ಎಸ್‌ಪಿ-ಬಿಎಸ್‌ಪಿ; ಮೈತ್ರಿ ಧರ್ಮ ಪಾಲನೆಯಾಗಲಿ 


Team Udayavani, Jan 14, 2019, 12:30 AM IST

sp-bsp.jpg

ರಾಜಕೀಯದಲ್ಲಿ ಶಾಶ್ವತ ಮಿತ್ರರೂ ಇಲ್ಲ ಶಾಶ್ವತ ಶತ್ರುಗಳೂ ಇಲ್ಲ ಎನ್ನುವುದಕ್ಕೆ ತಾಜಾ ಉದಾಹರಣೆ ಉತ್ತರ ಪ್ರದೇಶದ ಸಮಾಜವಾದಿ ಪಾರ್ಟಿ ಮತ್ತು ಬಹುಜನ ಸಮಾಜ ಪಾರ್ಟಿ ನಡುವಣ ಮೈತ್ರಿ. ಮುಂಬರುವ ಲೋಕಸಭಾ ಚುನಾವಣೆಯನ್ನು ಜತೆಯಾಗಿ ಎದುರಿಸಲು ತೀರ್ಮಾನಿಸಿರುವ ಉತ್ತರ ಪ್ರದೇಶದ ಬಲಾಡ್ಯ ಪ್ರಾದೇಶಿಕ ಪಕ್ಷಗಳಾಗಿರುವ ಎಸ್‌ಪಿ ಮತ್ತು ಬಿಎಸ್‌ಪಿ ನಡುವೆ ಸೀಟು ಹಂಚಿಕೆಯೂ ಅಂತಿಮಗೊಂಡಿದೆ. ಇದು ಉತ್ತರ ಪ್ರದೇಶಕ್ಕೆ ಸೀಮಿತವಾಗಿರುವ ಮೈತ್ರಿಯಾಗಿದ್ದರೂ ಒಟ್ಟಾರೆಯಾಗಿ ಇಡೀ ದೇಶದ ಹಾಗೂ ನಿರ್ದಿಷ್ಟವಾಗಿ ಹಿಂದಿ ವಲಯವೆಂದು ಗುರುತಿಸಲ್ಪಡುವ ಮಧ್ಯ ಪ್ರದೇಶ, ರಾಜಸ್ಥಾನ, ಬಿಹಾರ ಮತ್ತಿತರ ರಾಜ್ಯಗಳ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆ. 

ಅಂತೆಯೇ ಈ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ಗೆ ಯಾವುದೇ ಪಾತ್ರ ಇಲ್ಲ ಎನ್ನುವುದು ಇನ್ನೊಂದು ಗಮನಾರ್ಹ ಅಂಶ. ಎಲ್ಲ ವಿಪಕ್ಷಗಳನ್ನು ಒಟ್ಟುಗೂಡಿಸಿ ಮಹಾಘಟಬಂಧನ್‌ ಒಂದನ್ನು ರಚಿಸಿಕೊಂಡು ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಮಣಿಸಿ ಅವಕಾಶ ಸಿಕ್ಕಿದರೆ ಪ್ರಧಾನಿಯೂ ಆಗಿ ಬಿಡುವುದು ಎಂಬ ರಾಹುಲ್‌ ಗಾಂಧಿಯ ಲೆಕ್ಕಾಚಾರಗಳನ್ನು ಎಸ್‌ಪಿ-ಬಿಎಸ್‌ಪಿ ಮೈತ್ರಿ ಬುಡಮೇಲು ಮಾಡಿದೆ. ದಿಲ್ಲಿಯ ಅಧಿಕಾರ ಗದ್ದುಗೆಯ ರಾಜರಸ್ತೆ ಸಾಗು ವುದು ಲಖನೌ ಮೂಲಕ ಎನ್ನುವುದು ರಾಜಕೀಯದಲ್ಲಿ ಪ್ರಚಲಿತದಲ್ಲಿರುವ ಮಾತು. 

