ಅಂ.ರಾ.ಕ್ರಿಕೆಟ್‌ಗೆ ಮರಳಲು ಸಜ್ಜಾಗಿರುವ ಬೆನ್ನಲ್ಲೇ ಸ್ಮಿತ್‌ಗೆ ಗಾಯ
Team Udayavani, Jan 13, 2019, 1:25 AM IST
ಸಿಡ್ನಿ: ನಿಷೇಧ ಮುಗಿಸಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಲು ಸಜ್ಜಾಗಿರುವ ಆಸ್ಟ್ರೇಲಿಯ ಕ್ರಿಕೆಟಿಗ ಸ್ಟೀವನ್ ಸ್ಮಿತ್‌ಗೆ ಇದೀಗ ಮತ್ತೂಂದು ಆಘಾತ ಎದುರಾಗಿದೆ. ಸ್ಮಿತ್ ಮೊಳಕೈ ನೋವಿಗೆ ತುತ್ತಾಗಿದ್ದಾರೆ.
ಇವರಿಗೆ ಶಸ್ತ್ರ ಚಿಕಿತ್ಸೆ ಅನಿವಾರ್ಯ ಎನ್ನಲಾಗಿದೆ. ಇದು ಸಹಜವಾಗಿಯೇ ಸ್ಮಿತ್ ಅವರನ್ನು ಹಾಗೂ ಆಸೀಸ್ ತಂಡವನ್ನು ತೀವ್ರ ಆತಂಕಕ್ಕೆ ದೂಡಿದೆ. ಮೂಲಗಳ ಪ್ರಕಾರ 28 ವರ್ಷದ ಆಸೀಸ್ ನಾಯಕ ಮುಂದಿನ ವಾರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಇದಾದ ಬಳಿಕ ಇವರು ಕೆಲವು ವಾರ ವಿಶ್ರಾಂತಿ ತೆಗೆದುಕೊಳ್ಳಬೇಕಾಗಲಿದೆ ಎನ್ನಲಾಗಿದೆ.
ಸ್ಮಿತ್ ಮುಂಬರುವ ಏಕದಿನ ವಿಶ್ವಕಪ್ ಹೊತ್ತಿಗೆ ಸುಧಾರಿಸಿಕೊಳ್ಳುತ್ತಾರೋ, ಇಲ್ಲವೋ ಎನ್ನುವುದು ಇನ್ನೂ ಖಚಿತವಿಲ್ಲ. ಜತೆಗೆ ಪಾಕಿಸ್ತಾನ ಸೂಪರ್ ಲೀಗ್ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ ಕೂಟವನ್ನೂ ಕೂಡ ಸ್ಮಿತ್ ಕಳೆದುಕೊಳ್ಳಲಿದ್ದಾರೆ ಎಂದು ಅಂದಾಜಿಸಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದ ವೇಳೆ ಚೆಂಡು ವಿರೂಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಮಿತ್ ಅಮಾನತುಗೊಂಡಿದ್ದರು. ಇವರೊಂದಿಗೆ ಬ್ಯಾನ್‌ಕ್ರಾಫ್ಟ್ ಹಾಗೂ ಆಸೀಸ್ ತಂಡದ ಉಪ ನಾಯಕ ಡೇವಿಡ್ ವಾರ್ನರ್ ಕೂಡ ನಿಷೇಧಗೊಂಡಿದ್ದನ್ನು ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.