ಮತದಾರರ ಅಂತಿಮ ಪಟ್ಟಿ ಪ್ರಕಟ:ರಾಜ್ಯದಲ್ಲಿದ್ದಾರೆ 5.03 ಕೋಟಿ ಮತದಾರರು 


Team Udayavani, Jan 17, 2019, 1:35 AM IST

92.jpg

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿದ್ದು, ರಾಜ್ಯದಲ್ಲಿ 5.03 ಕೋಟಿ ಜನರು ಅಂತಿಮ ಮತದಾರರ ಪಟ್ಟಿಯಲ್ಲಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ತಿಳಿಸಿದರು. ಚುನಾವಣಾ ಆಯೋಗದ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 18 ವರ್ಷ ಪೂರೈಸಿದವರನ್ನು ಮತದಾರರ ಪಟ್ಟಿಗೆ ಸೇರಿಸಲು ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಒಟ್ಟು 17.45 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 7.12 ಲಕ್ಷ ಮತದಾರರು ಹೊಸದಾಗಿ ಪಟ್ಟಿಗೆ ಸೇರಿದ್ದಾರೆ. ಜತೆಗೆ 7.52 ಲಕ್ಷ ಜನರು ಮತದಾರರ ಪಟ್ಟಿಯಿಂದ ತಮ್ಮ ಹೆಸರು ತೆಗೆಸಿದ್ದಾರೆ ಎಂದು ಹೇಳಿದರು.

ಅದರಂತೆ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳದ 6.35 ಲಕ್ಷ ಮತದಾರರು ತಮ್ಮ ಹೆಸರನ್ನು ಪಟ್ಟಿಗೆ ಸೇರಿಸಿದ್ದಾರೆ. ವಿಶೇಷ ಅಭಿಯಾನದ ವೇಳೆ ಹೆಸರು ಸೇರ್ಪಡೆಗೆ 7,54,829 ಅರ್ಜಿಗಳು ಸ್ವೀಕೃತಗೊಂಡಿದ್ದು, 7,21,653 ಅರ್ಜಿಗಳು ಅಂಗೀಕಾರವಾಗಿವೆ. ಅದೇ ರೀತಿ ಹೆಸರು ತೆಗೆದು ಹಾಕಲು 7,59,277 ಅರ್ಜಿಗಳು ಸ್ವೀಕೃತವಾಗಿದ್ದು, 7,52,901 ಅರ್ಜಿಗಳು ಅಂಗೀಕೃತಗೊಂಡಿವೆ. ಜತೆಗೆ, ತಿದ್ದುಪಡಿಗಾಗಿ 2,31,376 ಅರ್ಜಿಗಳು ಬಂದಿದ್ದು, ಈ ಪೈಕಿ 2,25,306 ಅರ್ಜಿಗಳು ಅಂಗಿಕೃತಗೊಂಡಿವೆ ಎಂದು ವಿವರಿಸಿದರು.

ಚುನಾವಣಾ ನೀತಿ ಸಂಹಿತೆ ಜಾರಿಯಾಗಿ ನಾಮಪತ್ರ ಸಲ್ಲಿಸುವ ದಿನದವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶವಿದೆ. ಜನವರಿ 1ಕ್ಕೆ 18 ವರ್ಷ ತುಂಬುವ ಯುವಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿಕೊಳ್ಳಬಹುದಾಗಿದ್ದು, ಸರ್ಕಾರಿ ಕಚೇರಿಗಳಿಗೆ ಯಾವುದೇ ದಾಖಲೆ ಸಲ್ಲಿಸದೆ ಸಂಪೂರ್ಣ ಆನ್‌ಲೈನ್‌ನಲ್ಲಿಯೇ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಿದರು.

ಪರಿಷ್ಕೃತ ಮತದಾರರ ಪಟ್ಟಿಯಂತೆ ರಾಜ್ಯದಲ್ಲಿ 5.03 ಕೋಟಿ ಮತದಾರರಿದ್ದು, ಆ ಪೈಕಿ 2,54,84,972 ಪುರುಷರು, 2,48,46,976 ಮಹಿಳೆಯರು ಹಾಗೂ 4,718 ಇತರ ಮತದಾರರಿದ್ದಾರೆ. 2,54,84,972 ಪುರುಷ ಮತದಾರರಲ್ಲಿ 2,54,55,976 ಸಾಮಾನ್ಯ ಮತ್ತು 28996 ಸೇವಾ ಮತದಾರರಿದ್ದು, 2,48,46,976 ಮಹಿಳಾ ಮತದಾರರಲ್ಲಿ 2,48,46,488 ಸಾಮಾನ್ಯ ಮತ್ತು 488 ಸೇವಾ ಮತದಾರರು ಇದ್ದಾರೆ. ಸೇವಾ ಮತದಾರರ ಅಂತಿಮ ಪಟ್ಟಿಯನ್ನು ಫೆ.22ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮ ಅವಧಿಯಲ್ಲಿ 7.52 ಲಕ್ಷ ಮತದಾರರನ್ನು ಕೈ ಬಿಡಲಾಗಿದೆ. ಇದರಲ್ಲಿ 4.72 ಲಕ್ಷ ಮತದಾರರು ಸ್ಥಳಾಂತರಗೊಂಡಿದ್ದು, 1.95 ಲಕ್ಷ ಮತದಾರರು ಮೃತಪಟ್ಟಿದ್ದಾರೆ. ಇನ್ನು 80 ಸಾವಿರ ಪುನರಾವರ್ತನೆಗೊಂಡ ಮತದಾರರನ್ನು ಗುರುತಿಸಿ ಕೈ ಬಿಡಲಾಗಿದ್ದು, 2019ರ ಮತದಾರರ ಪಟ್ಟಿಯಲ್ಲಿ 3.82 ಲಕ್ಷ ಅಂಗವಿಕಲ ಮತದಾರರಿದ್ದು, ಈ ಬಾರಿ ಲಿಂಗಾನುಪಾತ ಪ್ರತಿ ಸಾವಿರ ಪುರುಷರಿಗೆ 976 ಮಹಿಳಾ ಮತದಾರಿರುವುದು ಸಂತಸದ ಸಂಗತಿ ಎಂದರು.

