ಕನ್ನಡ ಸಾಹಿತ್ಯ ಜಾತ್ರೆಗೆ ಸಿದ್ಧಗೊಂಡ ಮಹಾಜನ ಶಿಕ್ಷಣ ಸಂಸ್ಥೆ
Team Udayavani, Jan 17, 2019, 12:30 AM IST
ಬದಿಯಡ್ಕ: ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಇದೇ ಜ.19ರಿಂದ 2 ದಿನಗಳ ಕಾಲ ನೀರ್ಚಾಲಿನ ಮಹಾಜನ ಶಿಕ್ಷಣ ಸಂಸ್ಥೆಯ ಪರಿಸರದಲ್ಲಿ ನಡೆಯುವ ಕಾಸರಗೋಡು ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಾಸರಗೋಡು ಹಾಗೂ ಕರ್ನಾಟಕದ ಅನೇಕ ಕನ್ನಡ ಪುಸ್ತಕ ಮಳಿಗೆಗಳು ಭಾಗವಹಿಸಲಿವೆ.
ಈ ಸಮ್ಮೇಳನದಲ್ಲಿ ಮಕ್ಕಳ ಬೌದ್ಧಿಕ ವಿಕಸನಕ್ಕೆ ಪೂರಕವಾಗುವ ಪುಸ್ತಕಗಳು, ಅನೇಕ ಸಂಶೋಧಕರ ವಿಚಾರಯುತ ಪುಸ್ತಕಗಳು, ನಾಡಿನ ವಿವಿಧ ಆಚರಣೆಗಳು, ಜನಜೀವನ, ಇತಿಹಾಸಗಳ ಬಗ್ಗೆ ಬೆಳಕು ಚೆಲ್ಲುವ ಕೃತಿಗಳು, ದಾಸವರೇಣ್ಯರ ಕೀರ್ತನೆಗಳ ಕುರಿತ ಪುಸ್ತಕಗಳು ಪ್ರದರ್ಶನ ಹಾಗೂ ಮಾರಾಟಕ್ಕೆ ಲಭ್ಯವಿದೆ. ಈ ಸಮ್ಮೇಳನದಲ್ಲಿ ಉಡುಪಿಯ ಸುರಭಿ ಪುಸ್ತಕ ಮಳಿಗೆ, ಪುತ್ತೂರಿನ ಜ್ಞಾನಗಂಗಾ ಪುಸ್ತಕ ಮಳಿಗೆ, ಮಂಗಳೂರಿನ ಅರುಣೋದಯ ಪ್ರಕಾಶನ ಮೊದಲಾದ ಸಂಸ್ಥೆಗಳು ಮಳಿಗೆಗಳನ್ನು ತೆರೆಯಲಿವೆ. ಸಾಹಿತ್ಯಾಸಕ್ತರು ಈ ಪುಸ್ತಕ ಜಾತ್ರೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.
ಶೇ.50 ರಿಯಾಯತಿ
ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಗೊಂಡ ಪುಸ್ತಕಗಳು ಬದಿಯಡ್ಕದ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯ ಮೂಲಕ ಶೇಖಡಾ 50ರ ವಿಶೇಷ ರಿಯಾಯತಿ ದರದಲ್ಲಿ ಸಮ್ಮೇಳನದಲ್ಲಿ ಮಾರಾಟಕ್ಕೆ ಲಭ್ಯವಿದೆ. ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯಲ್ಲಿ ಇರುವ ಇತರ ಪ್ರಕಾಶನದ ಪುಸ್ತಕಗಳು ಶೇಖಡಾ 15ರಷ್ಟು ರಿಯಾಯತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದೆ ಎಂದು ಮಳಿಗೆಯ ಮುಖ್ಯಸ್ಥ ಕೇಳುಮಾಸ್ತರ್ ಅಗಲ್ಪಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು
Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.