ಸ್ವಾಯತ್ತ ಆರೋಗ್ಯ ಸಂಸ್ಥೆಗಳಿಗೆ ಹೆಚ್ಚು ಅನುದಾನ


Team Udayavani, Jan 19, 2019, 6:12 AM IST

swayatta.jpg

ಬೆಂಗಳೂರು: ಇಂದಿರಾಗಾಂ ಧಿ ಮಕ್ಕಳ ಆರೋಗ್ಯ ಸಂಸ್ಥೆ, ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆ, ಸಂಜಯ್‌ಗಾಂ ಧಿ ತುರ್ತು ಚಿಕಿತ್ಸಾ ಕೇಂದ್ರ ಹಾಗೂ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಗಳಿಗೆ ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡುವ ಮೂಲಕ ಮೇಲ್ದರ್ಜೆಗೇರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಸ್ಥಿಮಜ್ಜೆ ಕಸಿ ಚಿಕಿತ್ಸಾ ಘಟಕದ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಜನರಿಗೆ ಉತ್ತಮ ವೈದ್ಯಕೀಯ ಸೇವೆ ನೀಡಲು ಸ್ವಾಯತ್ತ ಸಂಸ್ಥೆಗಳಿಗೆ ಇನ್ನಷ್ಟು ಬಲ ತುಂಬುವ ನಿಟ್ಟಿನಲ್ಲಿ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಹೇಳಿದರು.

ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆ ಮಾದರಿಯಲ್ಲಿ ಉತ್ತರ ಕರ್ನಾಟಕದ ವಿವಿಧೆಡೆ ಜಯದೇವ ಹೃದ್ರೋಗ ಸಂಸ್ಥೆ ಸ್ಥಾಪನೆಗೆ ಬೇಡಿಕೆ ಇದೆ. ಈ ಕುರಿತು ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.

ಕ್ಯಾನ್ಸರ್‌ನಿಂದ ಬಳಲುತ್ತಿರುವ ಬಡವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಶುಲ್ಕ ನೀಡಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲ. ಕ್ಯಾನ್ಸರ್‌ನಿಂದ ಬಳಲುತ್ತಿರುವ ಅನೇಕ ಬಡ ಮಕ್ಕಳು ಹಾಗೂ ಅವರ ಪೋಷಕರು ಅಸ್ಥಿಮಜ್ಜೆ ಚಿಕಿತ್ಸೆಗಾಗಿ ನೆರವು ಕೋರಿ ಜನತಾದರ್ಶನ ವೇಳೆ ನನ್ನ ಬಳಿ ಬರುತ್ತಿದ್ದಾರೆ. ಅಂತಹ ಬಡವರಿಗೆ ಉಚಿತವಾಗಿ ಅಸ್ಥಿಮಜ್ಜೆ ಚಿಕಿತ್ಸೆ ದೊರೆಯಲಿ ಎಂಬ ಉದ್ದೇಶದಿಂದ 12 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿಯಲ್ಲಿ ದೇಶದಲ್ಲೇ ಅತೀ ದೊಡ್ಡ “ಅಸ್ತಿಮಜ್ಜೆ ಚಿಕಿತ್ಸಾ ಘಟಕ’ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.

ಕಳೆದ ಏಳು ತಿಂಗಳಲ್ಲಿ ಕಿದ್ವಾಯಿ ಸಂಸ್ಥೆಗೆ ಮೂರು ಬಾರಿ ಭೇಟಿ ನೀಡಿದ್ದೇನೆ. ಸಂಸ್ಥೆ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿದೆ. ಆಸ್ಪತ್ರೆಗೆ ಸಾಕಷ್ಟು ದಾನಿಗಳು ನೆರವು ನೀಡುತ್ತಿದ್ದಾರೆ. ಈಗಾಗಲೇ ಮೂರು ಅಂತಸ್ತಿನ ಕಟ್ಟಡ ನಿರ್ಮಿಸಿಕೊಟ್ಟಿರುವ ಶಿಫಾನಿ ಹಾಗೂ ದಾಗ ಕುಟುಂಬ ಇನ್ನೂ ಮೂರು ಅಂತಸ್ಥಿತ ಕಟ್ಟಡ ನಿರ್ಮಿಸಿಕೊಡಲು ಮುಂದೆ ಬಂದಿದೆ. ಇದರೊಂದಿಗೆ ಸಂಸ್ಥೆಯಲ್ಲಿನ ಸಿಬ್ಬಂದಿ ಕೊರತೆ ನೀಗಿಸಲು ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ನಿರ್ದೇಶಕ ಸಿ.ರಾಮಚಂದ್ರ ಮಾತನಾಡಿ, 15 ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ಆಸ್ಪತ್ರೆಯ ಜಿಂದಾಲ್‌ ಬ್ಲಾಕ್‌ನ ಮೂರನೇ ಮಹಡಿ ಮೇಲಿರುವ ಸ್ಥಳದಲ್ಲಿ ನೂತನ ಘಟಕ ನಿರ್ಮಾಣ ಮಾಡಲಾಗುತ್ತಿದೆ. ಘಟಕವು 20 ಪ್ರತ್ಯೇಕ ಸುಸಜ್ಜಿತ ಕೊಠಡಿಗಳು, ಮೂರು ಕಿರು ಶಸ್ತ್ರಚಿಕಿತ್ಸಾ ಘಟಕಗಳು, ವೈದ್ಯರ ವಿಶ್ರಾಂತಿ ಕೊಠಡಿ ಹೊಂದಿರಲಿದ್ದು,

