ಪೊಲೀಸ್‌ ಇಲಾಖೆಗೂ ತಟ್ಟಿದ ಪ್ರಶ್ನೆಪತ್ರಿಕೆ ಬಹಿರಂಗ ಬಿಸಿ


Team Udayavani, Jan 15, 2019, 6:38 AM IST

police.jpg

ಬೆಂಗಳೂರು: ಸರ್ಕಾರಿ ಉದ್ಯೋಗಗಳ ಪ್ರಶ್ನೆಪತ್ರಿಕೆ ಬಹಿರಂಗಗೊಳಿಸುವ ಜಾಲದ ಬೇರು ಪೊಲೀಸ್‌ ಇಲಾಖೆವರೆಗೂ ಹಬ್ಬಿಕೊಂಡಿದೆ. ಭಾನುವಾರ ನಡೆದ ನಾಗರಿಕ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ನೀಡುವುದಾಗಿ ನಂಬಿಸಿ ಹಲವು ಪರೀಕ್ಷಾರ್ಥಿಗಳಿಂದ ಹಣಪಡೆದು ವಂಚಿಸಿದ ಜಾಲ ಭೇದಿಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು, ಒಬ್ಬ ಅಸಿಸ್ಟೆಂಟ್‌ ಸಬ್‌ ಇನ್ಸ್‌ಪೆಕ್ಟರ್‌ (ಎಎಸ್‌ಐ) ಸೇರಿ 16 ಮಂದಿಯನ್ನು ಬಂಧಿಸಿದ್ದಾರೆ.

ಪಿಎಸ್‌ಐ ಪ್ರಶ್ನೆಪತ್ರಿಕೆ ಸೋರಿಕೆ ಮಾಡಲು ಯತ್ನಿಸಿದ ಜಾಲದಲ್ಲಿ ಇಲಾಖೆಯಲ್ಲಿನ ಕೆಲವು ಸಿಬ್ಬಂದಿ ಹಾಗೂ ಶಿಕ್ಷಕರು, ಕೋಚಿಂಗ್‌ ಸೆಂಟರ್‌ಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅವರ ಬಂಧನಕ್ಕೆ ಕ್ರಮ ಕೈಗೊಂಡಿದ್ದು, ತನಿಖೆ ಮುಂದುವರಿದಿದೆ ಎಂದು ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪೊಲೀಸ್‌ ಇಲಾಖೆಯ ವೈರ್‌ಲೆಸ್‌ ವಿಭಾಗದ ಎಎಸ್‌ಐ ನಾಗರಾಜ್‌, ವಿಜಯಪುರ ಮೂಲದ ಶಿಕ್ಷಕ ಭೀಮಸಿಂಗ್‌ ಶಂಕರ್‌ ರಾಥೋಡ್‌, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಪ್ರಮುಖ ಕಿಂಗ್‌ಪಿನ್‌ ಶಿವಕುಮಾರಯ್ಯ ಅಲಿಯಾಸ್‌ ಗುರೂಜಿ ಸಹಚರರಾದ ಬಸವರಾಜ, ಆತನ ಸಹೋದರ ಹೋಳಿಯಪ್ಪ ಬಂಧನಕ್ಕೊಳಗಾದ ಪ್ರಮುಖ ಆರೋಪಿಗಳು.

ಪ್ರಶ್ನೆಪತ್ರಿಕೆ ಪಡೆಯಲು ದಂಧೆಕೋರರ ಜತೆ ಸಂಪರ್ಕದಲ್ಲಿದ್ದ ಪರೀಕ್ಷಾರ್ಥಿಗಳಾದ ಜಯಶ್ರಿ ರಾಥೋಡ್‌, ನೀಲಮ್ಮ ಕರೆಕೊಂಡ, ಹನುಮೇಶ್‌, ಯುದುಕುಮಾರ್‌, ಕಾರ್ತಿಕ್‌, ಶಿವಕುಮಾರ್‌, ಭಾಗ್ಯವಂತ ಸಗರೆ, ಅರುಣ್‌ ರಾಮಪ್ಪ ಸೇರಿ 16 ಮಂದಿಯನ್ನು ಬಂಧಿಸಲಾಗಿದೆ. ಪ್ರಶ್ನೆ ಪತ್ರಿಕೆ ನೀಡುವುದಾಗಿ ಪರೀಕ್ಷಾರ್ಥಿಗಳಿಂದ ಸಂಗ್ರಹಿಸಿದ್ದ 41.20 ಲಕ್ಷ ರೂ. ನಗದು, ಮೂರು ಲಕ್ಷ ರೂ. ಮೌಲ್ಯದ ಚೆಕ್‌ಗಳು, ಲ್ಯಾಪ್‌ಟಾಪ್‌, ಪ್ರಿಂಟರ್‌, ಹಲವು ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿದರು.

