ಎಲ್ಲ ರೈತರ ಸಾಲಮನ್ನಾ ಖಚಿತ
Team Udayavani, Jan 14, 2019, 6:02 AM IST
ಗುಳೇದಗುಡ್ಡ: ಸಮ್ಮಿಶ್ರ ಸರಕಾರದಲ್ಲಿ ಎಲ್ಲ ರೈತರ ಸಾಲ ಮನ್ನಾ ಮಾಡುವ ಹಂತದಲ್ಲಿದ್ದೇವೆ. ಕಾರಣ ಯಾವ ರೈತರೂ ಆತಂಕ ಪಡುವಂತಿಲ್ಲ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದರು.
ಇಲ್ಲಿಯ ಲಕ್ಷ್ಮೀ ಸಹಕಾರಿ ಬ್ಯಾಂಕಿನ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ವಾಣಿಜ್ಯ ಬ್ಯಾಂಕುಗಳಲ್ಲಿಯ ರೈತರ ಸುಮಾರು 45 ಸಾವಿರ ಕೋಟಿ ಸಾಲ ಮನ್ನಾ ಮಾಡಲಾಗಿದ್ದು, ರಾಜ್ಯ ದೇಶದಲ್ಲೇ ಮಾದರಿಯಾಗಿದೆ. ದೇಶದಲ್ಲಿ ಎಲ್ಲ ರಾಜ್ಯಗಳು ಕರ್ನಾಟಕವನ್ನು ಮಾದರಿಯನ್ನಾಗಿ ಇಟ್ಟುಕೊಂಡು ಸಾಲಮನ್ನಾ ಮಾಡಲು ಮುಂದೆ ಬರುತ್ತಿವೆ ಎಂದರು.
ರಾಜ್ಯದಲ್ಲಿ 1,69,534 ರೈತರಿಗೆ ಒಟ್ಟು ರೂ 963ಕೋಟಿ ಸಾಲಮನ್ನಾ ಆಗಿದೆ. ಇನ್ನೂ ಮಾಡಲಾಗುತ್ತಿದೆ. ನವೆಂಬರ್ ತಿಂಗಳ ಸಾಲದ ಹಣ ಬಿಡುಗಡೆ ಮಾಡಿದ್ದೇವೆ. ಡಿಸೆಂಬರ್ ತಿಂಗಳಲ್ಲಿನ ಸಾಲದ ಹಣ ಬಿಡುಗಡೆ ಮಾಡುತ್ತೇವೆ. ಜನವರಿ ಹಾಗೂ ಮುಂದಿನ ತಿಂಗಳಲ್ಲೂ ಸಾಲ ಮನ್ನಾದ ಹಣ ಬಿಡುಗಡೆ ಮಾಡುತ್ತೇವೆ. ಬ್ಯಾಂಕುಗಳು ಸಾಲಕ್ಕೆ ಒತ್ತಾಯಿಸದಂತೆ ನಿರ್ದೇಶನ ಮಾಡಿದ್ದೇವೆ. ರಾಜ್ಯದಲ್ಲಿ ಸುಮಾರು 18ಲಕ್ಷ ರೈತರ ಮಾಹಿತಿಯನ್ನು ನಾವು ಸಂಗ್ರಹಿಸಿದ್ದು, ಇನ್ನೂ ಹಂತ ಹಂತವಾಗಿ ರೈತರ ಮಾಹಿತಿ ಸಂಗ್ರಹಿಸುತ್ತಿದ್ದೇವೆ. ಸರಕಾರ ರೈತರ ಪರವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.