ತನಿಖಾ ವರದಿ ಸರಳವಾಗಿರಲಿ
Team Udayavani, Jan 13, 2019, 6:27 AM IST
ಬೆಂಗಳೂರು: ನ್ಯಾಯಾಲಯಗಳು ಆರೋಪಿಗಳಿಗೆ ಶಿಕ್ಷೆ ವಿಧಿಸಲು ತನಿಖಾಧಿಕಾರಿಗಳ ವರದಿ ಪ್ರಮುಖ ಪಾತ್ರವಹಿಸಲಿದ್ದು ಆ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳ ವರದಿ ಮಂಡನೆ ಯಾವಾಗಲೂ ಸರಳ ಮತ್ತು ಅಷ್ಟೇ ಪರಿಣಾಮಕಾರಿಯಾಗಿರಬೇಕು ಎಂದು ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅಭಿಪ್ರಾಯಪಟ್ಟರು.
ನಗರದ ನಿಮ್ಹಾನ್ಸ್ ಸಭಾಂಗಣದಲ್ಲಿ ನ್ಯಾಯ ವಿಜ್ಞಾನ ಪ್ರಯೋಗಾಲಯಗಳ ನಿರ್ದೇಶನಾಲಯ ಹಮ್ಮಿಕೊಂಡಿದ್ದ “ನ್ಯಾಯ ವಿಜ್ಞಾನದಲ್ಲಿ ಉದಯೋನ್ಮುಖ ಬೆಳವಣಿಗೆಗಳ’ ಕುರಿತ ರಾಷ್ಟ್ರೀಯ ಸಮ್ಮೇಳನದ ಸಮಾರೋಪದಲ್ಲಿ ಮಾತನಾಡಿದ ಅವರು, ತನಿಖಾಧಿಕಾರಿಗಳ ವರದಿಗಳು ಯಾವುದೇ ರೀತಿಯ ಸಂಶಯಗಳಿಗೆ ಎಡೆ ಮಾಡಿಕೊಡದ ರೀತಿಯಲ್ಲಿ ಸಿದ್ಧವಾಗಿರಬೇಕು ಎಂದು ಹೇಳಿದರು.
ನ್ಯಾಯಾಲದಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ತನಿಖಾಧಿಕಾರಿಗಳು ವರದಿ ಮಂಡಿಸುವ ಮುನ್ನ ಅವರಿಗೆ ಆ ವರದಿಯ ಬಗ್ಗೆ ಖಚಿತತೆ ಇರಬೇಕು. ತನಿಖಾ ವರದಿ ಮಂಡನೆ ಮಾಡುವಾಗ ನಾನೇನು ಪ್ರಸ್ತುತ ಪಡಿಸುತ್ತಿದ್ದೇನೆ ಎಂಬುದರ ಅರಿವು ಇರಬೇಕು.
ವರದಿ ಮಂಡನೆ ಯಾವಾಗಲೂ ಚಿಕ್ಕದಾಗಿ, ಚೊಕ್ಕವಾಗಿ, ಸಮಗ್ರ ವಿಷಯವನ್ನು ಒಳಗೊಂಡು ಹೆಚ್ಚು ಪರಿಣಾಮಕಾರಿಯಾಗಿರಬೇಕು. ಹೀಗಿದ್ದರೆ ಶೀಘ್ರವಾಗಿ ತೀಫುì ನೀಡಲು ಸಾಧ್ಯ ಎಂದು ತಿಳಿಸಿದರು. ಇದೇ ವೇಳೆ ನ್ಯಾಯ ವಿಜ್ಞಾನ ಪ್ರಯೋಗಾಲಯಗಳ ನಿರ್ದೇಶನಾಲಯ “ನ್ಯಾಯ ವಿಜ್ಞಾನ’ದ ಬಗ್ಗೆ ಹಮ್ಮಿಕೊಂಡಿದ್ದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕೇಂದ್ರ ಗೃಹ ಸಚಿವಾಲಯದ ಹಿರಿಯ ಅಧಿಕಾರಿ ಡಾ.ಎಸ್.ಕೆ.ಜೈನ್ ಮಾತನಾಡಿ, ತಂತ್ರಜ್ಞಾನ ಕ್ಷೇತ್ರ ಇಂದು ಹೆಚ್ಚು ಬೆಳವಣಿಗೆ ಸಾಧಿಸಿದ್ದು, ಅಪರಾಧಿಗಳನ್ನು ಶೀಘ್ರದಲ್ಲಿ ಪತ್ತೆ ಹಚ್ಚಲು ಇದರ ಸದುಪಯೋಗ ಮಾಡಿಕೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.