2.3 ಕೋಟಿ ರೂ. ಮೌಲ್ಯದ ಯಂತ್ರೋಪಕರಣಗಳನ್ನು ಇಲ್ಲಿ ಅಳವಡಿಸಲಾಗುವುದು. ಆರು ತಿಂಗಳೊಳಗೆ ಕೇಂದ್ರ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು. ವೈದ್ಯಕೀಯ ಶಿಕ್ಷಣ ಸಚಿವ ಇ.ತುಕಾರಾಂ, ಮೇಯರ್‌ ಗಂಗಾಂಬಿಕೆ, ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌, ಡಾ.ಕೆ.ಬಿ.ಲಿಂಗೇಗೌಡ ಉಪಸ್ಥಿತರಿದ್ದರು.

ಏನಿದು ಅಸ್ಥಿಮಜ್ಜೆ ಕಸಿ ಚಿಕಿತ್ಸೆ?: ಮೂಳೆಗಳ ಮಧ್ಯದಲ್ಲಿನ ಸ್ಪಂಜಿನಂತಹ ಭಾಗದಲ್ಲಿರುವ ಅಂಗಾಂಶವೇ ಅಸ್ಥಿಮಜ್ಜೆ. ಇದರಲ್ಲಿ ನಿತ್ಯ ಸುಮಾರು 200 ಕೋಟಿಯಷ್ಟು ಕೆಂಪು, ಬಿಳಿ ರಕ್ತ ಕಣಗಳು ಉತ್ಪಾದನೆಯಾಗುತ್ತವೆ. ಕೆಂಪು ರಕ್ತ ಕಣಗಳು ಜೀವಕೋಶಗಳಿಗೆ ಆಮ್ಲಜನಕ ಸರಬರಾಜು ಮಾಡಿದರೆ, ಬಿಳಿ ರಕ್ತ ಕಣಗಳು ರೋಗಾಣುಗಳನ್ನು ಸೆದೆಬಡಿಯುತ್ತವೆ. ಇವುಗಳನ್ನು ದೇಹದ ಒಂದು ಭಾಗದಿಂದ ಮತ್ತೂಂದು ಭಾಗಕ್ಕೆ ಅಥವಾ ವ್ಯಕ್ತಿಯಿಂದ ವ್ಯಕ್ತಿಗೆ ಕಸಿ ಮಾಡುವುದೇ ಅಸ್ಥಿಮಜ್ಜೆ ಕಸಿ ಚಿಕಿತ್ಸೆ. 

ಈಗ ನಿರ್ಮಾಣವಾಗುತ್ತಿರುವ ಚಿಕಿತ್ಸಾ ಘಟಕದಲ್ಲಿ ವೈದ್ಯರು ಆರೋಗ್ಯವಂತ ವ್ಯಕ್ತಿಯ ದೇಹದಿಂದ ಅಸ್ಥಿಮಜ್ಜೆಯನ್ನು ತೆಗೆದು, ಲ್ಯುಕೇಮಿಯಾ, ಲಿಂಫೋಮೊ ಮತ್ತು ಅನೀಮಿಯಾದಂತಹ ರಕ್ತದ ಕ್ಯಾನ್ಸರ್‌ ಹೊಂದಿರುವ ವ್ಯಕ್ತಿಯ ದೇಹದ ಮೂಳೆಗಳ ನಾಳಗಳಲ್ಲಿ ತುಂಬುತ್ತಾರೆ. ವಿಕಿರಣ ಚಿಕಿತ್ಸೆ ಬಳಿಕವೂ ಕ್ಯಾನ್ಸರ್‌ ಅಂಶ ಉಳಿದಿದ್ದರೆ, ಹೊಸ ಮಜ್ಜೆ ತುಂಬಿದ ಬಳಿಕ ಅದು ವಾಸಿಯಾಗುತ್ತದೆ.

