ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿರುವ ಪ್ರಧಾನಿ

Team Udayavani, Jan 14, 2019, 6:14 AM IST

sullu.jpg

ಯಲಹಂಕ: ಅಧಿಕಾರ ಕೈತಪ್ಪಲಿದೆ ಎಂಬ ಭಯದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಸುಳ್ಳುಗಳನ್ನು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಪಂಚಾಯತ್‌ ರಾಜ್‌ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೆೈರೇಗೌಡ ಆರೋಪಿಸಿದರು.

ಜಾಲ ಹೋಬಳಿಯ ವಿದ್ಯಾನಗರ ಕ್ರಾಸ್‌ನಲ್ಲಿರುವ ಸೈನಿಕರ ಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ಮೈಲನಹಳ್ಳಿಯಿಂದ ಬಾಗಲೂರುವರೆಗೆ 10.1 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

“ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್‌ ಕ್ಲರ್ಕ್‌ ರೀತಿ ನಡೆಸಿಕೊಳ್ಳುತ್ತಿದೆ’ ಎಂಬ ಪ್ರಧಾನಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಮೋದಿಯವರು ತಾವು ಪ್ರಧಾನಿ ಎಂಬುದನ್ನು ಮರೆತು ಮಾತನಾಡುತ್ತಿದ್ದಾರೆ. ಪಂಚ ರಾಜ್ಯಗಳ ಚುನಾವಣೆ ಪಲಿತಾಂಶ ಕಂಡು, ಈ ಬಾರಿ ಅಧಿಕಾರ ತಮ್ಮ ಕೈತಪ್ಪಲಿದೆ ಎನ್ನುವ ಭಾವನೆ ಅವರಿಗೆ ಬಂದಿದೆ. ಹೀಗಾಗಿ ಕ್ಷುಲ್ಲಕವಾದ ಮಾತುಗಳನ್ನು ಆಡುತ್ತಿದ್ದಾರೆ ಎಂದರು.

ಬರ ಪರಿಹಾರ: ಬರ ಹಿನ್ನೆಲೆಯಲ್ಲಿ ನೂರು ತಾಲೂಕುಗಳಿಗೆ ತಲಾ ಒಂದು ಕೋಟಿ ರೂ. ಅನುದಾನ ನೀಡಿದ್ದೇವೆ. ಬರ ಘೋಷಣೆ ನಂತರ 50 ತಾಲೂಕುಗಳಿಗೆ ತಲಾ 50 ಲಕ್ಷ ನೀಡಿದ್ದೇವೆ. ಹಾಗೇ ಬರ ಇಲ್ಲದ ತಾಲೂಕುಗಳಿಗೂ 25 ಲಕ್ಷ ರೂ. ಹೆಚ್ಚುವರಿ ಅನುದಾನ ನೀಡಿದ್ದೇವೆ. ಕುಡಿಯುವ ನೀರಿನ ಬೇಡಿಕೆ ಇರುವ ಕಡೆ ಕೊಳವೆಬಾವಿ ಕೊರೆಸಲು ಸೂಚಿಸಲಾಗಿದೆ.

ಜನವರಿ ನಂತರ ಗೋಶಾಲೆ ತೆರೆಯಬೇಕಿದ್ದು, ಮೇವು ಸಂಗ್ರಹಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಮಾಹಿತಿ ನೀಡಿದರು. ವಿಧಾನ ಪರಿಷತ್‌ ಸದಸ್ಯ ನಾರಾಯಣಸ್ವಾಮಿ, ಜಿ.ಪಂ ಸದಸ್ಯೆ ಸಂಗೀತಾ ವಿಜಯಕುಮರ್‌, ತಾ.ಪಂ ಅಧ್ಯಕ್ಷೆ ಜ್ಯೋತಿ ಕಲ್ಲೇಶ್‌, ಸದಸ್ಯರಾದ ಉದಯ್‌ಶಂಕರ್‌, ಕಾಂಗ್ರೆಸ್‌ ಮುಖಂಡರಾದ ಅಶೋಕನ್‌, ಮಂಜುನಾಥಗೌಡ, ದಾನೇಗೌಡ ಹಾಜರಿದ್ದರು.

ಟಾಪ್ ನ್ಯೂಸ್

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು ?

India: ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು?

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.