ಕೈಗಾರಿಕಾ ಉತ್ಪಾದನೆ ಕುಸಿತ : ಮುಂಬಯಿ ಶೇರು 156 ಅಂಕ ಕುಸಿತ
Team Udayavani, Jan 14, 2019, 11:46 AM IST
ಮುಂಬಯಿ : ಕೈಗಾರಿಕಾ ಉತ್ಪಾದನೆ ಅಂಕಿ ಅಂಶಗಳು ನಿರಾಶಾದಾಯಕವಾಗಿರುವ ಹಿನ್ನೆಲೆಯಲ್ಲಿ ವಿದೇಶಿ ಹೂಡಿಕೆದಾರರು ಬೇಕಾಬಿಟ್ಟಿ ಶೇರು ಮಾರಾಟಕ್ಕೆ ಮುಂದಾದ ಕಾರಣ ಮತ್ತು ಏಶ್ಯನ್ ಶೇರು ಪೇಟೆಗಳಲ್ಲಿ ದೌರ್ಬಲ್ಯ ತೋರಿ ಬಂದ ಕಾರಣ ಮುಂಬಯಿ ಶೇರು ಪೇಟೆ 156.28 ಅಂಕಗಳ ನಷ್ಟಕ್ಕೆ ಗುರಿಯಾಗಿ ಇಂದು ಸೋಮವಾರದ ವಹಿವಾಟನ್ನು 35,853.56 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 57.35 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,737.60 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದು ಬಹುವಾಗಿ ನಷ್ಟ ಕಂಡ ಲಾರ್ಸನ್, ಇಂಡಸ್ ಇಂಡ್ ಬ್ಯಾಂಕ್, ಪವರ್ ಗ್ರಿಡ್, ಎನ್ಟಿಪಿಸಿ, ಐಸಿಐಸಿಐ ಬ್ಯಾಂಕ್, ಎಕ್ಸಿಸ್ ಬ್ಯಾಂಕ್, ಹೀರೋ ಮೋಟೋ ಕಾರ್ಪ್, ಭಾರ್ತಿ ಏರ್ಟೆಲ್ ಮತ್ತು ಎಸ್ಬಿಐ ಶೇ.2.64ರ ಕುಸಿತಕ್ಕೆ ಗುರಿಯಾದವು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,714ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,014 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,508 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 192 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.