ಡಾಲರ್ ಎದುರು ರೂಪಾಯಿ ಕುಸಿತ: ಸೆನ್ಸೆಕ್ಸ್ 106 ಅಂಕ ನಷ್ಟ
Team Udayavani, Jan 18, 2019, 5:16 AM IST
ಮುಂಬಯಿ : ಡಾಲರ್ ಎದುರು ರೂಪಾಯಿಯ ದೌರ್ಬಲ್ಯವನ್ನು ಅನುಸರಿಸಿ ಫಾರ್ಮಾ ಮತ್ತು ಬ್ಯಾಂಕಿಂಗ್ ರಂಗದ ಶೇರುಗಳು ಭರಾಟೆ ಮಾರಾಟವನ್ನು ಕಂಡ ಪ್ರಯುಕ್ತ ಮುಂಬಯಿ ಶೇರು ಪೇಟೆ ಇಂದು ಶುಕ್ರವಾರದ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 80 ಅಂಕಗಳ ಕುಸಿತವನ್ನು ಕಂಡಿತು.
ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್ 106.87 ಅಂಕಗಳ ನಷ್ಟದೊಂದಿಗೆ 36,267.21 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 39.20 ಅಂಕಗಳ ನಷ್ಟದೊಂದಿಗೆ 10,866.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಡಾಲರ್ ಎದುರಿನ ಇಂದಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ 21 ಪೈಸೆಗಳ ಕುಸಿತವನ್ನು ಕಂಡು 71.24 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಇಂದಿನ ಬೆಳಗ್ಗಿನ ವಹಿವಟಿನಲ್ಲಿ ಸನ್ ಫಾರ್ಮಾ, ರಿಲಯನ್ಸ್, ಎಸ್ ಬ್ಯಾಂಕ್, ಎಚ್ ಯು ಎಲ್, ಎಕ್ಸಿಸ್ ಬ್ಯಾಂಕ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.