ಒಳ್ಳೆಯದು-ಕೆಟ್ಟದರ ಸಮ್ಮಿಲನ

Team Udayavani, Jan 18, 2019, 12:30 AM IST

23.jpg

“ಗರ’ ಚಿತ್ರದ ಆಡಿಯೋ ಮತ್ತು ಟ್ರೇಲರ್‌ ಇತ್ತೀಚೆಗೆ ಅದ್ಧೂರಿಯಾಗಿ ಹೊರಬಂದಿದೆ. ನಟಿ ತಾರಾ ಅನುರಾಧ ಮತ್ತು ಗಾಯಕಿ ಮಂಜುಳಾ ಗುರುರಾಜ್‌ ಕವಡೆ  ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಟ ಶಿವರಾಜಕುಮಾರ್‌ ಚಿತ್ರದ ಟ್ರೇಲರ್‌ನ್ನು ಬಿಡುಗಡೆಗೊಳಿಸಿದರು. 

ಬಳಿಕ ಮಾತನಾಡಿದ ಶಿವರಾಜಕುಮಾರ್‌, “ನಾನು ಮೊದಲಿನಿಂದಲೂ ನಟ ಜಾನಿ ಲಿವರ್‌ ಅವರ ಅಭಿಮಾನಿ. ಅವರ ಸಿನಿಮಾಗಳನ್ನು, ಅವರ ಹಾಸ್ಯ ಪ್ರವೃತ್ತಿಯನ್ನು ತುಂಬ ಎಂಜಾಯ್‌ ಮಾಡುತ್ತೇನೆ. ರೆಹಮಾನ್‌ ಸಿಕ್ಕಾಗಲೆಲ್ಲಾ ಯಾವಾಗ ಹೀರೋ ಆಗುತ್ತಿಯಾ ಅಂತ ಕೇಳುತ್ತಿದ್ದೆ. ಸಾಧುಕೋಕಿಲ ನೋಡಿದರೆ ನಗುತರಿಸುತ್ತದೆ. ವೇಣು ಕ್ಯಾಮರ ಕೆಲಸ ಚಿತ್ರದಲ್ಲಿ ಅದ್ಭುತವಾಗಿದೆ. ಚಿತ್ರರಂಗದಲ್ಲಿ ಯಾರನ್ನು ಕೀಳಾಗಿ ನೋಡಬಾರದು. ಇಲ್ಲಿ ಯಾರು ಏನಾಗುತ್ತಾರೆಂದು ಯಾರಿಗೂ ತಿಳಿಯದು. ಹೊಸದಾಗಿ ಬರುವವರನ್ನು ನಾವು ಪ್ರೋತ್ಸಾಹಿಸಬೇಕು. ಸಿನಿಮಾದಲ್ಲಿ ಯಾವುದು ದೊಡ್ಡದು, ಚಿಕ್ಕದು ಅಂತಿರುವುದಿಲ್ಲ. ಪ್ರೇಕ್ಷಕ ಇಷ್ಟಪಟ್ಟರೆ ಚಿತ್ರ ನಮ್ಮನ್ನು ಎಲ್ಲಿಗೋ ತೆಗೆದುಕೊಂಡು ಹೋಗುತ್ತದೆ’ ಎಂದರು.  

ಚಿತ್ರದ ಟೈಟಲ್‌ ಮತ್ತು ಸಬೆjಕ್ಟ್ ಬಗ್ಗೆ ಮಾತನಾಡಿದ ನಿರ್ದೇಶಕ ಕೆ.ಆರ್‌ ಮುರಳಿ ಕೃಷ್ಣ, “ಪ್ರಾರಂಭದಲ್ಲಿ “ಗರ’ ಶೀರ್ಷಿಕೆ ಕೇಳಿದಾಗ ಕೆಲವರು ನಕಾರಾತ್ಮಕ ಸಂದೇಶ ತರುತ್ತದೆಂದು ಹೇಳಿದರು.  

