಲಕ್ಷ್ಮಣ್ ಕಳ್ಳೆನವರ್ ಮಾತನಾಡಿ, ಇಲಾಖೆಯಿಂದ ಉದ್ಯೋಗ ಖಾತ್ರಿಯಡಿ 401 ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, 567 ಕಾಮಗಾರಿಗಳು ಪ್ರಗತಿಯಲ್ಲಿವೆ. 56 ಸಾವಿರ ಮಾನವದಿನಗಳನ್ನು ಸೃಜಿಸಿ, ಉದ್ಯೋಗ ನೀಡಲಾಗಿದೆ. ಕೃಷಿ ಹೊಂಡ, ಬದು ನಿರ್ಮಾಣ, ಎರೆಹುಳು ಘಟಕ ನಿರ್ಮಾಣ ಸೇರಿದಂತೆ ಮಣ್ಣು ಮತ್ತು ನೀರು ಸಂರಕ್ಷಣೆ ಕಾಮಗಾರಿಗಳನ್ನು ಯೋಜನೆಯಡಿ ಕೈಗೊಳ್ಳುವಂತೆ ರೈತರಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಉಪವಿಭಾಗಾಧಿಕಾರಿ ವಿಜಯಕುಮಾರ್, ಜಿಪಂ ಉಪಕಾರ್ಯದರ್ಶಿ ಬಸವರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಮೇವು ಬೆಳೆಯಲು ಸೂಚನೆ: ಪಶುಸಂಗೋಪನೆ ಇಲಾಖೆಯಿಂದ ಮೇವು ಬೆಳೆಯಲು ಉತ್ತೇಜನ ನೀಡಲಾಗುತ್ತಿದ್ದು, 16,073 ಮೇವಿನ ಬೀಜದ ಕಿಟ್‌ಗಳನ್ನು ವಿತರಿಸಲಾಗಿದೆ. ಇದರ ಜತೆಗೆ ಪಶುಸಂಗೋಪನೆ ಇಲಾಖೆ, ಕೃಷಿ, ತೋಟಗಾರಿಕೆ ಇಲಾಖೆಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಎಲ್ಲೆಲ್ಲಿ ಭೂಮಿ ಲಭ್ಯವಿದೆಯೋ ಅಲ್ಲಿ ಮೇವು ಬೆಳೆಯುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.