ದೇಶದಲ್ಲೇ ಅತ್ಯಧಿಕ 80 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಉತ್ತರ ಪ್ರದೇಶವು ದಿಲ್ಲಿ ಗದ್ದುಗೆಯೇರಲು ನಿರ್ಣಾಯಕ. 2014ರಲ್ಲಿ ಬಿಜೆಪಿ ಈ ರಾಜ್ಯದಲ್ಲಿ 71 ಸ್ಥಾನಗಳನ್ನು ಗೆಲ್ಲುವ ಮೂಲಕ ಎಸ್‌ಪಿ, ಬಿಎಸ್‌ಪಿ ಮತ್ತು ಕಾಂಗ್ರೆಸ್‌ ಅನ್ನು ಗುಡಿಸಿ ಹಾಕಿತ್ತು. ಲೋಕಸಭೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತಗಳಿಸಿಕೊಳ್ಳುವಲ್ಲಿ ಉತ್ತರ ಪ್ರದೇಶದ ಪಾತ್ರ ಮುಖ್ಯವಾಗಿತ್ತು. ಈ ರಾಜ್ಯದ ಫ‌ಲಿತಾಂಶ ದೇಶದ ರಾಜಕೀಯ ಭವಿಷ್ಯನ್ನು ನಿರ್ಧರಿಸುವುದರಿಂದ ಇಲ್ಲಾಗುವ ರಾಜಕೀಯ ಬೆಳವಣಿಗೆಗಳನ್ನು ಇಡೀ ದೇಶ ಕುತೂಹಲದಿಂದ ಗಮನಿಸುತ್ತದೆ. ಇಂಥ ರಾಜ್ಯದಲ್ಲೇ ಏನೇನೂ ಅಸ್ತಿತ್ವ ಇಲ್ಲದ ಕಾಂಗ್ರೆಸ್‌ಗೆ ದಿಲ್ಲಿ ಅಧಿಕಾರ ದಕ್ಕಿಸಿಕೊಳ್ಳುವುದು ಅಷ್ಟು ಸುಲಭವಲ್ಲ. 

ಎಸ್‌ಪಿ ಮತ್ತು ಬಿಎಸ್‌ಪಿ ನಡುವಿನ ಮೈತ್ರಿಗೆ ಸ್ಫೂರ್ತಿಯಾಗಿರುವುದು ಕಳೆದ ವರ್ಷ ಗೋರಖ್‌ಪುರ ಮತ್ತು ಫ‌ೂಲ್‌ಪುರ ಲೋಕಸಭಾ ಕ್ಷೇತ್ರಗಳ ಉಪಚುನಾವಣೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಿಂದ ತೆರವಾದ ಈ ಎರಡು ಕ್ಷೇತ್ರಗಳಲ್ಲಿ ಎಸ್‌ಪಿ ಮತ್ತು ಬಿಎಸ್‌ಪಿ ಜತೆಯಾಗಿ ಸ್ಪರ್ಧಿಸಿ ಗೆದ್ದಿದ್ದವು. ಕಾಂಗ್ರೆಸ್‌ ಕೂಡಾ ಜತೆಗಿತ್ತು. ಈ ಗೆಲುವಿನ ಬಳಿಕವೇ ಉತ್ತರ ಪ್ರದೇಶ ಮಾತ್ರವಲ್ಲದೆ ಇತರೆಡೆಗಳಲ್ಲೂ ಎಲ್ಲ ವಿಪಕ್ಷಗಳು ಜತೆಯಾದರೆ ಮೋದಿಯನ್ನು ಮಣಿಸಬಹುದು ಎಂಬ ವಿಶ್ವಾಸ ಮೂಡಿದ್ದು. 

ಇದಕ್ಕೂ ಮೊದಲು ಮೋದಿಯ ಪ್ರಚಂಡ ಅಲೆಯೆದುರು ಎಲ್ಲ ಪಕ್ಷಗಳು ಥರಗುಟ್ಟಿದ್ದವು. ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ 403 ಸ್ಥಾನಗಳ ಪೈಕಿ ಎಸ್‌ಪಿ 47ರಲ್ಲೂ, ಬಿಎಸ್‌ಪಿ 19 ಸ್ಥಾನಗಳಲ್ಲೂ ಗೆದ್ದಿವೆ. ಕಾಂಗ್ರೆಸ್‌ ಸಾಧನೆ ಒಂದಂಕಿ. ಈ ಚುನಾವಣೆಯಲ್ಲಿ ಎಸ್‌ಪಿ ಮತ್ತು ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿದ್ದವು. ಇದರಿಂದ ಎಸ್‌ಪಿಗೇನೂ ಲಾಭವಾಗಲಿಲ್ಲ. 