ನೆಗಟಿವ್‌ನಿಂದ ಪಾಸಿಟಿವ್‌ ಹುಡುಕುವ ಮನುಷ್ಯನಾಗಿದ್ದರಿಂದ, ಇದೇ ಸೂಕ್ತವಾದ ಶೀರ್ಷಿಕೆ ಎಂದೆನಿಸಿತು. ನಾವುಗಳು ಸ್ವಾರ್ಥಕ್ಕಾಗಿ ಗರ ಹಾಕುತ್ತೇವೆ. ಆದರೆ ದೇವರು ಹಾಕುವ “ಗರ’ದಿಂದ ಯಾರೂ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಪ್ರತಿಯೊಬ್ಬರಲ್ಲೂ ಎರಡು ಮನಸ್ಸುಗಳು ಇರುತ್ತವೆ. ಒಳ್ಳೆಯವನು ಕೆಟ್ಟವನಾಗಬಹುದು. ಅದೇ ರೀತಿಯಲ್ಲಿ ಕೆಟ್ಟವನೂ ಒಳ್ಳೆಯವನಾಗಬಹುದು. ಕಥೆಯಲ್ಲಿ ಬರುವ ರಂಗಸ್ವಾಮಿ, ಭಗೀರಥ ಎರಡು ಪಾತ್ರಗಳಲ್ಲಿ ಯಾರು ಯಾರ ಮೇಲೆ “ಗರ’ ಹಾಕುತ್ತಾರೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು. ಜಾನಿ ಲಿವರ್‌ ಅವರಂಥ ದೊಡ್ಡ ಕಲಾವಿದರು ಚಿತ್ರದಲ್ಲಿ ನಟಿಸಿದ್ದರಿಂದ ಚಿತ್ರಕ್ಕೆ ತೂಕ ಬಂದಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.  

ಇನ್ನು ತಮ್ಮ ಪಾತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡಿದ ನಟ ಜಾನಿ ಲಿವರ್‌, “ನನಗೆ ಕನ್ನಡದಲ್ಲಿ ಇದೊಂದು ಹೊಸಥರದ ಅನುಭವ ಕೊಟ್ಟ ಸಿನಿಮಾ. ನೋಡುಗರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆಯಿದೆ. ಪ್ರೇಕ್ಷಕರು ಸಿನಿಮಾ ನೋಡಿ ಖುಷಿಪಟ್ಟರೆ ನಮ್ಮ ಪ್ರಯತ್ನ ಸಾರ್ಥಕವಾದಂತೆ’ ಎಂದರು. ಸಮಾರಂಭದಲ್ಲಿ ಹಾಜರಿದ್ದ ನಟ ಸಾಧು ಕೋಕಿಲ, ನಟಿ ನೇಹಾ ಪಾಟೀಲ್‌ ಮತ್ತಿತರರು ಚಿತ್ರದ ಬಗ್ಗೆ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ಹಂಚಿಕೊಂಡರು. 

“ಗರ’ ಚಿತ್ರದ ಹಾಡುಗಳಿಗೆ ಮಂಜುಳಾ ಗುರುರಾಜ್‌ ಪುತ್ರ ಸಾಗರ್‌ ಗುರುರಾಜ್‌ ಸಂಗೀತ ಸಂಯೋಜಿಸಿದ್ದಾರೆ. ಸುಮಾರು ಎರಡು ವರ್ಷಗಳ ಹಿಂದೆಯೇ ಸೆಟ್ಟೇರಿದ್ದ “ಗರ’ ಚಿತ್ರ ಅಂತಿಮವಾಗಿ ತನ್ನೆಲ್ಲ ಕೆಲಸಗಳನ್ನು ಪೂರ್ಣಗೊಳಿಸಿದ್ದು, ಮುಂಬರುವ 
ಮಾರ್ಚ್‌ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ. ಚಿತ್ರದಲ್ಲಿ   ನೇಹಾ ಪಾಟೀಲ್‌, ಪ್ರದೀಪ್‌ ಆರ್ಯನ್‌, ತಬಲನಾಣಿ, ಅವಂತಿಕಾ ಮೋಹನ್‌ ನಟಿಸಿದ್ದಾರೆ. 

ಟಾಪ್ ನ್ಯೂಸ್

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.