ಅಸ್ಥಿಮಜ್ಜೆ ಕಸಿ ಚಿಕಿತ್ಸೆಯಲ್ಲಿ ಎರಡು ವಿಧಗಳಿವೆ. ರೋಗಿಯಿಂದಲೇ ಮಜ್ಜೆ ತೆಗೆದು ಕಸಿ ಮಾಡುವುದನ್ನು ಅಟೊಲೊಗೊಸ್‌ಎಂದು, ಆರೋಗ್ಯವಂತ ವ್ಯಕ್ತಿಯಿಂದ ಮಜ್ಜೆ ತೆಗೆದು ರೋಗಿಗೆ ಕಸಿ ಮಾಡುವ ವಿಧಾನವನ್ನು ಅಲೋಜಿನಿಕ್‌ ಎಂದು ಕರೆಯಲಾಗುತ್ತದೆ. ಈ ಎರಡೂ ಕಸಿ ಚಿಕಿತ್ಸೆಗಳು ನೀತನ ಘಟಕದಲ್ಲಿ ಲಭ್ಯವಾಗಲಿವೆ. ಈ ಮೂಲಕ ಖಾಸಗಿ ಆಸ್ಪತ್ರೆಗಳಲ್ಲಿ 35 ಲಕ್ಷ ರೂ. ಶುಲ್ಕ ವಿಧಿಸಲಾಗುವ ಅಸ್ಥಿಮಜ್ಜೆ ಕಸಿ ಚಿಕಿತ್ಸೆ, ಕಿದ್ವಾಯಿಯಲ್ಲಿ ಬಿಪಿಎಲ್‌ ಕುಟುಂಬದ ರೋಗಿಗಳಿಗೆ ಉಚಿತವಾಗಿ ಹಾಗೂ ಇತರರಿಗೆ ಖಾಸಗಿ ಆಸ್ಪತ್ರೆ ಶುಲ್ಕದ ಅರ್ಧ ವೆಚ್ಚದಲ್ಲಿ ದೊರೆಯಲಿದೆ.

ಕಸಿ ಚಿಕಿತ್ಸಾ ಕೇಂದ್ರ ನಿರ್ಮಾಣವಾದ ಬಳಿಕ ನುರಿತ ತಜ್ಞರ ಅಗತ್ಯವಿರುತ್ತದೆ. ಇದಕ್ಕಾಗಿ ಇಬ್ಬರು ನುರಿತ ತಜ್ಞರು, ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಇಬ್ಬರು ಹಿರಿಯ ಸ್ಥಾನೀಯ ವೈದ್ಯಾಧಿಕಾರಿಗಳು, ತಂತ್ರಜ್ಞರು ಹಾಗೂ ರೋಗಶಾಸ್ತ್ರಜ್ಞರನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಸಿ.ರಾಮಚಂದ್ರ ತಿಳಿಸಿದರು.

ಸಿದ್ಧಗಂಗಾ ಶ್ರೀಗಳಿಗೆ “ಭಾರತರತ್ನ’ ನೀಡಲು ಪ್ರಧಾನಿಗೆ ಮನವಿ: ಸದ್ಯದ ಮಾಹಿತಿ ಪ್ರಕಾರ ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ತುಮಕೂರಿನ ವೈದ್ಯರ ಜತೆಗೆ ಬೆಂಗಳೂರಿನ ತಜ್ಞ ವೈದ್ಯರ ತಂಡ ಕೂಡ ಪರೀಕ್ಷೆ ನಡೆಸಿದೆ. ಶ್ರೀಗಳು ಪವಾಡ ಪುರುಷರು. ಶಿವಭಕ್ತರಾದ ಅವರಿಗೆ ಇಚ್ಛಾ ಮರಣ ಹೊಂದುವ ಶಕ್ತಿ ಇದೆ. ಅವರ ಆರೋಗ್ಯ ಚೇತರಿಕೆಗಾಗಿ ಭಗವಂತನಲ್ಲಿ ಬೇಡಿಕೊಳ್ಳುವೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

2007ರಲ್ಲಿ ಎಪಿಜೆ ಅಬ್ದುಲ್‌ ಕಲಾಂ ಅವರು ರಾಷ್ಟ್ರಪತಿಯಾಗಿದ್ದಾಗ ಶ್ರೀಗಳಿಗೆ ಭಾರತರತ್ನ ನೀಡಬೇಕೆಂದು ಮನವಿ ಮಾಡಿದ್ದೆ. ಆ ನಂತರವೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಪತ್ರ ಬರೆದಿದ್ದೇನೆ. ಈಗ ಮತ್ತೂಮ್ಮೆ ಕೇಂದ್ರಕ್ಕೆ ಪತ್ರ ಬರೆಯುವೆ. ಅಗತ್ಯ ಬಿದ್ದರೆ, ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

8-bng

Bengaluru: ಕದ್ದ ಮೊಬೈಲ್‌ ಕೊರಿಯರ್‌ ಮೂಲಕ ಕೇರಳಕ್ಕೆ ರವಾನೆ!

7-bng

Bengaluru: ಉದ್ಯೋಗ, ಹೂಡಿಕೆ ನೆಪದಲ್ಲಿ ಜನರಿಗೆ ವಂಚನೆ: ನಾಲ್ವರ ಸೆರೆ

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

8-bng

Bengaluru: ಕದ್ದ ಮೊಬೈಲ್‌ ಕೊರಿಯರ್‌ ಮೂಲಕ ಕೇರಳಕ್ಕೆ ರವಾನೆ!

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.