ದಾಸೋಹಕ್ಕೆ 7 ಕ್ವಿಂಟಲ್‌ ಉಪ್ಪಿನಕಾಯಿ


Team Udayavani, Jan 13, 2019, 10:33 AM IST

13-january-19.jpg

ಕೊಪ್ಪಳ: ಉತ್ತರ ಕರ್ನಾಟಕದ ಕುಂಭಮೇಳವೆಂದೇ ಖ್ಯಾತಿ ಪಡೆದ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ವಿವಿಧೆಡೆಯಿಂದ ಭಕ್ತರು ದಾಸೋಹ ಮಂಟಕ್ಕೆ ಧವಸ, ಧಾನ್ಯ ಸೇರಿದಂತೆ ರೊಟ್ಟಿ ತಂದು ಕೊಡುತ್ತಿದ್ದಾರೆ. ಅಜ್ಜನ ಜಾತ್ರೆಗೆ 7 ಕ್ವಿಂಟಲ್‌ ಉಪ್ಪಿನಕಾಯಿ ಚಟ್ನಿ ತಂದು ಅರ್ಪಿಸಿದ್ದಾರೆ.

ಜಾತ್ರಾ ಮಹೋತ್ಸವ ಜ. 22ರಿಂದ ಆರಂಭವಾಗಲಿದೆ. ಜಾತ್ರೆಗೆ ಬರುವ ಲಕ್ಷಾಂತರ ಭಕ್ತ ಸಮೂಹಕ್ಕೆ ದಾಸೋಹ ಸೇವೆ ಕಲ್ಪಿಸಲು ಕೊಪ್ಪಳ ಗ್ರಾಮೀಣ ಪೊಲೀಸ್‌ ಇಲಾಖೆ ಸಿಪಿಐ ಭೀಮಣ್ಣ ಸೂರಿ ಅವರು 7 ಕ್ವಿಂಟಲ್‌ ಉಪ್ಪಿನ ಕಾಯಿ ಚಟ್ನಿ ಕೊಟ್ಟು ಭಕ್ತಿಯ ಸೇವೆ ಅರ್ಪಿಸಿದ್ದಾರೆ. ಇನ್ನೂ ಮಹಾದಾಸೋಹಕ್ಕೆ ಗಂಗಾವತಿ ತಾಲೂಕಿನ ಜೀರಾಳ್‌ಕಲ್ಗುಡಿ ಗ್ರಾಮದ ಭಕ್ತರು 51 ಚೀಲ ಭತ್ತ, 1 ಪ್ಯಾಕೆಟ್ ಅಕ್ಕಿ, 4000 ರೊಟ್ಟಿ, ನೆರೆಬೆಂಚಿ ಗ್ರಾಮದ ಭಕ್ತರಿಂದ 500 ರೊಟ್ಟಿಗಳನ್ನು ಸಮರ್ಪಿಸಿದ್ದಾರೆ. ಇನ್ನುಳಿದ ಗ್ರಾಮಗಳಿಂದಲೂ ದವಸ-ಧಾನ್ಯ ಬರಲಾರಂಭಿಸಿವೆ.

ಅಂಗಡಿಗಳ ವ್ಯವಸ್ಥೆ: ಗವಿಮಠದ ಆವರಣದ ಮುಂಭಾಗದಲ್ಲಿನ 12 ಎಕರೆ ವಿಸ್ತಾರದ ಮೈದಾನದಲ್ಲಿ 900-1000 ಅಂಗಡಿಗಳಿಗೆ ವ್ಯವಸ್ಥೆ ಮಾಡಲಾಗಿದೆ. ಈ ವಿಶಾಲ ಆವರಣದಲ್ಲಿ ವೈವಿಧ್ಯಮಯ ಅಂಗಡಿ-ಮುಂಗಟ್ಟುಗಳು ತೆರೆದುಕೊಳ್ಳಲಿವೆ. ಅಂಗಡಿಗಳಿಗೆ ತೆರಳುವ ಮಹಾದ್ವಾರಗಳ ನಿರ್ಮಾಣದ ಕಾರ್ಯವೂ ಭರದಿಂದ ಸಾಗಿದೆ. ಗವಿಮಠದ ಸಂಸ್ಥಾಪಕ ಶಿವಯೋಗಿಗಳಾದ ರುದ್ರಮುನಿ ಮಹಾಸ್ವಾಮಿಗಳು, ಶಿವಶಾಂತವೀರ ಮಹಾಸ್ವಾಮಿಗಳು, ಮರಿಶಾಂತವೀರ ಮಹಾಸ್ವಾಮಿಗಳು ಹಾಗೂ ಗವಿಸಿದ್ಧೇಶ್ವರ ಮಹಾಸ್ವಾಮಿಗಳ ಹೆಸರಿನಲ್ಲಿ ನಿರ್ಮಾಣಗೊಳ್ಳುತ್ತಿವೆ. ಜಾತ್ರೆ ಆವರಣದ ಮಳಿಗೆಗಳಲ್ಲಿ 12 ಸಾಲುಗಳಿದ್ದು, ಪ್ರತಿ ಸಾಲುಗಳ ಮಧ್ಯೆ ಜನಸಂದಣಿ ಆಗದಂತೆ ಸಮತಟ್ಟಾದ ರಸ್ತೆಗಳನ್ನು ನಿರ್ಮಿಸಲಾಗಿದೆ.

