ವಿದೇಶಿ ಭಾಷೆಗಳಿಗೂ ಸಿದ್ಧಾಂತ ಶಿಖಾಮಣಿ ಅನುವಾದ: ಕಾಶಿ ಶ್ರೀ
Team Udayavani, Jan 13, 2019, 12:55 AM IST
ಚಿಕ್ಕಮಗಳೂರು: ವೀರಶೈವ ಧರ್ಮದ ಪ್ರಮುಖ ಗ್ರಂಥವಾದ ಸಿದ್ಧಾಂತ ಶಿಖಾಮಣಿಯನ್ನು ಒಂದು ವರ್ಷದೊಳಗೆ ಎಲ್ಲಾ ವಿದೇಶಿ ಭಾಷೆಗಳಿಗೂ ಅನುವಾದ ಮಾಡಲಾಗುವುದು ಎಂದು ಕಾಶಿ ಜಂಗಮವಾಡಿ ಮಠಾಧೀಶ ಜಗದ್ಗುರು ಡಾ|ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ನಡೆದ ಧರ್ಮಸಮ್ಮೇಳನದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಸಿದ್ಧಾಂತ ಶಿಖಾಮಣಿ ಗ್ರಂಥವನ್ನು ಈಗಾಗಲೇ ಕನ್ನಡ, ತೆಲುಗು, ಮರಾಠಿ, ಮಲಯಾಳಂ, ಇಂಗ್ಲಿಷ್ ಸೇರಿ 18 ಭಾಷೆಗಳಿಗೆ ಅನುವಾದಿಸಲಾಗಿದೆ. ಇನ್ನು ಒಂದು ವರ್ಷದೊಳಗೆ ಎಲ್ಲಾ ವಿದೇಶಿ ಭಾಷೆಗಳಿಗೂ ಅನುವಾದಿಸಲು ಉದ್ದೇಶಿಸಲಾಗಿದೆ. ಅಲ್ಲದೆ, ಸಿದ್ಧಾಂತ ಶಿಖಾಮಣಿಯ ಆ್ಯಪ್ ಮತ್ತು ಅದರ ಪಾರಾಯಣದ ಧ್ವನಿ ಮುದ್ರಿಕೆಯನ್ನೂ ಹೊರ ತಂದು ವೆಬ್‌ಸೈಟ್‌ನಲ್ಲಿ ಹಾಕಲಾಗುವುದು. ಪ್ರಧಾನಮಂತ್ರಿ ನರೇಂದ್ರ ಮೋದಿಯವರರಿಂದ ಆ್ಯಪ್, ಧ್ವನಿಮುದ್ರಿಕೆ ಬಿಡುಗಡೆ ಮಾಡಿಸಲಾಗುವುದು ಎಂದರು.
ಇದರಿಂದಾಗಿ ಭಕ್ತರು ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ಉಚಿತವಾಗಿ ತಮ್ಮ ಮೊಬೈಲ್‌ನಲ್ಲೇ ಸಿದ್ಧಾಂತ ಶಿಖಾಮಣಿ ಓದಬಹುದು ಅಥವಾ ಕೇಳಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.