ಶೈಕ್ಷಣಿಕ ಪ್ರಗತಿಗೆ ಶಿಕ್ಷಕರ ಸಹಕಾರ ಅಗತ್ಯ: ಕಂಬಾರ
Team Udayavani, Jan 12, 2019, 12:16 PM IST
ಕಕ್ಕೇರಾ: ಶೈಕ್ಷಣಿಕ ಪ್ರಗತಿ ಹೊಂದಲು ಶಿಕ್ಷಕರೊಂದಿಗೆ ಸಮುದಾಯದ ಸಹಕಾರ ಅವಶ್ಯವಾಗಿದೆ ಎಂದು ಅಕ್ಷರ ದಾಸೋಹ ತಾಲೂಕಾಧಿಕಾರಿ ಮೌನೇಶ ಕಂಬಾರ ಹೇಳಿದರು.
ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬಿಸಿಯೂಟ ವಿತರಿಸಿ ಮಾತನಾಡಿದ ಅವರು, ಈ ಹಿಂದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಯೇ ಬಿಸಿಯೂಟ ಸೇವಿಸಬೇಕಾಗಿತ್ತು. ಸದ್ಯ ಪ್ರತ್ಯೇಕವಾಗಿ ಉರ್ದು ಶಾಲೆಗೆ ಬಿಸಿಯೂಟಕ್ಕೆ ಬೇಕಾಗುವ ಅಗತ್ಯ ಸೌಕರ್ಯ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಬಿಸಿಯೂಟಕ್ಕೆ ಯಾವುದೇ ಸಮಸ್ಯೆ ಆಗದು ಎಂದು ತಿಳಿಸಿದರು.
ಆರು ವರ್ಷದ ಪ್ರತಿಯೊಬ್ಬ ಮಕ್ಕಳನ್ನು ಪಾಲಕರು ಶಾಲೆಗೆ ಸೇರಿಸಿದಾಗ ಶಿಕ್ಷಣ ಸಂಬಂಧಿಸಿದ ಯೋಜನೆಗಳು ಸಾರ್ಥಕವಾಗಲಿವೆ. ಮಕ್ಕಳ ಸಂಖ್ಯೆ ದಾಖಲಾತಿ ಹೆಚ್ಚಿಸಿ ಶಿಕ್ಷಣ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಪಿಎಂಸಿ ಸದಸ್ಯ ಬಸವರಾಜ ಆರೇಶಂಕರ, ಗುಂಡಪ್ಪ ಸೊಲ್ಲಾಪುರ, ಬಿಆರ್‌ಪಿ ಕಾಂತೇಶ ಹಲಗಿಮನಿ, ಸಿಆರ್‌ಪಿಗಳಾದ ರವಿ ಕೋಟ್ಯಾಳ್, ಸಿಕಂದರ್, ನಾಗನಾಥ, ಬಸವರಾಜ ಗುತ್ತೇದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.