ಪಿಎಸ್‌ಐ ನೇಮಕಾತಿ ಪರೀಕ್ಷೆ ಪ್ರಶ್ನೆಪತ್ರಿಕೆ ನೀಡುವುದಾಗಿ ಪರೀಕ್ಷಾರ್ಥಿಗಳಿಗೆ 50ರಿಂದ 60 ಲಕ್ಷ ರೂ. ಆಮಿಷ ಒಡ್ಡಿರುವ ಜಾಲದ ಬಗ್ಗೆ ಕಳೆದ ನಾಲ್ಕೈದು ದಿನಗಳ ಹಿಂದೆ ದೊರೆತ ಖಚಿತ ಸುಳಿವಿನ ಆಧಾರದಲ್ಲಿ ಸಿಸಿಬಿ ಅಧಿಕಾರಿಗಳ ಪ್ರತ್ಯೇಕ ತಂಡಗಳು, ವಿಜಯಪುರ, ಬಾಗಲಕೋಟೆ, ನೆಲಮಂಗಲ, ಬೆಂಗಳೂರು ಸೇರಿ ವಿವಿಧ ಭಾಗಗಳಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿ ಜಾಲದ ಸದಸ್ಯರು ಹಾಗೂ ಅವರೊಂದಿಗೆ ಸಂಪರ್ಕದಲ್ಲಿದ್ದ ಪರೀಕ್ಷಾರ್ಥಿಗಳನ್ನು ಬಂಧಿಸಲಾಗಿದೆ ಎಂದು ವಿವರಿಸಿದರು.

ಸಿಸಿಬಿಗೆ ಸುಳಿವು ದೊರೆತಿದ್ದು ಹೇಗೆ?: ಪ್ರಶ್ನೆಪತ್ರಿಕೆ ಸೋರಿಕೆ ಜಾಲದಲ್ಲಿ ಶಿಕ್ಷಕರು, ಕೆಲವು ಕೋಚಿಂಗ್‌ ಸೆಂಟರ್‌ಗಳು ಶಾಮೀಲಾಗಿರುವ ಬಗ್ಗೆ ಪೊಲೀಸರಿಗೆ ಅನುಮಾನವಿತ್ತು. ಈ ನಡುವೆ, ಪೊಲೀಸ್‌ ಕಾನ್‌ಸ್ಟೆಬಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್‌ನಲ್ಲಿ ಆರೋಪಿ ಸೋಮಲಿಂಗಪ್ಪ ಮೇಲಿನಮನಿ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಪಿಎಸ್‌ಐ ಪ್ರಶ್ನೆಪತ್ರಿಕೆ ಸೋರಿಕೆ ಮಾಡಲು ಕೆಲವರು ಯತ್ನಿಸಿರುವುದು ಗೊತ್ತಾಗಿತ್ತು. ಆತ ನೀಡಿದ ಮಾಹಿತಿ ಮೆರೆಗೆ ಕಾರ್ಯಚರಣೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಜಾಲದ ಪ್ರಮುಖ ಆರೋಪಿಗಳಾದ ಬಸವರಾಜ ಹಾಗೂ ಹೋಳಿಯಪ್ಪ ಇನ್ನಿತರರು ಪಿಎಸ್‌ಐ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಗೆ ಯತ್ನಿಸಿ ವಿಫ‌ಲರಾಗಿದ್ದಾರೆ. ಪ್ರಕರಣದಲ್ಲಿ ಪೇದೆ ರಮೇಶ್‌ ಸೇರಿದಂತೆ ಹಲವು ಮಂದಿ ಪೊಲೀಸ್‌ ಸಿಬ್ಬಂದಿ ಭಾಗಿಯಾಗಿದ್ದು, ಅವರ ಬಂಧನಕ್ಕೆ ತನಿಖೆ ಮುಂದುವರಿಸಲಾಗಿದೆ ಎಂದು ಸಿಸಿಬಿ ಹೆಚ್ಚುವರಿ ಪೊಲೀಸ್‌ ಆಯುಕ್ತ ಅಲೋಕ್‌ ಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

2-bng-crime

Bengaluru Crime: ಅತಿಯಾಗಿ ಮೊಬೈಲ್‌ ಬಳಸಿದಕ್ಕೆ ಪ್ರೇಯಸಿ ಹತ್ಯೆ?

Maharashtra; Gondia bus accident: PM announces compensation

Maharashtra; ಗೊಂಡಿಯಾ ಬಸ್‌ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-bng-crime

Bengaluru Crime: ಅತಿಯಾಗಿ ಮೊಬೈಲ್‌ ಬಳಸಿದಕ್ಕೆ ಪ್ರೇಯಸಿ ಹತ್ಯೆ?

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

2-bng-crime

Bengaluru Crime: ಅತಿಯಾಗಿ ಮೊಬೈಲ್‌ ಬಳಸಿದಕ್ಕೆ ಪ್ರೇಯಸಿ ಹತ್ಯೆ?

Naa Ninna Bidalare Movie Review

Naa Ninna Bidalare Review: ಬಿಟ್ಟೆನೆಂದರೂ ಬಿಡದೀ ಮಾಯೆ!

Maharashtra; Gondia bus accident: PM announces compensation

Maharashtra; ಗೊಂಡಿಯಾ ಬಸ್‌ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ

sanjeev-ramya

Ramya: ಗೆಳೆಯನ ಜತೆಗಿನ ರಮ್ಯಾ ಫೋಟೋ ವೈರಲ್‌

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.