ರಾಜಕೀಯ ಒತ್ತಡಕ್ಕೆ ಮಣಿಯದೆ ಕೆಲಸ ಮಾಡಿ


Team Udayavani, Jan 15, 2019, 7:16 AM IST

m2-rajakiya.jpg

ಮೈಸೂರು: ಪೊಲೀಸರು ರಾಜಕೀಯ ಪ್ರಭಾವ, ಒತ್ತಡಕ್ಕೆ ಮಣಿಯದೆ ಪ್ರಾಮಾಣಿಕತೆಯಿಂದ ನಾಡಿನ ಪ್ರಜೆಗಳ ರಕ್ಷಣೆಗಾಗಿ ಕಾರ್ಯ ನಿರ್ವಹಿಸಿ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಕರ್ನಾಟಕ ಪೊಲೀಸ್‌ ಅಕಾಡೆಮಿ ವತಿಯಿಂದ ಸೋಮವಾರ ಏರ್ಪಡಿಸಿದ್ದ 41ನೇ ತಂಡದ ಆರಕ್ಷಕ ಉಪನಿರೀಕ್ಷಕರು (ಸಿವಿಲ್‌) ಪ್ರಶಿಕ್ಷಣಾರ್ಥಿಗಳ ಪಥ ಸಂಚಲನ ಕಾರ್ಯಕ್ರಮದಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ದೇಶದಲ್ಲೇ ಕರ್ನಾಟಕ ಪೊಲೀಸ್‌ ಇಲಾಖೆಗೆ ದೊಡ್ಡ ಹೆಸರು ಇದೆ. ಅನೇಕ ಹಿರಿಯ ಅಧಿಕಾರಿಗಳು ಈ ಇಲಾಖೆಗೆ ದೊಡ್ಡ ಹೆಸರು ತಂದು ಕೊಟ್ಟು ಹೋಗಿದ್ದಾರೆ. ತರಬೇತಿ ಸಂದರ್ಭದಲ್ಲಿ  ಶಿಸ್ತು, ಸಂಯಮ, ನಡವಳಿಕೆ, ಆದರ್ಶಗಳನ್ನು ಹೇಳಿಕೊಡಲಾಗಿದೆ. ಅದನ್ನು ಗಮನದಲ್ಲಿಟ್ಟುಕೊಂಡು ಪ್ರಾಮಾಣಿಕತೆಯಿಂದ ನಾಡಿನ ಪ್ರಜೆಗಳ ರಕ್ಷಣೆಗೆ ಸಮರ್ಥವಾಗಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.

ಕಾನೂನು ವ್ಯಾಪ್ತಿ ಮೀರಿ ಯಾವ ಕೆಲಸವನ್ನೂ ಮಾಡಬೇಡಿ, ಎಷ್ಟೇ ಪ್ರಭಾವ ಬೀರಿದರೂ ಅದನ್ನು ಧಿಕ್ಕರಿಸಿ, ದಕ್ಷತೆಯಿಂದ ಕೆಲಸ ಮಾಡಲು ಶಪಥ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಪೊಲೀಸರನ್ನು ಒತ್ತಡಕ್ಕೆ ಸಿಲುಕಿಸಲಾಗಿದೆ.  ಸ್ಥಳ ನಿಯುಕ್ತಿ ಮಾಡುವಾಗಲೇ ರಾಜಕೀಯ ಪ್ರಭಾವ ಬೀರಲಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ತಮ್ಮ ವೈಯಕ್ತಿಕ ಹಾಗೂ ಇಲಾಖೆಯ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಕರ್ತವ್ಯ ನಿರ್ವಹಿಸಿ, ಇಲಾಖೆಯಲ್ಲಿ ಉತ್ತಮ ಹೆಸರು ಸಂಪಾದನೆ ಮಾಡುವ ಮೂಲಕ ವೃತ್ತಿ ಧರ್ಮವನ್ನು ಕಾಪಾಡಿಕೊಳ್ಳಿ ಎಂದು ಹೇಳಿದರು. ಗೃಹ ಸಚಿವ ಎಂ.ಬಿ.ಪಾಟೀಲ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕಿ ನೀಲಮಣಿ ಎನ್‌.ರಾಜು,ತರಬೇತಿ ವಿಭಾಗದ ಪೊಲೀಸ್‌ ಮಹಾ ನಿರ್ದೇಶಕ ಪದಮ್‌ ಕುಮಾರ್‌ ಗರ್ಗ್‌, ತರಬೇತಿ ವಿಭಾಗದ ಪೊಲೀಸ್‌ ಮಹಾ ನಿರೀಕ್ಷಕ ರವಿ ಎಸ್‌., ಕರ್ನಾಟಕ ಪೊಲೀಸ್‌ ಅಕಾಡೆಮಿ ನಿರ್ದೇಶಕ ವಿಪುಲ್‌ ಕುಮಾರ್‌ ಹಾಜರಿದ್ದರು.

ಆಕರ್ಷಕ ಪಥ ಸಂಚಲನ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಅಶ್ವಾರೋಹಿ ಪಡೆಯೊಂದಿಗೆ ಬರಮಾಡಿಕೊಳ್ಳಲಾಯಿತು. ತೆರೆದ ವಾಹನದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ತಂಡಗಳ ಪರಿವೀಕ್ಷಣೆ ಮಾಡಿದರು. ಆಕರ್ಷಕ ಪಥ ಸಂಚಲನದ ಮೂಲಕ ಗಣ್ಯರಿಗೆ ಗೌರವ ವಂದನೆ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.