ನಿರುದ್ಯೋಗಿಗಳಿಗೆ ಮೇಳ ಆಸರೆ
Team Udayavani, Jan 18, 2019, 9:40 AM IST
ಬಸವಕಲ್ಯಾಣ: ದೊಡ್ಡ-ದೊಡ್ಡ ಕಂಪನಿಗಳ ಪ್ರಭಾವದಿಂದ ಗ್ರಾಮೀಣ ಪ್ರದೇಶದ ಮೂಲ ಕಸುಬುಗಳು ನಿಂತು ಹೋಗಿವೆ. ಇದರಿಂದ ದಿನೇ ದಿನೇ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಯುವಕರ ಬದುಕಿಗೆ ಆಸರೆಯಾಗಲು ಉದ್ಯೋಗ ಮೇಳ ಹಮ್ಮಿಕೊಂಡಿರುವುದು ಸಂತೋಷದ ವಿಷಯವಾಗಿದೆ ಎಂದು ಬಸವ ಮಹಾಮನೆ ಅಧ್ಯಕ್ಷ ಶ್ರೀ ಸಿದ್ಧರಾಮ ಬೆಲ್ದಾಳ ಶರಣರು ಹೇಳಿದರು.
ನಗರದ ಮಾತೆ ಮಹಾದೇವಿ ಸಭಾಂಗಣದಲ್ಲಿ ಗುರುವಾರ ಡಾ| ಬಿ.ಆರ್.ಅಂಬೇಡ್ಕರ್ ಸೋಸಿಯಲ್ ವೆಲ್ಫೇರ್ ಟ್ರಸ್ಟ್ ಬೆಂಗಳೂರು, ದಿ.ನಡ್ಜ್ ಫೌಂಡೇಶನ್ (ಗುರುಕುಲ) ಸಂಯುಕ್ತಾಶ್ರಯದಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದಿನ ಕಾಲದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕಂಬಾರಿಕೆ, ಕುಂಬಾರಿಕೆ, ನೇಕಾರ, ಬಡಿಗತನ ಸೇರಿದಂತೆ ಸಾಕಷ್ಟು ಕಸುಬುದಾರರು ಕೆಲಸ ಮಾಡುತ್ತಿದ್ದರು. ಆದರೆ ನೂತನ ತಂತ್ರಜ್ಞಾನ ಆವಿಷ್ಕಾರದಿಂದ ಎಲ್ಲ ಕೆಲಸಗಳು ಮುಳಗುವ ಹಂತಕ್ಕೆ ಬಂದು ತಲುಪುವಂತಾಗಿ, ದೇಶದ ತುಂಬಾ ನಿರುದ್ಯೋಗ ಶಾಪವಾಗಿ ಪರಿಣಮಿಸಿದೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ನಿರುದ್ಯೋಗಿಗಳು ಈ ಮೇಳದ ಸದುಪಯೋಗ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ದಿ.ನಡ್ಜ್ ಫೌಂಡೇಶನ್ ಮುಖ್ಯಸ್ಥ ವಿನಾಯಕ, ಉದ್ಯೋಗ ಮೇಳದ ಉದ್ದೇಶ ಮತ್ತು ಮಹತ್ವ ಕುರಿತು ತಿಳಿಸಿದರು.
ತಾಪಂ ಇಒ ಮಡೋಳಪ್ಪಾ ಪಿ.ಎಸ್. ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಪರಿಶ್ರಮ ಪಟ್ಟಾಗ ಮಾತ್ರ ನಾವು ಏನಾದರೂ ಸಾಧಿಸಲು ಸಾಧ್ಯ. ಇಂತಹ ಸಂದರ್ಭದಲ್ಲಿ ನಿಮ್ಮ ಮನೆ ಬಾಗಿಲಿಗೆ ತರಬೇತಿ ಜೊತೆ ಉದ್ಯೋಗ ಒದಗಿಸುವ ಸೌಭಾಗ್ಯ ಕೂಡಿ ಬಂದಿದೆ. ವಿದ್ಯಾರ್ಥಿಗಳು ಹಾಗೂ ಯುವಕರು ಇದರ ಸದುಪಯೋಗ ಪಡೆಯಬೇಕು ಎಂದು ಸಲಹೆ ನೀಡಿದರು.
ಬಸವ ಮಹಾಮನೆ, ಅಲ್ಲಮಪ್ರಭು ಶೂನ್ಯಪೀಠದ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು. ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಸಂಜು ಗಾಯಕವಾಡ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೊಡ, ತಹಶೀಲ್ದಾರ್ ಜಗನ್ನಾಥರೆಡ್ಡಿ, ಚಲನಚಿತ್ರ ನಿರ್ಮಾಕ ಬಸವರಾಜ ಹಿರೇಮಠ, ಸಂಚಾರಿ ಪೊಲೀಸ್ ಠಾಣೆ ಪಿಎಸ್‌ಐ ಜೈಶ್ರೀ ವಿ.ಹೂಡಲ್, ನಾಡ ತಹಶೀಲ್ದಾರ್ ಶಿವಾನಂದ ಮೇತ್ರೆ, ದಿಲೀಪ ಸಿಂಧೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.