ನನಗೂ ಬಿಜೆಪಿಯಿಂದ ಆಫರ್ ಬಂದಿತ್ತು
Team Udayavani, Jan 13, 2019, 1:15 AM IST
ಕೊಪ್ಪಳ: ಬಿಜೆಪಿಯಿಂದ ನನಗೂ ಆಫರ್ ಬಂದಿತ್ತು ಎಂದು ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯಿಂದ ನನಗೂ ಆಫರ್ ಬಂದಿತ್ತು. ನಾನು ಮರಳಾಗಿಲ್ಲ. ನನ್ನನ್ನು ಜನರು ಕಾಂಗ್ರೆಸ್ ಪಕ್ಷದಿಂದ ಆಯ್ಕೆ ಮಾಡಿದ್ದು, ಕಾಂಗ್ರೆಸ್ಗೆ ದ್ರೋಹ ಮಾಡುವ ವ್ಯಕ್ತಿ ನಾನಲ್ಲ ಎಂದರು.
ಬಿಜೆಪಿ ನಾಯಕರು ಸರ್ಕಾರ ಬೀಳುತ್ತೆ ಎಂದು ಹೇಳಿಕೊಂಡೇ ಕಳೆದ ಆರು ತಿಂಗಳಿಂದ ಸುತ್ತಾಡುತ್ತಿದ್ದಾರೆ. ನಮ್ಮ ಸರ್ಕಾರ ಬೀಳಲ್ಲ. ಐದು ವರ್ಷಗಳ ಕಾಲ ಸುಭದ್ರವಾಗಿ ಸರ್ಕಾರ ನಡೆಯಲಿದೆ. ಸಮ್ಮಿಶ್ರ ಸರ್ಕಾರದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳಿರುವುದು ಸಹಜ. ನಿಗಮ-ಮಂಡಳಿ ನೇಮಕವೂ ಸರಿಯಾಗಿದೆ. ಸಮಸ್ಯೆ ಬಂದರೂ ಅವೆಲ್ಲವುಗಳನ್ನೂ ಪಕ್ಷದ ಹಿರಿಯರು ಬಗೆಹರಿಸುತ್ತಾರೆ ಎಂದರು.
ಪೌರಾಡಳಿತ ಖಾತೆ ಬಗ್ಗೆ ನಾನಿನ್ನೂ ಮಾಹಿತಿ ಪಡೆಯಬೇಕಿದೆ. ಅಧಿಕಾರಿಗಳೊಂದಿಗೆ ಈಗಾಗಲೇ ನಾಲ್ಕಾರು ಸಭೆ ನಡೆಸಿ ಹಲವು ಬೆಳವಣಿಗೆಗಳ ಕುರಿತು ಅರಿತಿದ್ದೇನೆ. ರಾಜ್ಯದಲ್ಲಿ ಫಾರಂ-3 ಸಮಸ್ಯೆಯಿದೆ. ಇದು ರಾಜ್ಯಮಟ್ಟದ ಸಮಸ್ಯೆಯೂ ಹೌದು. ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚಿಸಿ ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನಿಸುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.