ಸ್ವಚ್ಛತೆಗೆ ಕೈ ಜೋಡಿಸಿದ ನಗರಸಭೆ: ಜಾತ್ರಾ ಮಹೋತ್ಸವದ ಅಂಗವಾಗಿ ನಗರಸಭೆ ಸ್ವಚ್ಛತಾ ಕಾರ್ಯ ಕೈಗೊಳ್ಳುವಲ್ಲಿ ಗವಿಮಠ ಜೊತೆ ಕೈ ಜೋಡಿಸಿದೆ. ಜಾತ್ರಾ ಮಳಿಗೆಗಳ ಸ್ಥಳದಲ್ಲಿ ಮೂಲ ಸೌಕರ್ಯ ಒದಗಿಸಲಾಗುತ್ತದೆ. ಜೊತೆಗೆ ಅಂಗಡಿಕಾರರಿಗೆ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಯ್ದುಕೊಳ್ಳಲು ಈ ಮಳಿಗೆಗಳ ಉಸ್ತುವಾರಿ ಸಮಿತಿ ನಿರ್ದೇಶಿಸಲಾಗಿದೆ.

ಮಠದ ಸೇವೆಯಲ್ಲಿ ಭಕ್ತಾದಿಗಳು: ಜಾತ್ರೆಯ ಅಂಗವಾಗಿ ಎರಡು ತಿಂಗಳ ಕಾಲ ಮಠದ ಸೇವೆಯಲ್ಲಿ ಯತ್ನಟ್ಟಿ ಭಕ್ತಾದಿಗಳು ನಿರತರಾಗಿದ್ದಾರೆ. ಮಠದ ಆವರಣ, ಕೆರೆ ದಂಡೆ, ಕೈಲಾಸ ಮಂಟಪ, ಆರ್ಯುವೇದ ಕಾಲೇಜು, ಪಬ್ಲಿಕ್‌ ಶಾಲೆ, ಗವಿಸಿದ್ಧೇಶ್ವರ ಪ್ರೌಢಶಾಲೆ, ಬಿ.ಇಡಿ ಕಾಲೇಜು ಹಿಂಭಾಗ, 2000 ಸಾವಿರ ವಿದ್ಯಾರ್ಥಿಗಳ ಹಾಸ್ಟೆಲ್‌ ಹತ್ತಿರ, ವಿದ್ಯಾರ್ಥಿನಿಯರ ವಸತಿ ನಿಲಯದ ಹತ್ತಿರ, ಪದವಿ, ಪಪೂ ಕಾಲೇಜು ಆವರಣ, ಮಠದ ಸಂಪೂರ್ಣ ಗುಡ್ಡ, ಮಹಾದಾಸೋಹದ ಮಂಟಪ, ಒಟ್ಟಾರೆ ಈಡಿ ಮಠದ ಎಲ್ಲಾ ಪ್ರದೇಶವನ್ನು ಸ್ವಚ್ಛಗೊಳಿಸುವ, ನೆಲದ ತಗ್ಗು ದಿನ್ನೆಗಳನ್ನು ಸಮತಟ್ಟು ಮಾಡಿದ್ದಾರೆ. ನಿರಂತರ 30 ಭಕ್ತರು ಸೇವೆ ಸಲ್ಲಿಸಿದ್ದಾರೆ.

ಪ್ರಬಂಧ ಸ್ಪರ್ಧೆ: ಜಾತ್ರಾ ಮಹೋತ್ಸವದ ಅಂಗವಾಗಿ ನೇತ್ರದಾನದ ಜಾಗೃತಿ ಹಿನ್ನೆಲೆಯಲ್ಲಿ ‘ಅಂಧತ್ವ ಕಾರಣ ಮತ್ತು ಪರಿಹಾರೋಪಾಯಗಳು’ ಎಂಬ ವಿಷಯದ ಮೇಲೆ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ ಶನಿವಾರ ಗವಿಸಿದ್ಧೇಶ್ವರ ಮಹಾವಿದ್ಯಾಲಯದಲ್ಲಿ ಜರುಗಿತು. ಪ್ರಬಂಧ ಸ್ಪರ್ಧೆಯಲ್ಲಿ ಶಾಲಾ ಮಕ್ಕಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. 74 ಪ್ರಾಥಮಿಕ ಹಾಗೂ ಪ್ರೌಡಶಾಲಾ ವಿದ್ಯಾಥಿಗಳು ಹಾಗೂ 15 ಕಾಲೇಜು ಮಟ್ಟದ ವಿದ್ಯಾರ್ಥಿಗಳು ಪ್ರಬಂಧ ಬರೆದರು.

ಟಾಪ್ ನ್ಯೂಸ್

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.