1.14 ಲಕ್ಷ ನಕಲಿ ಗುರುತಿನ ಚೀಟಿ ಪತ್ತೆ: ರಾಜ್ಯದಲ್ಲಿ 1,14,377 ಭಾವಚಿತ್ರ ಪುನರಾವರ್ತನೆಯುಳ್ಳ ಪ್ರಕರಣಗಳನ್ನು ಗುರುತಿಸಲಾಗಿದ್ದು, ಕೆಲವು ಪ್ರಕರಣಗಳಲ್ಲಿ ಕ್ರಮ ಜರುಗಿಸಲಾಗಿದೆ. ಇನ್ನು ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪತ್ತೆಯಾದ ಭಾವಚಿತ್ರ ಪುನರಾವರ್ತನೆ ಪ್ರಕರಣಗಳ ಪೈಕಿ 54,140 ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. 64,600 ಪ್ರಕರಣಗಳಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದರು.

1.82 ಲಕ್ಷ ಭಾವಚಿತ್ರಗಳಿಲ್ಲದ ಪ್ರಕರಣಗಳನ್ನು ಗುರುತಿಸಿದ್ದು, ಈಗಾಗಲೇ 1.47 ಲಕ್ಷ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ. ಇನ್ನುಳಿದಂತೆ 34 ಸಾವಿರ ಪ್ರಕರಣ ಬಾಕಿಯಿದ್ದು, ಮತದಾರರು ಕೆಲಸದ ನಿಮಿತ್ತ ಬೇರೆ ಸ್ಥಳಗಳಿಗೆ ವಲಸೆ ಹೋಗಿದ್ದಾರೆ. ಇದರೊಂದಿಗೆ 10.41 ಲಕ್ಷ ಮತದಾರರ ಹೆಸರು ಪುನರಾವರ್ತನೆಗೊಂಡ ಪ್ರಕರಣಗಳು ಪತ್ತೆಯಾಗಿದ್ದು, 31,372 ಪ್ರಕರಣಗಳಲ್ಲಿ ಕ್ರಮ ಜರುಗಿಸಲಾಗಿದೆ. ಹೀಗಾಗಿ, ಗುರುತಿನ ಚೀಟಿಯಲ್ಲಿ ಭಾವಚಿತ್ರ ಇಲ್ಲದವರು ತಮ್ಮ ಭಾವಚಿತ್ರಗಳನ್ನು ಅಧಿಕಾರಿಗಳಿಗೆ ನೀಡಬೇಕು ಎಂದು ಮನವಿ ಮಾಡಿದರು.

ಪಕ್ಷಗಳು ಮತಗಟ್ಟೆ
ಏಜೆಂಟ್‌ ನೇಮಿಸಬೇಕು ರಾಜಕೀಯ ಪಕ್ಷಗಳು ಆಯೋಗದಿಂದ ರಾಜ್ಯದಾದ್ಯಂತ ಗುರುತಿಸಿರುವ 58,186 ಮತಗಟ್ಟೆಗಳಿಗೆ ಮತಗಟ್ಟೆ ಏಜೆಂಟ್‌ ನೇಮಿಸಲು ಮುಂದಾಗಬೇಕು. ಆ ಮೂಲಕ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದವರು, ಅನಧಿಕೃತವಾಗಿ ಸೇರ್ಪಡೆಯಾದವರನ್ನು ಗುರುತಿಸುವ ಕೆಲಸ ಮಾಡಬೇಕು. ಸದ್ಯ ಕಾಂಗ್ರೆಸ್‌ ಪಕ್ಷದಿಂದ 9,497 ಮತಗಟ್ಟೆಗಳಿಗೆ ಏಜೆಂಟ್‌ ನೇಮಿಸಿದ್ದು, ಬಿಜೆಪಿಯಿಂದ 14,696, ಜೆಡಿಎಸ್‌ನಿಂದ 1,038 ಹಾಗೂ ಬಿಎಸ್‌ಪಿಯಿಂದ 950 ಮತಗಟ್ಟೆಗಳಿಗೆ ಏಜೆಂಟ್‌ ನೇಮಿಸಲಾಗಿದೆ ಎಂದು ಸಂಜೀವ್‌ ಕುಮಾರ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.