ಮೊಬೈಲ್, ಟ್ವಿಟರ್ ಸೇರಿದಂತೆ ಅನೇಕ ಸಾಮಾಜಿಕ ಜಾಲ ತಾಣಗಳಿಂದಲೂ ಇಂದು ಸಮಾಜ ಘಾತುಕ ಶಕ್ತಿಗಳನ್ನು ಪತ್ತೆಹಚ್ಚಬಹುದಾಗಿದ್ದು, ಗುಣಮಟ್ಟದ ಸಾಕ್ಷÂ ಸಂಗ್ರಹಕ್ಕೆ ಹೆಚ್ಚು ಒತ್ತು ನೀಡಿ ಎಂದು ಸಲಹೆ ನೀಡಿದರು. ಕೆಲವು ಪ್ರಕರಣಗಳ್ಳಲ್ಲಿ ಫಲಿತಾಂಶ ಇರುವುದಿಲ್ಲ.ಆದರೆ ಸರ್ಕಾರದ ಹಣ ಸಾಕಷ್ಟು ವೆಚ್ಚವಾಗುತ್ತದೆ. ಈ ಬಗ್ಗೆ ಹಿರಿಯ ಅಧಿಕಾರಿಗಳು ಹೆಚ್ಚು ಗಮನ ಹರಿಸುವಂತೆ ಸೂಚಿಸಿದರು.
ಡಿಜಿ ಐಜಿಪಿ ನೀಲಮಣಿ ಎನ್ ರಾಜು ಮಾತನಾಡಿ, ಎರಡು ದಿನಗಳ ಈ ರಾಷ್ಟ್ರೀಯ ಸಮ್ಮೇಳನದಲ್ಲಿ ಯುವ ವಿಜ್ಞಾನಿಗಳು ಮತ್ತು ತನಿಖಾಧಿಕಾರಿಗಳು ಸೇರಿದಂತೆ 120 ಮಂದಿ ಪಾಲ್ಗೊಂಡು ಅಪರಾಧ ಪತ್ತೆ ಕುರಿತ ಹಲವು ವಿಷಯಗಳ ಕುರಿತು ಬೆಳಕು ಚೆಲ್ಲಿದರು ಎಂದರು.
ನ್ಯಾಯ ವಿಜ್ಞಾನ ಪ್ರಯೋಗಾಲಯಗಳ ನಿರ್ದೇಶನಾಲಯ ಕಳೆದ ಐವತ್ತು ವರ್ಷಗಳಿಂದಲೂ ಉತ್ತಮ ಸೇವೆ ನೀಡುತ್ತಿದ್ದು, ಭವಿಷ್ಯತ್ತಿನ ಮತ್ತಷ್ಟು ಉತ್ತಮ ಕೆಲಸಗಳನ್ನು ಮಾಡಲಿ ಎಂದು ಆಶಿಸಿದರು. ನ್ಯಾಯ ವಿಜ್ಞಾನ ಪ್ರಯೋಗಾಲಯಗಳ ನಿರ್ದೇಶನಾಲಯದ ನಿರ್ದೇಶಕಿ ಇಶಾ ಪಂಥ್, ಸಿಐಡಿಯ ಎಡಿಜಿಪಿ ಪ್ರವೀಣ್ ಸೂಧ್, ಹಿರಿಯ ಪೋಲಿಸ್ ಅಧಿಕಾರಿ ಸಲೀಂ, ಎ.ಎಂ.ಪ್ರಸಾದ್ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Badminton; ಸಯ್ಯದ್ ಮೋದಿ ಇಂಟರ್‌ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್‌ಫೈನಲಿಗೆ
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Cricket; ವೇಗಿ ಸಿದ್ದಾರ್ಥ್ ಕೌಲ್ ನಿವೃತ್ತಿ
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.