ಸಂಕಷ್ಟ ಅರಿತು ಸಮಸ್ಯೆ ಬಗಹರಿಸಿ
Team Udayavani, Jan 16, 2019, 6:58 AM IST
ಹುಣಸೂರು: ಎನ್‌ಎಸ್‌ಎಸ್ ಶಿಬಿರಗಳು ವಿದ್ಯಾರ್ಥಿಗಳ ಜೀವನ ಪ್ರಗತಿಯ ಮೆಟ್ಟಿಲಾಗಲಿವೆ ಎಂದು ಶಾಸಕ ಎಚ್.ವಿಶ್ವನಾಥ್ ತಿಳಿಸಿದರು. ತಾಲೂಕಿನ ಕಸಬಾ ಹೋಬಳಿಯ ವಿನೋಬಾ ಕಾಲೋನಿಯಲ್ಲಿ ನಗರದ ಮಹಿಳಾ ಪದವಿ ಕಾಲೇಜು ವತಿಯಿಂದ ಆಯೋಜಿಸಿದ್ದ ಎನ್‌ಎಸ್‌ಎಸ್ ವಿಶೇಷ ಶಿಬಿರದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಮೀಣ ಬದುಕನ್ನೇ ಅರಿಯದ ನಗರವಾಸಿಗಳು ಶಿಬಿರದಲ್ಲಿ ಪಾಲ್ಗೊಂಡು ಇಂತಹ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಗ್ರಾಮೀಣರಿಗೆ ಶಿಬಿರಾರ್ಥಿಗಳು ಜಾಥಾ ಮೂಲಕ ಅರಿವು ಮೂಡಿಸಿದ್ದು, ಹಳ್ಳಿಗರು ಸಹ ತಮ್ಮ ಬದುಕನ್ನು ಬದಲಾಯಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದರು.
ಇಂತಹ ಶಿಬಿರಗಳಿಂದ ವಿದ್ಯಾರ್ಥಿಗಳಿಗೆ ಗ್ರಾಮೀಣ ಬದುಕಿನ ಸೊಗಡು, ಜನಜೀವನ ವ್ಯವಸ್ಥೆ, ಹಳ್ಳಿಗರು ಅನುಭವಿಸುತ್ತಿರುವ ಸಂಕಷ್ಟಗಳು ಅರಿಯಲು ಸಹಕಾರಿಯಾಗಿದೆ ಎಂದು ತಿಳಿಸಿದರು. ಇಲವಾಲ ಅರಣ್ಯ ತರಬೇತಿ ವಿದ್ಯಾಲಯದ ಆರ್‌ಎಫ್‌ಓ ಗಾನಶ್ರೀ, ನಾಗರಹೊಳೆಯನ್ನು ಸಂರಕ್ಷಿತಾರಣ್ಯವೆಂದು ಘೋಷಿಸಿರುವುದರಿಂದ ವನ್ಯಜೀವಿಗಳ ಹಾಗೂ ಅರಣ್ಯ, ಪರಿಸರ ಉಳಿವಿಗೆ ಸಹಕಾರಿಯಾಗಿದೆ.
ಉದ್ಯಾನವನ್ನು ಬೆಂಕಿಯಿಂದ ರಕ್ಷಿಸುವುದು ದೊಡ್ಡ ಸವಾಲಾಗಿದ್ದು, ಕಾಡಿಗೆ ಬೆಂಕಿ ತಂತಾನೆ ಬೀಳುವುದಿಲ್ಲ. ಇದು ಕಿಡಿಗೇಡಿಗಳ ಕೃತ್ಯವಾಗಿದೆ. ಅರಣ್ಯದಂಚಿನ ಗ್ರಾಮಸ್ಥರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ವಯಂಸೇವಕರು ಹೆಚ್ಚಿನ ಜವಾಬ್ದಾರಿ ಹೊರಬೇಕೆಂದು ಕೋರಿದರು.
ಡಿಆರ್‌ಎಫ್ಒ ರಶ್ಮಿ, ಅರಣ್ಯ ಮತ್ತು ವನ್ಯಜೀವಿಗಳ ಮಹತ್ವದ ಕುರಿತು ಮಾಹಿತಿ ನೀಡಿದರು. ಶಿಬಿರಾಧಿ ಕಾರಿ ಡಾ.ಕೆ.ಎಸ್.ಭಾಸ್ಕರ್, ಗ್ರಾಪಂ ಸದಸ್ಯರಾದ ಗೋವಿಂದಯ್ಯ, ಈರಯ್ಯ, ಶೇಖರ್, ಮಾಜಿ ಅಧ್ಯಕ್ಷ ರಾಮಯ್ಯ, ಪಿಡಿಒ ಶ್ರೀಶೈಲಾ, ವೆಂಕಟೇಶ್, ಮಹದೇವ್, ಸಹಾಯಕ ಪ್ರಾಧ್ಯಾಪಕರಾದ ಡಾ.ನಂಜುಂಡಸ್ವಾಮಿ, ಪ್ರತಿಭಾ ಜನಿಫರ್, ಡಾ.ಕಲಾಶ್ರೀ, ರಮಣಿನಾಯಕ್, ಕುಮಾರ್, ಮೋಹನ್, ಜಗದೀಶ್, ಮಹೇಶ್, ಮುಖಂಡರಾದ ಜಗದೀಶ್, ರವಿಕುಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.