ಸಂಘಟಿತರಾಗಿ ಸೌಲಭ್ಯ ಪಡೆಯಿರಿ : ಎಂ.ರೇಣುಕಾ
Team Udayavani, Jan 16, 2019, 9:07 AM IST
ಕಂಪ್ಲಿ: ಭೋವಿ ಸಮುದಾಯದವರು ಸಂಘಟಿತರಾಗಿ, ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಂಡು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುವ ಮೂಲಕ ಅಭಿವೃದ್ಧಿಯತ್ತ ಸಾಗಬೇಕು ಎಂದು ತಹಶೀಲ್ದಾರ್ ಎಂ.ರೇಣುಕಾ ಸಲಹೆ ನೀಡಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ಧರಾಮೇಶ್ವರರ 847ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕ ಕಲ್ಯಾಣ, ಸಮಾಜ ಸುಧಾರಣೆಗೆ ವಿಶೇಷ ಕೊಡುಗೆ ನೀಡಿದ ಶರಣರಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಅವರ ಪಾತ್ರ ದೊಡ್ಡದಾಗಿದೆ. ಭೋವಿ ಸಮುದಾಯದವರು ಶಿಕ್ಷಣ ರಂಗದಲ್ಲಿ ಸಾಧನೆ ಮಾಡುವ ಮೂಲಕ ಎಲ್ಲ ರಂಗಗಳಲ್ಲಿ ಅಭಿವೃದ್ಧಿ ಹೊಂದಬೇಕು ಎಂದರು.
ಕಂಪ್ಲಿ ಫಿರ್ಕಾ ಭೋವಿ ಸಮಾಜದ ಅಧ್ಯಕ್ಷ ಶಾಮಿಲ್ ವಿ.ಶೇಖಪ್ಪ ಮಾತನಾಡಿದರು. ಉಪ ತಹಶೀಲ್ದಾರ್ ಬಿ.ರವೀಂದ್ರಕುಮಾರ್, ಕಂದಾಯ ನಿರೀಕ್ಷಕ ಎಸ್.ಎಸ್.ತಂಗಡಗಿ, ಶಿರಸ್ತೇದಾರ ಎಸ್.ಶ್ರೀಧರ್, ಎಫ್‌ಡಿಸಿಗಳಾದ ಮಾಲತೇಶ್ ದೇಶಪಾಂಡೆ, ಬಸವರಾಜ, ವೀರಶೈವ ಸಂಘದ ಅಧ್ಯಕ್ಷ ಪಿ.ಮೂಕಯ್ಯಸ್ವಾಮಿ, ಜಿ.ಜಿ.ಆನಂದಮೂರ್ತಿ, ಮುಖಂಡರಾದ ಬಿ.ಹುಲುಗಪ್ಪ, ತಿಪ್ಪೇಸ್ವಾಮಿ, ವಿ.ವೆಂಕಟೇಶ್, ವೆಂಕಟರಮಣ, ಮೌನೇಶ್, ವಿ.ಗೋವಿಂದರಾಜು, ಗುರ್ರಪ್ಪ, ಸತ್ಯಪ್ಪ, ವಿ.ಭೀಮಲಿಂಗ, ವಿ.ಬಿ.ನಾಗರಾಜ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.