ಎಚ್.ಕೆ.ಪಾಟೀಲ್ ಅಧಿಕಾರ ಸ್ವೀಕಾರ ಸಮಾರಂಭ ಇಂದು
Team Udayavani, Jan 18, 2019, 6:05 AM IST
ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹಿರಿಯ ಶಾಸಕ ಎಚ್.ಕೆ. ಪಾಟೀಲ್ ಶುಕ್ರವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಮೂಲಕ ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ಒಗ್ಗಟ್ಟಿನ ಮಂತ್ರ ಹೇಳಲಿದ್ದು, ರಾಜ್ಯದ ಜನತೆಗೆ ಸಂದೇಶ ರವಾನಿಸಲು ತೀರ್ಮಾನಿಸಿದ್ದಾರೆ.
ಕಾರ್ಯಕ್ರಮದ ಪೂರ್ವ ಸಿದ್ಧತೆ ಕುರಿತು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ. ಹೀಗಾಗಿ ಎಚ್.ಕೆ. ಪಾಟೀಲ್ ಅವರ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಮತ ಗಳಿಸಿದ್ದರೂ ಹೆಚ್ಚಿನ ಸೀಟು ಗಳಿಸಲು ಸಾಧ್ಯವಾಗಲಿಲ್ಲ ಎಂದರು. ಆಪರೇಷನ್ ಕಮಲ ವಿಚಾರದಲ್ಲಿ ಬಿಜೆಪಿಯವರ ಸ್ಥಿತಿ ನಮಾಜ್ ಮಾಡಲಿಕ್ಕೆ ಹೋಗಿ ಮಸೀದಿಯನ್ನೇ ಮೈಮೇಲೆ ಕೆಡವಿಕೊಂಡಂತಾಗಿದೆ ಎಂದು ಹೇಳಿದರು.
ಕಳೆದ ಬಾರಿ ಮಾಡಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಕಾಂಗ್ರೆಸ್ ಈ ಬಾರಿ ತಳ ಮಟ್ಟದಿಂದಲೇ ಪಕ್ಷವನ್ನು ಬಲಪಡಿಸುವ ಕೆಲಸ ಮಾಡಲಿದೆ. ಪ್ರಚಾರ ಸಮಿತಿ ಅಧ್ಯಕ್ಷರ ಅಧಿಕಾರ ಸ್ವೀಕಾರದ ನಂತರ ಜ.26 ರಿಂದ ಮನೆ ಮನೆಗೂ ಜನ ಸಂಪರ್ಕ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ. ಈ ಅಭಿಯಾನದಲ್ಲಿ ಬಿಜೆಪಿಯ ನಾಲ್ಕೂವರೆ ವರ್ಷದ ಜನ ವಿರೋಧಿ ಆಡಳಿತ ಹಾಗೂ ಯುಪಿಎ ಅವಧಿಯಲ್ಲಿ ಆಗಿರುವ ಸಾಧನೆಗಳ ಬಗ್ಗೆ ಜನತೆಗೆ ತಲುಪಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ, ಬಿಜೆಪಿಯವರು ಹತ್ತು ಪೈಸೆಯ ಕೆಲಸ ಮಾಡಿ ಒಂದು ರೂಪಾಯಿ ಪ್ರಚಾರ ಪಡೆಯುತ್ತಾರೆ. ಕಾಂಗ್ರೆಸ್ ಕೆಲಸ ಮಾಡಿದ್ದರೂ ಪ್ರಚಾರ ದೊರೆಯುವುದಿಲ್ಲ. ಹೀಗಾಗಿ ಈ ಬಾರಿ ವ್ಯವಸ್ಥಿತವಾಗಿ ಚುನಾವಣೆ ಪ್ರಚಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಮಾಜಿ ಸಚಿವ ಎ.ಎಂ.ಹಿಂಡಸಗೇರಿ, ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ, ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಮಾಜಿ ಮೇಯರ್ ರಾಮಚಂದ್ರಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.