ಹೀಗಾಗಿ ಈ ಸಲ ಎಸ್‌ಪಿ ಉದ್ದೇಶಪೂರ್ವಕವಾಗಿಯೇ ಕಾಂಗ್ರೆಸ್ಸನ್ನು ದೂರ ವಿ ಟ್ಟಿದೆ. ಬಿಜೆಪಿ ಶೇ.40 ಮತಗಳಿಸಿದರೂ 312 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದೇ ವೇಳೆ ಎಸ್‌ಪಿ ಮತ್ತು ಬಿಎಸ್‌ಪಿಯ ಒಟ್ಟು ಮತಗಳಿಕೆ ಶೇ. 44. ಈ ಒಂದು ಲೆಕ್ಕಾಚಾರವೇ ಒಂದು ಕಾಲದಲ್ಲಿ ಹಾವು ಮುಂಗುಸಿಯಂತೆ ಕಚ್ಚಾ ಡುತ್ತಿದ್ದ ಮಾಯಾವತಿ ಮತ್ತು ಅಖೀಲೇಶ್‌ ಯಾದವ್‌ ಜತೆಯಾಗುವಂತೆ ಮಾಡಿದ್ದು. 

ಬಲಾಡ್ಯ ಜಾತಿಗಳಾಗಿರುವ ಯಾದವರು, ಜಾಟರು ಮತ್ತು ಮುಸ್ಲಿಮರ ಮತಗಳನ್ನು ಗಳಿಸಿದರೆ ಗೆಲುವು ಸುಲಭ ಎನ್ನುವುದು ಈ ಮೈತ್ರಿಕೂಟದ ಸರಳ ಲೆಕ್ಕಾಚಾರ. ಹೀಗೆ ಪ್ರಾದೇಶಿಕ ಪಕ್ಷಗಳು ಒಗ್ಗೂಡಿರುವುದರಿಂದ ಇದೀಗ ಬಿಜೆಪಿ ತನ್ನ ರಣತಂತ್ರವನ್ನು ಬದಲಾಯಿಸುವ ಅನಿವಾರ್ಯತೆ ಇದೆ. ಈ ಮೂರು ಸಮುದಾಯಗಳನ್ನು ಬಿಟ್ಟು ಉಳಿದ ಜಾತಿಗಳನ್ನು ಮತ್ತು ಹಿಂದು ಮತಗಳನ್ನು ಒಗ್ಗೂಡಿಸಿದರೆ ಮಾತ್ರ ಉತ್ತರ ಪ್ರದೇಶದಲ್ಲಿ ತೃಪ್ತಿಕರ ಸ್ಥಾನಗಳನ್ನು ಗೆಲ್ಲಲು ಬಿಜೆಪಿಗೆ ಸಾಧ್ಯವಾಗಬಹುದು. 

ಬಹುಪಕ್ಷೀಯ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಭಿನ್ನ ಸಿದ್ಧಾಂತಗಳನ್ನು ಹೊಂದಿರುವ ರಾಜಕೀಯ ಪಕ್ಷಗಳು ಚುನಾವಣೆ ಸನ್ನಿಹಿತವಾಗುವಾಗ ಮೈತ್ರಿ ಮಾಡಿಕೊಳ್ಳುವುದು ಹೊಸದೇನೂ ಅಲ್ಲ. ಇಂಥ ಹಲವು ಮೈತ್ರಿಕೂಟಗಳನ್ನು ದೇಶ ಈ ಹಿಂದೆಯೂ ಕಂಡಿದೆ. ನೂರಾರು ಪಕ್ಷಗಳಿರುವುದರಿಂದ ಏಕಪಕ್ಷದ ಸರಕಾರವನ್ನು ಕಲ್ಪಿಸಿಕೊಳ್ಳಲಾರದಷ್ಟು ದೇಶದ ರಾಜಕೀಯ ಸ್ಥಿತ್ಯಂತರಗಳನ್ನು ಕಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಅನಿವಾರ್ಯವೂ ಆಗಿರಬಹುದು. ಆದರೆ ಮೈತ್ರಿ ಮಾಡಿಕೊಂಡ ಬಳಿಕ ಮೈತ್ರಿಧರ್ಮವನ್ನು ಪಾಲಿಸಿಕೊಂಡು ಹೋಗುವುದು ಪಕ್ಷಗಳ ಜವಾಬ್ದಾರಿ. 

ಟಾಪ್ ನ್ಯೂಸ್

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-national-emblem

National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ

MM-Singh

ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್‌ ಸಿಂಗ್‌

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

1-geeta

Udupi; ಬೃಹತ್ ಗೀತೋತ್ಸವ: ಭಗವದ್ಗೀತಾ ಯಜ್ಞ ಸಂಪನ್ನ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.