ಯೋಗದಿಂದ ರೋಗ ಮುಕ್ತ ಜೀವನ


Team Udayavani, Jan 17, 2019, 8:21 AM IST

bid-6.jpg

ಭಾಲ್ಕಿ: ಪ್ರತಿನಿತ್ಯ ಸೂರ್ಯೋದಯಕ್ಕಿಂತ ಮುನ್ನ ಎದ್ದು ಯೋಗ ಮಾಡುವುದರಿಂದ ನಿರೋಗಿಯಾಗಿ ಜೀವನ ಸಾಗಿಸಬಹುದು ಎಂದು ಹಿರೇಮಠ ಸಂಸ್ಥಾನದ ಶ್ರೀ ಗುರುಬಸವ ಪಟ್ಟದ್ದೇವರು ಹೇಳಿದರು.

ಪಟ್ಟಣದ ಚನ್ನಬಸವಾಶ್ರಮದಲ್ಲಿ ಬುಧವಾರ ಪತಂಜಲಿ ಯೋಗಪೀಠದ ವತಿಯಿಂದ ಕರ್ನಾಟಕ ರಾಜ್ಯ ಪ್ರಭಾರಿ, ಅಂತಾರಾಷ್ಟ್ರೀಯ ಯೋಗಾಚಾರ್ಯ ಭವರಲಾಲ್‌ ಆರ್ಯ ಅವರಿಂದ ನಡೆಸಲಾಗುತ್ತಿರುವ ವಿರಾಟ ಉಚಿತ ಯೋಗ ಶಿಬಿರ ಉದ್ಘಾಟನಾ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಹಿಂದಿನ ಕಾಲದಲ್ಲಿ ಪತಂಜಲಿ ಮಹರ್ಷಿಗಳು ತಿಳಿಸಿಕೊಟ್ಟ ಅಷ್ಟಾಂಗ ಯೋಗಗಳು ಬರೀ ಕೆಲವು ಋಷಿಮುನಿಗಳಿಗೆ ಮಾತ್ರ ಪರಿಚಿತವಾಗಿದ್ದವು. ಇದನ್ನು ಹರಿದ್ವಾರದ ರಾಮದೇವ ಮಹಾರಾಜರು ಜಗತ್ತಿನ ಪ್ರತಿಯೊಬ್ಬರಿಗೂ ತಲುಪುವ ರೀತಿಯಲ್ಲಿ ಪ್ರಚುರ ಪಡಿಸಿದ್ದಾರೆ. ಅಷ್ಟಾಂಗ ಯೋಗದಲ್ಲಿ ನಿರೋಗಿಯಾಗಿ ಬಾಳಲು ಹಲವಾರು ಪದ್ಧತಿಗಳಿವೆ. ಈ ಎಲ್ಲ ಯೋಗ ಪದ್ಧತಿಗಳನ್ನು ಸೂಕ್ತ ಮಾರ್ಗದರ್ಶನದಲ್ಲಿ ಪ್ರತಿನಿತ್ಯ ಮಾಡುವುದರಿಂದ ರೋಗಗಳಿಂದ ಮುಕ್ತಿ ಹೊಂದಬಹುದು ಎಂದು ಹೇಳಿದರು.

ಪತಂಜಲಿ ಯೋಗ ಸಮಿತಿಯ ಗಣಪತರಾವ ಖೂಬಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಮದೇವಜಿ ಮಹಾರಾಜರು ಯೋಗ ಪದ್ಧತಿಯನ್ನು ಎಲ್ಲರ ಮನೆ ಮನೆಗೆ ತಲುಪುವ ರೀತಿ ಪ್ರಚಾರ ಮಾಡಿದ್ದಾರೆ. ಹೀಗಾಗಿ ಈ ಯೋಗ ಪದ್ಧತಿಯನ್ನು ಅಳವಡಿಸಿಕೊಂಡ ಹಲವಾರು ಜನರು ತಮ್ಮ ಕಷ್ಟಕರವಾದ ರೋಗದಿಂದ ಮುಕ್ತಿ ಹೊಂದಿದ್ದಾರೆ. ಕಾರಣ ಭಾಲ್ಕಿಯ ನಾಗರಿಕರು ಐದು ದಿನಗಳ ಕಾಲ ನಡೆಯುವ ಈ ಯೋಗ ಶಿಬಿರದ ಲಾಭ ಪಡೆಯಬೇಕು ಎಂದು ಸಲಹೆ ನೀಡಿದರು.

ಅಂತಾರಾಷ್ಟ್ರೀಯ ಯೋಗಾಚಾರ್ಯ ಭವರಲಾಲ್‌ ಆರ್ಯ ಅವರು ಸುಮಾರು 1.30 ಗಂಟೆ ಕಾಲ ಸಾರ್ವಜನಿಕರಿಗೆ ಯೋಗ ಪದ್ಧತಿಯನ್ನು ತಿಳಿಸಿಕೊಟ್ಟರು. ಹರಿದೇವ ರುದ್ರಮಣಿ, ಸಾಗರ ಮಾಲಪಾಣಿ, ಶೈಲೇಶ ಮಾಲಪಾಣಿ, ಚನ್ನಬಸವ ಬಳತೆ, ಪ್ರಮುಖರಾದ ಜೈಕಿಶಾನ ಬಿಯಾಣಿ, ಈಶ್ವರ ರುಮ್ಮಾ, ಶಿವಾನಂದ ದಾಡಗೆ, ಗೋರಖನಾಥ ಕುಂಬಾರ ಇದ್ದರು.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.