ಉತ್ತರ ಕನ್ನಡಕ್ಕೂ ವ್ಯಾಪಿಸಿದ ಮಂಗನ ಕಾಯಿಲೆ
Team Udayavani, Jan 15, 2019, 12:30 AM IST
ಹೊನ್ನಾವರ/ಉಡುಪಿ: ಸಾಗರ ಸೀಮೆಯಲ್ಲಿ ಆತಂಕ ಉಂಟು ಮಾಡಿರುವ ಮಂಗನ ಕಾಯಿಲೆ ಈಗ ಉತ್ತರ ಕನ್ನಡ ಜಿಲ್ಲೆಗೂ ವ್ಯಾಪಿಸುವ ಲಕ್ಷಣ ಕಂಡುಬರುತ್ತಿದೆ. ಉಡುಪಿ ಜಿಲ್ಲೆಯ ವಿವಿಧೆಡೆ ಕೂಡ ಮಂಗಗಳ ಸಾವಿನಿಂದಾಗಿ ಜನರು ಆತಂಕಕ್ಕೊಳಗಾಗಿದ್ದಾರೆ. ಸೋಮವಾರವೂ 5 ಮಂಗಗಳ ಮೃತದೇಹಗಳು ಪತ್ತೆಯಾಗಿವೆ.
ಹೊನ್ನಾವರ ತಾಲೂಕಿನ ಸಾಲಕೋಡು, ಶಿರಸಿಯ ಬನವಾಸಿ, ಭಟ್ಕಳದ ಮುಡೇìಶ್ವರ, ಸಿದ್ದಾ ಪುರ, ಜೋಯಿಡಾ, ಕಾರವಾರದ ಕಾಡಿನಲ್ಲೂ ಮಂಗಗಳು ಮೃತಪಟ್ಟ ವರದಿಯಾಗಿದೆ. ಕೆಲವರು ಈಗಾಗಲೇ ಜ್ವರ ಪೀಡಿತರಾಗಿದ್ದಾರೆ. ಅದು ಮಂಗನ ಕಾಯಿಲೆ ಎಂಬುದು ಖಚಿತಪಟ್ಟಿಲ್ಲ. ರಕ್ತ ಪರೀಕ್ಷೆಗೆ ಕಳುಹಿಸಲಾಗಿದೆ. ಅಲ್ಲಲ್ಲಿ ಸತ್ತು ಬಿದ್ದಿರುವ ಮಂಗ ಗಳನ್ನು ಸುಟ್ಟು ಹಾಕಲಾಗುತ್ತಿದೆ. ಈ ಬಾರಿ ಮಂಗನ ಕಾಯಿಲೆ ತೀವ್ರತೆ ಪಡೆದಿರುವಂತಿದೆ. 25 ವರ್ಷಗಳ ಹಿಂದೆಯೂ ಕಾಯಿಲೆ ತೀವ್ರಗೊಂಡಿತ್ತು.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಆಸುಪಾಸಿನ 73 ಜನ ಶಂಕಿತ ಮಂಗನ ಕಾಯಿಲೆ ರೋಗಿಗಳು ದಾಖಲಾಗಿದ್ದಾರೆ. ಇವರಲ್ಲಿ 27 ಜನರಿಗೆ ಮಂಗನ ಕಾಯಿಲೆ ಇರುವುದು ಖಚಿತಪಟ್ಟಿದೆ. 46 ಜನರಿಗೆ ಮಂಗನ ಕಾಯಿಲೆ ಇಲ್ಲ ಎಂಬುದು ಖಚಿತಪಟ್ಟಿದೆ. ನಾಲ್ವರ ಪರೀಕ್ಷಾ ವರದಿ ಬರುವುದು ಬಾಕಿ ಇದೆ. 57 ಜನ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. 16 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಣಿಪಾಲ ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ನಡುವೆ ಮಣಿಪಾಲ ಆಸ್ಪತ್ರೆಯಲ್ಲಿ ರೋಗ ಸಂಶಯದಿಂದ ಮಹಿಳೆ ಸಾವಿಗೀಡಾಗಿದ್ದರೂ ಆಕೆಗೆ ಮಂಗನ ಕಾಯಿಲೆ ಇರಲಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.ಸಾಗರದಲ್ಲಿ ಸೋಮವಾರವೂ ಕೆಲವು ಮಂಗಗಳು ಅಸುನೀಗಿವೆ. ಈ ಪರಿಸರದಲ್ಲಿ ವ್ಯಾಪಕ ಜಾಗೃತಿ ಮೂಡಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
MUST WATCH
ಹೊಸ ಸೇರ್ಪಡೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.