ಸುಯೋಗ ಬಜಾರ್ ಪ್ರದರ್ಶನಕ್ಕೆ ಚಾಲನೆ
Team Udayavani, Jan 13, 2019, 7:23 AM IST
ಮೈಸೂರು: ಯೋಗ-ಸಂಬಂಧಿತ ಉತ್ಪನ್ನಗಳಲ್ಲಿ ಪರಿಣತಿ ಹೊಂದಿರುವ ನಗರದ ಸುಯೋಗ ಮಳಿಗೆಯಲ್ಲಿ ಆಯೋಜಿಸಿರುವ ಎರಡು ದಿನಗಳ ಸುಯೋಗ ಬಜಾರ್ ಪ್ರದರ್ಶನಕ್ಕೆ ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಚಾಲನೆ ನೀಡಿದರು.
ಗ್ರಾಹಕರನ್ನು ಮತ್ತು ಪ್ರದರ್ಶಕರನ್ನು ಒಟ್ಟುಗೂಡಿಸುವ ಎರಡು ದಿನಗಳ ಈ ಮೇಳದಲ್ಲಿ ಉದಯೋನ್ಮುಖ ಕಲಾವಿದರು, ಕುಶಲಕರ್ಮಿಗಳು, ವಿನ್ಯಾಸಕಾರರು ಮತ್ತು ರಚನೆಕಾರರ ಮೂಲ ಆಭರಣಗಳು, ಉಡುಪುಗಳು, ಪಾದರಕ್ಷೆಗಳು, ಮನೆಯ ಅಲಂಕಾರಿಕ ವಸ್ತುಗಳು ಮತ್ತು ಕಲಾಕೃತಿಗಳ ಸಂಗ್ರಹಗಳನ್ನು ಕಾಣಬಹುದು.
ಗ್ರಾಹಕರು ಟ್ಯಾರೋಟ್ ಕಾರ್ಡ್, ಸಂಖ್ಯಾಶಾಸ್ತ್ರ, ಸ್ಫಟಿಕ ಚಿಕಿತ್ಸೆ, ಮತ್ತು ಹಬ್ಬದ ಇತರ ವಿನೋದ ಚಟುವಟಿಕೆಗಳನ್ನು ಸಹ ಅನುಭವಿಸಬಹುದು. ಸುಯೋಗ ಮಳಿಗೆಯ ಮಾಲಿಕರಾದ ಶೃತಿ ರಂಗ ಮಾತನಾಡಿ, ಸುಯೋಗ ಬಜಾರ್‌ನಂತಹ ಉತ್ಸವ ಸ್ಥಳೀಯ ಕುಶಲಕರ್ಮಿಗಳ ಕೌಶಲ ಮತ್ತು ಕಲೆಯ ಮೇಲೆ, ಅವರ ಕರಕುಶಲ ಕೆಲಸದ ಮೇಲೆ ಬೆಳಕು ಚೆಲ್ಲುತ್ತದೆ.
ಗ್ರಾಹಕರಿಗೆ ಬೇಕಾದ ಎಲ್ಲಾ ಅಗತ್ಯ ವಸ್ತುಗಳು ಒಂದೇ ವೇದಿಕೆಯಲ್ಲಿ ಸಿಗುವುದಲ್ಲದೇ, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಸ್ಥಳೀಯ ಕಲಾವಿದರಿಗೆ ಒಂದು ವೇದಿಕೆಯನ್ನು ಒದಗಿಸುವ ಗುರಿ ಈ ಉತ್ಸವದ ಹಿಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.