ರಂಗಸಿರಿಯಿಂದ “ಸುಧನ್ವ ಮೋಕ್ಷ’ ಯಕ್ಷಗಾನ
Team Udayavani, Jan 19, 2019, 12:30 AM IST
ಬದಿಯಡ್ಕ: ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಉತ್ಸವದ ಅಂಗವಾಗಿ ಬದಿಯಡ್ಕದ ರಂಗಸಿರಿ ಸಾಂಸ್ಕೃತಿಕ ವೇದಿಕೆಯ ವಿದ್ಯಾರ್ಥಿಗಳಿಂದ ಯಕ್ಷಗಾನ ನಡೆಯಿತು.
ಸುಧನ್ವ ಮೋಕ್ಷ ಎಂಬ ಕಥಾ ಭಾಗವನ್ನು ಸೂರ್ಯನಾರಾಯಣ ಪದಕಣ್ಣಾಯ ಅವರ ನಿರ್ದೇಶನದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದರು.
ಮಲ್ಲಿಕಾ ಕಲಾವೃಂದವು ಕಾರ್ಯಕ್ರಮವನ್ನು ಆಯೋಜಿಸಿತ್ತು. ಸಂಸ್ಥೆಗೆ ಅವಕಾಶ ನೀಡಿದ್ದಕ್ಕಾಗಿ ಶ್ರೀಶ ಕುಮಾರ ಪಂಜಿತ್ತಡ್ಕ ಅವರು ವಂದಿಸಿದರು. ಕಲಾವಿದರನ್ನು ಗೌರವಿಸಿದ ಸುಧಾಕರ ರಾವ್ ಪೇಜಾವರ ಅವರು ರಂಗಸಿರಿಯ ಕಾರ್ಯವನ್ನು ಕೊಂಡಾಡಿದರು. ಕಾಸರಗೋಡು ಇಂದಿಗೂ ಭಾವನಾತ್ಮಕವಾಗಿ ಕರ್ನಾಟಕದ ಭಾಗವಾಗಿದೆ. ಭೌಗೋಳಿಕವಾಗಿ ಕೇರಳದಲ್ಲಿದ್ದರೂ ಕನ್ನಡ ಸಂಸ್ಕೃತಿಯ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ರಂಗಸಿರಿಯ ಚಟುವಟಿಕೆಗಳು ಶ್ಲಾಘನೀಯ ಎಂದರು.
ಹಂಸಧ್ವಜನಾಗಿ ಪ್ರಭಾವತಿ ಕೆದಿಲಾಯ ಪುಂಡೂರು, ಸುಧನ್ವನಾಗಿ ವಿದ್ಯಾ ಕುಂಟಿಕಾನಮಠ, ಪ್ರಭಾವತಿಯಾಗಿ ಸುಪ್ರೀತಾ ಸುಧೀರ್ ಮುಳ್ಳೇರಿಯ, ಅರ್ಜುನನಾಗಿ ಶ್ರೀಶ ಕುಮಾರ ಪಂಜಿತ್ತಡ್ಕ, ಶ್ರೀಕೃಷ್ಣನಾಗಿ ಅಮಿತ ಅವರು ಪಾತ್ರ ಅಭಿನಯಿಸಿದರು.
ಭಾಗವತರಾಗಿ ವಾಸುದೇವ ಕಲ್ಲೂರಾಯ ಮಧೂರು, ಚೆಂಡೆಯಲ್ಲಿ ಕೃಷ್ಣ ರಾಜ ಭಟ್ ನಂದಳಿಕೆ, ಮದ್ದಳೆಯಲ್ಲಿ ಸೂರ್ಯನಾರಾಯಣ ಪದಕಣ್ಣಾಯ, ಚಕ್ರತಾಳದಲ್ಲಿ ಸುಧೀರ್ ಕುಮಾರ್ ರೈ ಮುಳ್ಳೇರಿಯ ಅವರು ಮುಮ್ಮೇಳಕ್ಕೆ ಪೂರಕವಾಗಿ ಹಿಮ್ಮೇಳ ನೀಡಿದರು. ಮೋಹನ ಕೊಕ್ಕರ್ಣೆ ನೇಪಥ್ಯದಲ್ಲಿ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.